ಬ್ರೇಕಿಂಗ್ ನ್ಯೂಸ್
07-05-25 03:36 pm Mangalore Correspondent ಕರಾವಳಿ
ಮಂಗಳೂರು, ಮೇ 7 : "ಆಪರೇಷನ್ ಸಿಂಧೂರ್ ಕೇವಲ ಭಯೋತ್ಪಾದಕರ ವಿರುದ್ದ ಕಾರ್ಯಾಚರಣೆ ಮಾತ್ರ ಆಗಿರಲಿಲ್ಲ, ಬದಲಾಗಿ ನವ ಭಾರತದ ಅಪ್ರತಿಮ ಶಕ್ತಿಯನ್ನು ಜಗತ್ತಿಗೆ ಸಾರಿದ ಐತಿಹಾಸಿಕ ದಿನ" ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಬಣ್ಣಿಸಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ಮಧ್ಯರಾತ್ರಿ ನಡೆಸಿದ ವೈಮಾನಿಕ ದಾಳಿಯ ಕುರಿತಂತೆ ಪ್ರತಿಕ್ರಿಯಿಸಿರುವ ಸಂಸದರು, ’ಸಿಂಧೂರ ’ ಎನ್ನುವುದು ರಾಷ್ಟ್ರದ ವೀರತ್ವ, ಧೈರ್ಯ ಮತ್ತು ಸಂಕಲ್ಪದ ಪ್ರತೀಕವಾಗಿ ಹೊರಹೊಮ್ಮಿದೆ. ನಮ್ಮ ಸೇನೆಯ ವ್ಯವಸ್ಥಿತ ಹಾಗೂ ಕೆಚ್ಚೆದೆಯ ಕಾರ್ಯಾಚರಣೆಯ ಮೂಲಕ ಭಾರತದ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿಕೊಟ್ಟಿದೆ’ ಎಂದು ಹೇಳಿದ್ದಾರೆ.

ಹೊಸ ಭಾರತವನ್ನು ಯಾರಾದರೂ ಕೆಣಕಿದರೆ, ನಮ್ಮ ಉತ್ತರವು ಇತಿಹಾಸವನ್ನೇ ನಡುಗಿಸುವಂತಹ ಶಕ್ತಿಯನ್ನು ಹೊಂದಿರುತ್ತದೆ. ಕೇವಲ 25 ನಿಮಿಷಗಳಲ್ಲಿ ನಡೆದ ಪರಿಣಾಮಕಾರಿ ಕಾರ್ಯಾಚರಣೆಯಲ್ಲಿ ನಮ್ಮ ಸೇನೆಯು ಭಯೋತ್ಪಾದಕ ಅಜ್ಮಲ್ ಕಸಬ್ನ ತರಬೇತಿ ಕೇಂದ್ರ ಸೇರಿ 9 ಪ್ರದೇಶಗಳಲ್ಲಿನ 21 ಉಗ್ರರ ಅಡಗುತಾಣಗಳನ್ನು ಕ್ಷಿಪಣಿ ದಾಳಿ ಮಾಡಿ ನಾಶ ಮಾಡಿರುವುದು ಬದಲಾದ ಭಾರತ ನೀಡಿದ ಪ್ರತಿಕ್ರಿಯೆಯಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೃಢ ಮತ್ತು ಅಚಲ ನಾಯಕತ್ವದಲ್ಲಿ, ಭಾರತವು ಮತ್ತೊಮ್ಮೆ ಭಯೋತ್ಪಾದನೆ ಅಥವಾ ಅದನ್ನು ಬೆಂಬಲಿಸುವವರನ್ನು ಸಹಿಸುವುದಿಲ್ಲ ಎಂದು ಮತ್ತೊಮ್ಮೆ ವಿಶ್ವಕ್ಕೆ ತೋರಿಸಿಕೊಟ್ಟಿದೆ ಎಂದು ಪ್ರತಿಪಾದಿಸಿದ್ದಾರೆ.
ನಾಗರಿಕರಿಗೆ ಹಾನಿಯಾಗದಂತೆ ನಮ್ಮ ಸೇನೆಯ ಜವಾಬ್ದಾರಿಯುತ ಮತ್ತು ಪರಿಣಾಮಕಾರಿ ಕಾರ್ಯ ನಿಜಕ್ಕೂ ಶ್ಲಾಘನೀಯ. ಭಯೋತ್ಪಾದಕ ಹಾಗೂ ಪಾಕಿಸ್ತಾನದ ಕುತಂತ್ರ ವಿರುದ್ಧ ಪ್ರತೀಕಾರ ತೀರಿಸಬೇಕೆಂಬ ಭಾರತೀಯರ ಅಪೇಕ್ಷೆ ಈಡೇರಿದೆ. ಉಗ್ರರು ಹಾಗೂ ಅವರ ಸಹಚರರು ಎಲ್ಲೇ ಅಡಗಿ ಕುಳಿತರೂ, ಅವರೆಲ್ಲರನ್ನೂ ನುಗ್ಗಿ ಹೊಡೆದು ಸಂಹಾರ ಮಾಡುವ ಅತ್ಯಂತ ಬಲಿಷ್ಠ ರಾಷ್ಟ್ರ ಎಂಬುದನ್ನು ನಮ್ಮ ಹೆಮ್ಮೆಯ ಭಾರತ ತೋರಿಸಿ ಕೊಟ್ಟಿದೆ. ಆ ಮೂಲಕ ಇತ್ತೀಚೆಗೆ ಪ್ರಧಾನಮಂತ್ರಿ ಬಿಹಾರದಲ್ಲಿ ಮಾಡಿದ್ದ ಶಪಥ, ವಾಗ್ದಾನವನ್ನು ನೆರವೇರಿಸಿದ್ದಾರೆ ಎಂದು ಹೇಳಿದ್ದಾರೆ.
Operation Sindhoor, A Historic Day Showcasing New India's Unmatched Power to the World, Says MP Capt Chowta in Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm