ಬ್ರೇಕಿಂಗ್ ನ್ಯೂಸ್
30-05-25 05:18 pm Mangalore Correspondent ಕರಾವಳಿ
ಮಂಗಳೂರು, ಮೇ 30 : ಉಡುಪಿಯಲ್ಲಿ ಎರಡು ವರ್ಷಗಳಿಂದ ಎಸ್ಪಿ ಆಗಿ ಗಮನಸೆಳೆದ ಡಾ.ಅರುಣ್ ಕೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮಿತ ಎಸ್ಪಿ ಯತೀಶ್ ಅವರು ಅರುಣ್ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ.
ಇದೇ ವೇಳೆ, ಹೇಳಿಕೆ ಬಿಡುಗಡೆ ಮಾಡಿದ ನೂತನ ಎಸ್ಪಿ ಅರುಣ್ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಮತೀಯ ಪ್ರಕರಣ, ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಬಗ್ಗೆಯೂ ಗಂಭೀರ ಪರಿಗಣಿಸಲಾಗುವುದು. ಅದೇ ರೀತಿ ರೌಡಿ ಶೀಟರ್ ಗಳ ಚಲನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು ಎಂದು ತಿಳಿಸಿದ್ದಾರೆ.
ಅಕ್ರಮ ಗೋಹತ್ಯೆ/ಸಾಗಾಟ, ಮಾದಕ ಪದಾರ್ಥಗಳ ಸಾಗಾಟ/ಮಾರಾಟ/ಸೇವನೆ, ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಸಾರ್ವಜನಿಕರಲ್ಲಿ ಯಾವುದೇ ಮಾಹಿತಿಗಳಿದ್ದಲ್ಲಿ ನೇರವಾಗಿ ನನ್ನ ಮೊಬೈಲ್ ಸಂಖ್ಯೆ: 9480805301 ಅಥವಾ ಕಚೇರಿ ಸಂಖ್ಯೆ: 0824-2220503ಗೆ ಮಾಹಿತಿ ನೀಡಬಹುದು ಎಂದು ಕೇಳಿಕೊಂಡಿದ್ದಾರೆ.
ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆಯುತ್ತಿದ್ದ ರಾತ್ರಿ ಕಾರುಬಾರು, ರೌಡಿಗಳ ರಂಪಾಟ, ಗ್ಯಾಂಬ್ಲಿಂಗ್ ಗಳಿಗೆ ಎಸ್ಪಿ ಅರುಣ್ ತನ್ನ ಕಾರ್ಯ ಶೈಲಿಯಿಂದಲೇ ಕಡಿವಾಣ ಹಾಕಿದ್ದರು.
Mangalore IPS Dr Arun Takes Charge as Dakshina Kannada SP, Vows Crime Control, Urges Public to Report Illegal Activities.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm