ಬ್ರೇಕಿಂಗ್ ನ್ಯೂಸ್
23-05-25 10:46 pm Mangalore Correspondent ಕರಾವಳಿ
ಮಂಗಳೂರು, ಮೇ 23:ಹಣ ದುರುಪಯೋಗ ಆಗಿರುವ ಆರೋಪದ ಹಿನ್ನೆಲೆಯಲ್ಲಿ ಪಿಲಿಕುಳ ನಿಸರ್ಗಧಾಮದ ಕಚೇರಿ ಮತ್ತು ಪಿಲಿಕುಳ ವಿಜ್ಞಾನ ಕೇಂದ್ರಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಗಾನಾ ಪಿ. ಕುಮಾರ್ ನೇತೃತ್ವದಲ್ಲಿ ನಿರೀಕ್ಷಕರಾದ ಸುರೇಶ್ ಕುಮಾರ್ ಮತ್ತು ಭಾರತಿ ಜಿ. ಅವರು ದಾಳಿ ನಡೆಸಿದ್ದು, ಸುದೀರ್ಘ ಪರಿಶೀಲನೆ ನಡೆಸಿದ್ದಾರೆ. ಪಿಲಿಕುಳ ವಿಜ್ಞಾನ ಕೇಂದ್ರ ಮತ್ತು ನಿಸರ್ಗಧಾಮದ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಜೈವಿಕ ಉದ್ಯಾನವನ ಮತ್ತು ನಿಸರ್ಗಧಾಮದಲ್ಲಿ ಪ್ರಾಣಿಗಳ ಸಾಗಣೆ ಮತ್ತು ವಹಿವಾಟು ವಿಚಾರದಲ್ಲಿ ಹಣ ದುರುಪಯೋಗ ಆಗುತ್ತಿರುವ ಬಗ್ಗೆ ಹಿಂದಿನಿಂದಲೂ ದೂರುಗಳಿದ್ದವು.
ಪರಿಶೀಲನೆ ವೇಳೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷ ಕಂಡುಬಂದಿದ್ದು, ಮುಖ್ಯವಾಗಿ ಮೃಗಾಲಯದಿಂದ ಹೆಚ್ಚಿನ ಆದಾಯ ಬರುತ್ತಿದ್ದರೂ ಪ್ರಾಧಿಕಾರವು ಮೃಗಾಲಯದ ಏಳಿಗೆಗೆ ಹಣವನ್ನು ವೆಚ್ಚ ಮಾಡುತ್ತಿರುವುದು ಕಂಡುಬರುವುದಿಲ್ಲ. ಅಲ್ಲಿನ ಸಿಬ್ಬಂದಿಯವರಿಗೆ ಕಡಿಮೆ ವೇತನ ನೀಡುತ್ತಿದ್ದು, ಯಾವುದೇ ಆರೋಗ್ಯ ಸೌಲಭ್ಯವನ್ನು ಒದಗಿಸದೆ ಇರುವುದು ಕಂಡುಬರುತ್ತದೆ. ಮೃಗಾಲಯದ ನಿರ್ವಹಣೆಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಆದೇಶವಾಗಿದ್ದರೂ ಪ್ರಾಧಿಕಾರವು ಈವರೆಗೂ ಹಸ್ತಾಂತರಿಸದೆ ವಿಳಂಬ ಧೋರಣೆ ಮಾಡಿರುವುದು ಕಂಡುಬರುತ್ತದೆ.


ಅಲ್ಲದೆ, ಲೀಸ್ ಗೆ ಕೊಟ್ಟ ಕೆಲವು ಸಂಸ್ಥೆಗಳಿಂದ ಪ್ರಾಧಿಕಾರವು ತೆರಿಗೆ ಹಣ ಸಂಗ್ರಹಿಸದೆ ಇರುವುದು ಕಂಡುಬರುತ್ತದೆ. ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ಕಂಡುಬರುತ್ತಿದ್ದು ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಸಮಗ್ರ ವರದಿಯನ್ನು ಲೋಕಾಯುಕ್ತ ಕೇಂದ್ರ ಕಚೇರಿಗೆ ವರದಿ ನಿವೇದಿಸಲಾಗುವುದು ಎಂಬುದಾಗಿ ಲೋಕಾಯುಕ್ತ ಪ್ರಭಾರ ಎಸ್ಪಿ ಕುಮಾರಚಂದ್ರ ತಿಳಿಸಿದ್ದಾರೆ.
Mangalore Misuse of Funds Allegation, Lokayukta Raid and Officials Inspection at Pilikula Nisargadham.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm