ಬ್ರೇಕಿಂಗ್ ನ್ಯೂಸ್
02-06-25 10:59 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 2 : ಕರಾವಳಿಯಲ್ಲೇ ಅತಿ ದೊಡ್ಡದು ಎನ್ನಲಾದ ಕಲ್ಲಡ್ಕ ಪ್ಲೈಓವರ್ ಕೊನೆಗೂ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಮಳೆಗಾಲ ಪ್ರಾರಂಭವಾಗಿರುವ ಸಂದರ್ಭದಲ್ಲೇ ಕಲ್ಲಡ್ಕ ಪ್ಲೈಓವರ್ ಅನ್ನು ಕಡೆಗೂ ವಾಹನ ಸಂಚಾರಕ್ಕೆ ಮುಕ್ತಗೊಳಿಸಿರುವುದು ವಾಹನ ಸವಾರರಿಗೆ ಸಂತಸ ತರಿಸಿದೆ.
ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿ.ಸಿ.ರೋಡ್-ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನಲೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈಓವರ್ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆ ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಇತ್ತೀಚೆಗೆ ಸೂಚನೆ ನೀಡಿದ್ದರು. ಅದರಂತೆ ಜೂನ್ 2ರಂದು ಕಲ್ಲಡ್ಕ ಫ್ಲೈಓವರ್ ಸಂಚಾರಕ್ಕೆ ತೆರೆದುಕೊಂಡಿದೆ.
ಸೋಮವಾರ ಬೆಳಗ್ಗೆ ಫ್ಲೈ ಓವರ್ ನ ಆರಂಭಿಕ ಭಾಗವಾದ ಪೂರ್ಲಪ್ಪಾಡಿಯಲ್ಲಿ ಸೇರಿದ ಕಲ್ಲಡ್ಕದ ನಾಗರಿಕರು, ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಗಳ ಸಂಸ್ಥಾಪಕ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ನೇತೃತ್ವದಲ್ಲಿ ಪ್ರೈಓವರ್ ಸಂಚಾರವನ್ನು ಸ್ವಾಗತಿಸುವ ಮೂಲಕ ವಾಹನ ಸಂಚಾರಕ್ಕೆ ಚಾಲನೆ ನೀಡಿದ್ದಾರೆ.
ಕಲ್ಲಡ್ಕದ ಪೂರ್ಲಪ್ಪಾಡಿಯಿಂದ ಕೃಷ್ಣಕೋಡಿಯವರೆಗೆ ಒಟ್ಟು 2.1 ಕಿ.ಮೀ. ಉದ್ದದ ಈ ಮೇಲ್ಸೇತುವೆಯಲ್ಲಿ 70 ಪಿಲ್ಲರ್ಗಳಿವೆ. ಒಂದರಿಂದ ಇನ್ನೊಂದಕ್ಕೆ 30 ಮೀಟರ್ ಅಂತರವಿದ್ದು, ಒಟ್ಟು 72 ಸ್ಪಾನ್ಗಳ ಫ್ಲೈಓವರ್ ಇದಾಗಿದೆ. ಜೂನ್ ಕೊನೆಯೊಳಗೆ ಫ್ಲೈಓವರ್ಗೆ ಸಂಬಂಧಪಟ್ಟ ಎಲ್ಲ ಕಾಮಗಾರಿಗಳು ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ.
Mangalore Kalladka Flyover Finally Opens for Traffic; Welcomed by Local Residents.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm