ಬ್ರೇಕಿಂಗ್ ನ್ಯೂಸ್
06-05-25 06:17 pm Mangalore Correspondent ಕರಾವಳಿ
ಮಂಗಳೂರು, ಮೇ 6 : ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ BJP ನಾಯಕರ ಗಮನಕ್ಕೆ. ಇದು ಇತ್ತೀಚೆಗೆ ಹತ್ಯೆಯಾದ ಸುಹಾಶ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿ ಎನ್ನುವ ಮೂಲಕ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಇತ್ತೀಚೆಗೆ ಕೊಲೆಯಾದ ಸುಹಾಸ್ ಶೆಟ್ಟಿ ವಿರುದ್ಧ ಬಿಜೆಪಿ ಸರ್ಕಾರ ಇದ್ದಾಗ ಹೊರಡಿಸಿದ್ದ ರೌಡಿಶೀಟ್ ಆದೇಶದ ಪ್ರತಿಯನ್ನು ಟ್ವಿಟರ್ ನಲ್ಲಿ ಹಾಕಿದ್ದಾರೆ.
ಸುಹಾಸ್ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು ಬಿಜೆಪಿ ಸರ್ಕಾರ. ಗೃಹ ಸಚಿವರಾಗಿದ್ದ ಪುಣ್ಯಾತ್ಮ ಬಸವರಾಜ್ ಬೊಮ್ಮಾಯಿ. ಇಂದು ಸುಹಾಸ್ನನ್ನು ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು.?
ಕರಾವಳಿಯನ್ನು ಕೋಮು ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರೇ ಕ್ರಿಮಿನಲ್ಗಳ ನಿಜವಾದ ಸೃಷ್ಟಿಕರ್ತರು. ಇವರು ಅಧಿಕಾರದಲ್ಲಿದ್ದಾಗ ಕ್ರಿಮಿನಲ್ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿ ಶೀಟರ್ ತೆರೆಯುತ್ತಾರೆ. ಹೆಣ ಬಿದ್ದ ಕೂಡಲೆ ಅದೇ ಕ್ರಿಮಿನಲ್ಗಳನ್ನು ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ ಮಾಡುತ್ತಾರೆ.
ಸುಹಾಸ್ ಹತ್ಯೆ ನಂತರ ಕೂಗುಮಾರಿಗಳಂತೆ ಅರಚುತ್ತಿರುವ ಬಿಜೆಪಿ ನಾಯಕರ ಯಾರ ಮಕ್ಕಳಾದರೂ ಧರ್ಮದ ಅಮಲಿನಲ್ಲಿ ಬೀದಿ ಕಾಳಗ ಮಾಡುತ್ತಿದ್ದಾರೆಯೆ.? ಅಥವಾ ಧರ್ಮಕ್ಕಾಗಿ ಬಡಿದಾಡುತ್ತಿದ್ದಾರೆಯೆ.? ಬಿಜೆಪಿ ನಾಯಕರ ಧರ್ಮಾಂಧತೆಗೆ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು. ಇದು ಸತ್ಯವಲ್ಲವೇ..?
ಬಿಜೆಪಿಯವರ ಕೆಟ್ಟ ರಾಜಕೀಯಕ್ಕೆ ಕರಾವಳಿಯಲ್ಲಿ ಎಷ್ಟೋ ಜನರ ಬಲಿಯಾಗಿದೆ. ಎಷ್ಟೋ ಮನೆಗಳ ದೀಪ ಆರಿ ಹೋಗಿದೆ. ಇಷ್ಟಾದರೂ ಇವರ ರಕ್ತದಾಹ ನಿಂತಿಲ್ಲ. ಕರಾವಳಿಯಲ್ಲಿ ಇನ್ನಷ್ಟು ಹೆಣ ಬೀಳಬೇಕು ಎನ್ನುವ ಉದ್ದೇಶದಿಂದ ದುಷ್ಟ ರಾಜಕಾರಣ ಮಾಡುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜನ ಪ್ರಜ್ಞಾವಂತಿಕೆಯ ಜೊತೆಗೆ ಸೂಕ್ಷ್ಮತೆಯನ್ನು ಅರಿತುಕೊಂಡವರು. ಇನ್ನಾದರೂ ಕರಾವಳಿಯ ಜನ ಬಿಜೆಪಿಯ ಹುನ್ನಾರ ಅರಿಯಬೇಕಿದೆ. ಇಲ್ಲದಿದ್ದರೆ ಬಿಜೆಪಿಯವರ ಕೆಟ್ಟ ರಾಜಕಾರಣಕ್ಕೆ ಜಿಲ್ಲೆಯ ನೆಮ್ಮದಿಯೇ ಹಾಳಾಗಲಿದೆ ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ.
The political atmosphere heated up on Monday as the district's Minister-in-Charge launched a sharp attack on the BJP, accusing it of criminalizing youth and branding innocent individuals as rowdies for political gain.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm