ಬ್ರೇಕಿಂಗ್ ನ್ಯೂಸ್
07-05-25 10:30 pm Mangalore Correspondent ಕರಾವಳಿ
ಮಂಗಳೂರು, ಮೇ 7 : ಮುಸ್ಲಿಮರ ಬಗ್ಗೆ ಅವಹೇಳನ ಹೇಳಿಕೆ ನೀಡಿದ್ದಾರೆಂದು ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಮತ್ತು ಸಂಬಂಧಿಸಿದ ವಿಚಾರಣಾ ಪ್ರಕ್ರಿಯೆ ರದ್ಧತಿ ಕೋರಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೈಕೋರ್ಟ್ ಮೆಟ್ಟಿಲೇರಿದ್ದು ಕೇಸಿಗೆ ತಡೆ ಕೋರಿದ್ದಾರೆ.
ಬೆಳ್ತಂಗಡಿ ತಾಲೂಕಿನ ತೆಕ್ಕಾರಿನ ಎಸ್.ಬಿ.ಇಬ್ರಾಹಿಂ ಸಲ್ಲಿಸಿರುವ ದೂರಿನಂತೆ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಶಾಸಕ ಹರೀಶ್ ಪೂಂಜಾ ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸಲು ಅವರ ಪರ ವಕೀಲರು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರ ಮುಂದೆ ಬೇಡಿಕೆ ಇಟ್ಟರು. ಇದಕ್ಕೆ ಹೈಕೋರ್ಟ್ ಪೀಠ, ಇದು ಜನಪ್ರತಿನಿಧಿಗೆ ಸಂಬಂಧಿಸಿದ ಪ್ರಕರಣವಾಗಿದ್ದು, ಈ ನ್ಯಾಯಾಲಯಕ್ಕೆ ಇದರ ವ್ಯಾಪ್ತಿ ಬರುವುದಿಲ್ಲ. ಮುಖ್ಯ ನ್ಯಾಯಮೂರ್ತಿಗಳಿಂದ ನಿರ್ದೇಶನ ಪಡೆದು, ಒಪ್ಪಿಗೆ ಸಿಕ್ಕಿದರೆ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಹೇಳಿ ವಿಚಾರಣೆ ಮುಂದೂಡಿದರು.
ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮದಲ್ಲಿ ಮೇ 3ರಂದು ಹರೀಶ್ ಪೂಂಜಾ ಅವರು ತುಳು ಭಾಷೆಯಲ್ಲಿ "ತೆಕ್ಕಾರಿನ ಕಂತ್ರಿ ಬ್ಯಾರಿಗಳು ಟ್ಯೂಬ್ಲೈಟ್ ಒಡೆದಿದ್ದಾರೆ. ಜನರೇಟರ್ನ ಡೀಸೆಲ್ ಕದ್ದಿದ್ದಾರೆ ಎಂಬ ಬಗ್ಗೆ ಸ್ಥಳೀಯರಿಂದ ಮಾಹಿತಿ ಬಂದಿದೆ. ಬ್ರಹ್ಮಕಲಶೋತ್ಸವ ಮುಗಿಯುವ ವೇಳೆಗೆ ಕದ್ದಿರುವವರು ಯಾರು ಎಂಬ ಮಾಹಿತಿ ಬರುತ್ತದೆ. ನಮ್ಮಲ್ಲಿ ಸೌಹಾರ್ದತೆ ಬೇಕು. ನಾವು ಮಸೀದಿಗೆ ಹೋಗಿ ಆಮಂತ್ರಣ ಕೊಟ್ಟಿದ್ದರಿಂದ ಬ್ಯಾರಿಗಳು ಟ್ಯೂಬ್ ಒಡೆದಿದ್ದಾರೆ. ಅವರಿಗೆ ಆಮಂತ್ರಣ ನೀಡಬಾರದಿತ್ತು. ಕಾರ್ಯಕ್ರಮಕ್ಕೆ ಕರೆಯಬಾರದಿತ್ತು" ಎಂದು ಹೇಳಿದ್ದರು.
ಇಂತಹ ಹೇಳಿಕೆಯಿಂದ ಎರಡು ಸಮುದಾಯಗಳ ನಡುವೆ ದ್ವೇಷ ಹರಡಿದ್ದಾರೆ ಎಂದು ಎಸ್.ಬಿ. ಇಬ್ರಾಹಿಂ ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದರು. ಇದನ್ನು ಆಧರಿಸಿ ಪೊಲೀಸರು ಹರೀಶ್ ಪೂಂಜಾ ವಿರುದ್ಧ ಬಿಎನ್‌ಎಸ್ ಸೆಕ್ಷನ್ 196, 353(2) ಅಡಿ ಪ್ರಕರಣ ದಾಖಲಿಸಿದ್ದಾರೆ.
MLA Harish Poonja Moves High Court Seeking Quashing of FIR Over Alleged Derogatory Remarks Against Muslims.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm