ಬ್ರೇಕಿಂಗ್ ನ್ಯೂಸ್
04-05-25 11:26 pm Mangalore Correspondent ಕರಾವಳಿ
ಮಂಗಳೂರು, ಮೇ 4 : ಹಿಂದು ಸಂಘಟನೆ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್, ಸಾಯುವುದಕ್ಕೆ ರೆಡಿಯಾಗಿರು ಎಂಬುದಾಗಿ ಬೆದರಿಕೆ ಹಾಕಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ನಡೆದ ಬಳಿಕ ಜಾಲತಾಣದಲ್ಲಿ ಹಲವು ರೀತಿಯ ಕೋಮು ಪ್ರಚೋದಕ ಸಂದೇಶಗಳು ಹಿಂದು- ಮುಸ್ಲಿಮರನ್ನು ಎತ್ತಿ ಕಟ್ಟುವ ರೀತಿ ರವಾನೆಯಾಗಿವೆ. ಈ ಬಗ್ಗೆ 15ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದ್ದು, ಇದರ ಬೆನ್ನಲ್ಲೇ ಹಿಂದು ಸಂಘಟನೆ ಮುಖಂಡರಾದ ಶರಣ್ ಪಂಪ್ವೆಲ್, ಭರತ್ ಕುಮ್ಡೇಲು ವಿರುದ್ಧ ಜೀವ ಬೆದರಿಕೆ ಹಾಕಲಾಗಿದೆ. ಅಲ್ಲದೆ, ಮುಂದಿನ ಟಾರ್ಗೆಟ್ ನೀವೇ, ಸಾಯುವುದಕ್ಕೆ ರೆಡಿಯಾಗಿ ಎಂದೂ ಬೆದರಿಕೆ ಹಾಕಲಾಗಿದೆ. ಶರಣ್ ಪಂಪ್ವೆಲ್ ವಿರುದ್ಧ ಟಿವಿ ಚಾನೆಲ್ ಒಂದರ ಯೂಟ್ಯೂಬ್ ಲೈವ್ ನಲ್ಲಿ ಬೆದರಿಕೆ ಹಾಕುವ ರೀತಿ ಕಮೆಂಟ್ ಹಾಕಲಾಗಿದೆ.
ಈ ರೀತಿಯ ಬರಹಗಳಿದ್ದ ಪೋಸ್ಟ್ ಗಳು ಜಾಲತಾಣದಲ್ಲಿ ವೈರಲ್ ಆಗಿದ್ದು, ಹಿಂದು ಸಂಘಟನೆ ಕಾರ್ಯಕರ್ತರಿಂದ ಭಾರೀ ಆಕ್ರೋಶವೂ ಕೇಳಿಬಂದಿದೆ. ಬೇರೆ ಕೋಮು ಪ್ರಚೋದಕ ಬರಹಗಳ ಬಗ್ಗೆ ಪೊಲೀಸರು ಸುಮೋಟೊ ಕೇಸು ದಾಖಲಿಸಿದ್ದರು. ಶರಣ್ ಮತ್ತು ಭರತ್ ವಿರುದ್ಧ ಜೀವ ಬೆದರಿಕೆ ಹಾಕಿ ಮುಹೂರ್ತ ಫಿಕ್ಸ್ ಮಾಡಿದ್ದೇವೆ ಎನ್ನುವ ವಿಚಾರದ ಬಗ್ಗೆ ಸ್ವತಃ ಕೇಸು ದಾಖಲಿಸಿರಲಿಲ್ಲ. ಪೊಲೀಸರು ದೂರು ಕೊಡಲು ತಿಳಿಸಿದ್ದರಿಂದ ದೂರು ಕೊಟ್ಟಿದ್ದೇನೆ. ಆದರೆ ಮುಸ್ಲಿಮರಿಗಾದರೆ ಇವರೇ ಸುಮೊಟೋ ಕೇಸು ದಾಖಲು ಮಾಡುತ್ತಾರೆ. ನಮ್ಮ ಬಗ್ಗೆ ಯಾಕೆ ತಾರತಮ್ಯ ಮಾಡುತ್ತಾರೆ ಎಂದು ಶರಣ್ ಪಂಪ್ವೆಲ್ ಪ್ರತಿಕ್ರಿಯಿಸಿದ್ದಾರೆ.
FIR Filed in Mangalore Over Death Threats to Sharan Pumpwell on Social Media after the murder of Suhas Shetty in bajpe.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm