ಬ್ರೇಕಿಂಗ್ ನ್ಯೂಸ್
09-05-25 11:07 pm Mangalore Correspondent ಕರಾವಳಿ
ಮಂಗಳೂರು, ಮೇ 10 : ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಹಿಂದು- ಮುಸ್ಲಿಂ ಸಮುದಾಯಗಳನ್ನು ಎತ್ತಿಕಟ್ಟುವ ರೀತಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದ ಬ್ಯಾರಿ ರೋಯಲ್ ನವಾಬ್ ಹೆಸರಿನ ಇನ್ ಸ್ಟಾ ಗ್ರಾಮ್ ಪೇಜ್ ಅನ್ನು ನಿಷೇಧ ಮಾಡಲಾಗಿದೆ.
ಈ ಪೇಜ್ ನಲ್ಲಿ ಒಂದು ಲಕ್ಷದಷ್ಟು ಮಂದಿ ಫಾಲೋವರ್ ಗಳಿದ್ದು ಜನರನ್ನು ಉದ್ರೇಕಿಸಿ ಒಬ್ಬರಿಗೊಬ್ಬರು ದ್ವೇಷ ಭಾವನೆ ಹುಟ್ಟುವಂತೆ ಮಾಡಲಾಗುತ್ತಿತ್ತು. ಈ ಬಗ್ಗೆ ಮಂಗಳೂರಿನ ಬರ್ಕೆ ಮತ್ತು ಮುಲ್ಕಿ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದು ತನಿಖೆಯನ್ನು ಸಿಇಎನ್ ಠಾಣೆಗೆ ವರ್ಗಾಯಿಸಲಾಗಿತ್ತು. ಸದ್ರಿ ಪೇಜ್ ಬಗ್ಗೆ ಮಾಹಿತಿ ನೀಡುವಂತೆ ಸಂಬಂಧಿಸಿದ ಪ್ರಾಧಿಕಾರಕ್ಕೆ ಪೊಲೀಸರು ಪತ್ರ ಬರೆದಿದ್ದರು. ಅದರಂತೆ, ಸಂಬಂಧಪಟ್ಟ ಲಾ ಎನ್ಫೋರ್ಸ್ ಮೆಂಟ್ ಏಜನ್ಸಿಯವರು ಬ್ಯಾರಿ ರಾಯಲ್ ನವಾಬ್ ಹೆಸರಿನ ಪೇಜ್ ಅನ್ನು ರದ್ದು ಪಡಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ 'ಬ್ಯಾರಿ ಆಫ್ ಉಳ್ಳಾಲ' ಇನ್ ಸ್ಟಾ ಗ್ರಾಮ್ ಪೇಜ್ ನಲ್ಲಿ ಎರಡು ವರ್ಷಗಳ ಹಿಂದೆ ಕೊಲೆಯಾದ ಫಾಜಿಲ್ ಫೋಟೊ ಹಾಕಿ ಮಿಸ್ ಯು ಅಂತ ಬರೆಯಲಾಗಿತ್ತು. ಇದಕ್ಕೆ ಕಮೆಂಟ್ ಹಾಕಿದ್ದ ವ್ಯಕ್ತಿಯೊಬ್ಬ ಒಂದಕ್ಕೆ ಮುಗಿದಿಲ್ಲ, ಇನ್ನೂ ನಾಲ್ಕು ಬಾಕಿಯಿದೆ ಎಂಬುದಾಗಿ ಸಂದೇಶ ಬರೆದಿದ್ದ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಮೆಂಟ್ ಮಾಡಿದ್ದ ಮೊಹಮ್ಮದ್ ಅಕ್ರಂ ಹಳೆಯಂಗಡಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
Mangalore Instagram Page "BearyRoyal" Removed for Provocative Posts Targeting Hindus and Muslims; Man Detained for Questioning in Ullal.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am