Lokayukta raid, Mangalore: ಸರ್ವೆ ಇಲಾಖೆ ಮೇಲ್ವಿಚಾರಕನ ಮನೆಗೆ ಲೋಕಾಯುಕ್ತ ದಾಳಿ ; ಅಪಾರ ಪ್ರಮಾಣದ ಆಸ್ತಿ ಪತ್ತೆ 

15-05-25 03:33 pm       Mangalore Correspondent   ಕರಾವಳಿ

ಲೋಕಾಯುಕ್ತ ಅಧಿಕಾರಿಗಳು ಸರ್ವೆ ಇಲಾಖೆಯ ಮೇಲ್ವಿಚಾರಕ ಅಧಿಕಾರಿಯೊಬ್ಬರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು ಅಪಾರ ಪ್ರಮಾಣದ ಆಸ್ತಿ ಪತ್ತೆ ಮಾಡಿದ್ದಾರೆ. 

ಮಂಗಳೂರು, ಮೇ 15 : ಲೋಕಾಯುಕ್ತ ಅಧಿಕಾರಿಗಳು ಸರ್ವೆ ಇಲಾಖೆಯ ಮೇಲ್ವಿಚಾರಕ ಅಧಿಕಾರಿಯೊಬ್ಬರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು ಅಪಾರ ಪ್ರಮಾಣದ ಆಸ್ತಿ ಪತ್ತೆ ಮಾಡಿದ್ದಾರೆ. 

ಸರ್ವೆ ಇಲಾಖೆ ಮೇಲ್ವಿಚಾರಕ ಮಂಜುನಾಥ್ ಅವರ ಮಂಗಳೂರಿನ ಬಿಜೈನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆಯ ಆರೋಪ ಹಿನ್ನೆಲೆ ದಾಳಿ ನಡೆಸಲಾಗಿದೆ. ಬಿಜೈ 8ನೇ ಕ್ರಾಸ್ ನಲ್ಲಿ ಮೂರು ಅಂತಸ್ತಿನ ಮನೆಯಿದ್ದು ಅಧಿಕಾರಿಗಳು ದಾಖಲೆ ಪತ್ರಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. 

ಒಟ್ಟು ಮೂರು ಕಾರುಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಮನೆ ಮತ್ತು ಕಚೇರಿಗೆ ದಾಳಿ ನಡೆಸಿದ್ದಾರೆ. ತುಮಕೂರು ಮೂಲದ ಮಂಜುನಾಥ್ ಅವರು ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೇರೆ ಬೇರೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಸರ್ವೆ ಇಲಾಖೆಯಲ್ಲಿ ಮೇಲ್ವಿಚಾರಕರಾಗಿ ಕರ್ತವ್ಯದಲ್ಲಿದ್ದಾರೆ.

Lokayukta officials conducted an early morning raid on Thursday at the residence and office of survey supervisor Manjunath in Mangaluru, in connection with allegations of possessing assets disproportionate to his known sources of income. The raid was led by the Lokayukta SP, targeting Manjunath’s residence