ಬ್ರೇಕಿಂಗ್ ನ್ಯೂಸ್
16-05-25 10:06 am Mangalore Correspondent ಕರಾವಳಿ
ಮಂಗಳೂರು, ಮೇ 16 : ಮಂಗಳೂರು ಬಂದರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಸಮುದ್ರ ಮಧ್ಯೆ ಮುಳುಗಡೆಯಾಗಿದ್ದು ಅದರಲ್ಲಿದ್ದ ಸಿಬ್ಬಂದಿಯನ್ನು ಲಕ್ಷದ್ವೀಪದ ಮೀನುಗಾರರು ರಕ್ಷಣೆ ಮಾಡಿದ್ದಾರೆ.
ಮೇ 12ರಂದು ಲಕ್ಷದ್ವೀಪ ಹೊರಟಿದ್ದ ಸರಕು ಹಡಗು ಅಲ್ಲಿಂದ ಸುಮಾರು 60 ನಾಟಿಕಲ್ ಮೈಲು ದೂರದಲ್ಲಿದ್ದಾಗ ಮುಳುಗಡೆಯಾಗಿತ್ತು. ಹಡಗಿನಲ್ಲಿದ್ದ ತುರ್ತು ರಕ್ಷಣಾ ನೌಕೆಯ ಮೂಲಕ ಪಾರಾಗಿದ್ದು ಬಳಿಕ ಸ್ಥಳೀಯ ಮೀನುಗಾರರು ಮತ್ತು ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ ನಡೆಸಿ, ಮೇ 18ರಂದು ಆರು ಸಿಬ್ಬಂದಿಯನ್ನು ರಕ್ಷಣೆ ಮಾಡಿದ್ದಾರೆ.
ಮಂಗಳೂರು ಬಂದರಿನಿಂದ ಸಿಮೆಂಟ್, ಮರಳು, ತರಕಾರಿ ಹಾಗೂ ನಿರ್ಮಾಣ ಸಾಮಗ್ರಿ ಹೊತ್ತು ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು. ಮೇ 18 ರಂದು ಲಕ್ಷದ್ವೀಪದ ಕಡಮತ್ ದ್ವೀಪಕ್ಕೆ ತಲುಪಬೇಕಾಗಿತ್ತು. ದಾರಿ ಮಧ್ಯೆ ತಾಂತ್ರಿಕ ಸಮಸ್ಯೆಯಿಂದ ಒಳಗಡೆ ನೀರು ನುಗ್ಗಿ ಹಡಗು ಮುಳುಗಿದೆ.
ಹಡಗು ಮುಳುಗಿದ್ದರಿಂದ ಸಿಬ್ಬಂದಿ ಮೂರು ದಿನಗಳ ಕಾಲ ಸಮುದ್ರದಲ್ಲಿ ಆಹಾರವಿಲ್ಲದೇ ಕಳೆದಿದ್ದರು. ಕಲ್ಪೇಣಿ ದ್ವೀಪದ ಮೀನುಗಾರರು ಸಮುದ್ರದಲ್ಲಿ ಸಿಲುಕಿದ್ದ ಹಡಗಿನ ಕ್ಯಾಪ್ಟನ್ ಭಾಸ್ಕರನ್ ಹಾಗೂ ಸಿಬ್ಬಂದಿಯಾದ ನಾಗಲಿಂಗಂ, ನಲ್ಲಮುತ್ತು ಗೋಪಾಳ್, ಮಂಡಿದೇವನ್ ವೇಲು, ವಿಘ್ನೇಶ್, ಅಜಿತ್ ಕುಮಾರ್ ಎಸ್., ಕುಪ್ಪುರಾಮನ್, ಎಂ.ಮುರುಗನ್ ಅವರನ್ನು ರಕ್ಷಣೆ ಮಾಡಿದ್ದರು. ಪಾತಿಯನ್ನು ತಮ್ಮ ಮೀನುಗಾರಿಕಾ ದೋಣಿಯ ಮೂಲಕ ಕಲ್ಪೇಣಿ ದ್ವೀಪಕ್ಕೆ ಕರೆದೊಯ್ದು ಕರಾವಳಿ ರಕ್ಷಣಾ ಪಡೆಗೆ ಮಾಹಿತಿ ನೀಡಿದ್ದರು. ರಕ್ಷಣೆ ಮಾಡಲಾದ ಸಿಬ್ಬಂದಿಯನ್ನು ಕರಾವಳಿ ರಕ್ಷಣಾ ಪಡೆಯ ಕೊಚ್ಚಿ ನೆಲೆಗೆ ಕರೆದೊಯ್ಯಲಾಗಿದೆ’ ಎಂದು ಮಂಗಳೂರಿನ ಬಂದರು ದಕ್ಕೆಯ ಲತೀಫ್ ಬೆಂಗರೆ ತಿಳಿಸಿದ್ದಾರೆ.
‘ಹಡಗು ಮುಳುಗಿದ ಬಗ್ಗೆ ಮಂಗಳೂರು ಮತ್ತು ಲಕ್ಷದ್ವೀಪದ ಕರಾವಳಿ ರಕ್ಷಣಾ ಪಡೆಗೆ ಸಂತ್ರಸ್ತ ಮೀನುಗಾರರು ಮಾಹಿತಿ ನೀಡಿದ್ದರು. ಕರಾವಳಿ ರಕ್ಷಣಾ ಪಡೆಯ ಸಿಬ್ಬಂದಿ ಕಡಲಿನಲ್ಲಿ ಸಿಲುಕಿದ್ದ ಸಿಬ್ಬಂದಿಗಾಗಿ ಮೇ 15ರಿಂದ 17ರ ವರೆಗೆ ಹುಡುಕಾಟ ನಡೆಸಿದ್ದರು. ಆದರೂ ಅವರು ಪತ್ತೆಯಾಗಿರಲಿಲ್ಲ’ ಎಂದರು.
Mangalore Cargo Ship Bound for Lakshadweep Sinks; Fishermen Rescue Crew After 3 Days Without Food or Water.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm