ಬ್ರೇಕಿಂಗ್ ನ್ಯೂಸ್
28-05-25 11:16 pm Mangalore Correspondent ಕರಾವಳಿ
ಮಂಗಳೂರು, ಮೇ 28 : ವಿವಾಹಿತ ಮಹಿಳೆಯನ್ನು ಬಾವಿಗೆ ದೂಡಿ, ಪ್ರಿಯಕರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದಿರೆ ತಾಲೂಕಿನ ಬಡಗಮಿಜಾರು ಮರಕಡ ಎಂಬಲ್ಲಿ ನಡೆದಿದೆ.
ಬಡಗಮಿಜಾರು ನಿವಾಸಿ ವಿವಾಹಿತ ಮಹಿಳೆ ನಮಿಕ್ಷಾ ಶೆಟ್ಟಿ (29) ಹಾಗೂ ಆಕೆಯ ಪ್ರೇಮಿ ಎನ್ನಲಾದ ನಿಡ್ಡೋಡಿ ಮೂಲದ ಪ್ರಶಾಂತ್ ಮೃತಪಟ್ಟವರು ಎಂದು ತಿಳಿದುಬಂದಿದೆ. ನಮೀಕ್ಷಾಗೆ ಮದುವೆಯಾಗಿದ್ದು, ಇಬ್ಬರು ಪುಟ್ಟ ಗಂಡು ಮಕ್ಕಳಿದ್ದಾರೆ. ಪತಿ ಸತೀಶ್ ಪೂನಾದಲ್ಲಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ. ಪ್ರಶಾಂತ್ ಮೂಲತಃ ಬಾಗಲಕೋಟೆ ನಿವಾಸಿಯಾಗಿದ್ದು, ಮದುವೆಯಾಗಿ ವಿಚ್ಛೇದನ ಆಗಿದೆ. ನಮೀಕ್ಷಾ ಶೆಟ್ಟಿಗೆ ಇನ್ ಸ್ಟಾ ಗ್ರಾಂ ಮೂಲಕ ಪ್ರಶಾಂತ್ ಪರಿಚಯವಾಗಿತ್ತು.
ನಮೀಕ್ಷಾ ಗಂಡನ ಜೊತೆ ಸಂಸಾರ ಸರಿ ಹೋಗದೆ ಮಕ್ಕಳೊಂದಿಗೆ ತಂದೆಯ ಮನೆಯಲ್ಲಿಯೇ ವಾಸವಾಗಿದ್ದರು. ಪ್ರಿಯಕರ ಪ್ರಶಾಂತ್, ನಮೀಕ್ಷಾ ಮನೆಗೆ ಆಗಾಗ ಬಂದು ಹೋಗುತ್ತಿದ್ದ. ಬುಧವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮತ್ತೆ ಬಂದಿದ್ದು, ಈ ಸಂದರ್ಭದಲ್ಲಿ ಇಬ್ಬರ ಮಧ್ಯೆ ಜಗಳವಾಗಿದೆ ಎನ್ನಲಾಗಿದೆ.
ಇಬ್ಬರ ನಡುವಿನ ಜಗಳ ತಾರಕಕ್ಕೆ ಏರಿದ್ದು ಪ್ರೇಯಸಿ ನಮೀಕ್ಷಾಳನ್ನು ಬಾವಿಗೆ ದೂಡಿದ್ದು ಬಳಿಕ ಆಕೆಯ ಮಗು ನೋಡಿದ ಹಿನ್ನೆಲೆ ಪ್ರಶಾಂತ್ ತಾನೂ ಬಾವಿಗೆ ಹಾರಿದ್ದಾನೆ ಎಂದು ಹೇಳಲಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಬಾವಿಯಿಂದ ಮೇಲೆತ್ತಿದ್ದು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Moodbidri Incident, Woman Found in Well, Man Dies by Suicide.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm