ಬ್ರೇಕಿಂಗ್ ನ್ಯೂಸ್
18-05-25 12:42 pm Mangalore Correspondent ಕರಾವಳಿ
ಮಂಗಳೂರು, ಮೇ 18 : ಧರ್ಮಸ್ಥಳ ಮೂಲದ ಏರೋಸ್ಪೇಸ್ ಇಂಜಿನಿಯರ್ ಉದ್ಯೋಗಿಯೊಬ್ಬಳು ಪಂಜಾಬ್ ತೆರಳಿದ್ದಾಗ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದ್ದು ಮನೆಯವರು ಶಾಕ್ ಆಗಿದ್ದಾರೆ.
ಧರ್ಮಸ್ಥಳ ಗ್ರಾಮದ ಬೋಳಿಯಾರ್ ನಿವಾಸಿಗಳಾದ ಸುರೇಂದ್ರ - ಸಿಂದೂದೇವಿ ದಂಪತಿಯ ಮಗಳು ಆಕಾಂಕ್ಷಾ(22) ಮೃತ ಯುವತಿ. ಮೇ 17 ರಂದು ಘಟನೆ ನಡೆದಿದ್ದು ವಿಷಯ ತಿಳಿದ ಮನೆಯವರು ಪಂಜಾಬ್ಗೆ ತೆರಳಿದ್ದಾರೆ. ಪಂಜಾಬಿನ ಫಗ್ವಾರಾದ ಎಲ್ ಪಿಯು ಕಾಲೇಜಿನಲ್ಲಿ ಆರು ತಿಂಗಳ ಹಿಂದೆ ಏರೋಸ್ಪೇಸ್ ಇಂಜಿನಿಯರಿಂಗ್ ಮುಗಿಸಿ ದೆಹಲಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದರು. ಅಲ್ಲಿದ್ದಾಗಲೇ ಜಪಾನಿನಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದು ಅದಕ್ಕಾಗಿ ಹೆಚ್ಚುವರಿ ಶೈಕ್ಷಣಿಕ ಪ್ರಮಾಣ ಪತ್ರ ಪಡೆಯಲು ಆಕಾಂಕ್ಷಾ ಪಂಜಾಬ್ಗೆ ತೆರಳಿದ್ದಳು.
ಶೈಕ್ಷಣಿಕ ಪ್ರಮಾಣ ಪತ್ರ ಪಡೆದು ಮನೆಯವರಿಗೆ ಕರೆ ಮಾಡಿ ಮಾತನಾಡಿದ್ದ ಯುವತಿ ನಿನ್ನೆ ಸಂಜೆ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾಳೆ. ಜಲಂಧರ್ ಪೊಲೀಸರು ಮನೆಯವರಿಗೆ ವಿಷಯ ಮುಟ್ಟಿಸಿದ್ದು ಮೂರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಮಾಹಿತಿ ಇದೆ. ಆದರೆ ಆಕೆಯ ಜೊತೆಗೆ ಯಾರಿದ್ದರು, ಯಾರ ಜೊತೆ ಉಳಿದುಕೊಂಡಿದ್ದಳು ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.
ಮಗಳು ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವೇ ಇಲ್ಲವೆಂದು ತಾಯಿ ಸಿಂಧೂದೇವಿ ಹೇಳಿದ್ದು ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹ ಮಾಡಿದ್ದಾರೆ.
A tragic and mysterious incident has occurred involving a young aerospace engineer from Dharmasthala. Akanksha (22), daughter of Surendra and Sindhu Devi of Boliyar in Dharmasthala, passed away under unclear circumstances while she was in Punjab. Akanksha, who had recently secured a job opportunity in Japan, had traveled to Punjab when the incident took place. Her sudden and unexplained death has left her family and the local community in deep shock and grief. Authorities are yet to confirm the exact cause of death, and further investigation is underway.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 06:40 pm
HK News Desk
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm