ಬ್ರೇಕಿಂಗ್ ನ್ಯೂಸ್
21-12-20 06:47 pm Mangaluru Correspondent ಕರಾವಳಿ
ಮಂಗಳೂರು, ಡಿ.21: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದ್ದು, ಡಿ.22ರಂದು ಮಂಗಳೂರು, ಮೂಡುಬಿದ್ರೆ ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಡಿ.27ರಂದು 2ನೇ ಹಂತದ ಚುನಾವಣೆ ನಡೆಯಲಿದ್ದು, ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರಿನಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಗ್ರಾಮ ಪಂಚಾಯತ್ ಚುನಾವಣೆ ಪಕ್ಷದ ಚಿಹ್ನೆಯಡಿ ನಡೆಯದಿದ್ದರೂ ಬೆಂಬಲಿತ ಅಭ್ಯರ್ಥಿಯ ಪರ ಬಿಜೆಪಿ ಹಾಗು ಕಾಂಗ್ರೆಸ್ ಕಾರ್ಯಕರ್ತರು ಪ್ರಚಾರ ನಡೆಸಿದ್ದಾರೆ. ಮೊದಲ ಹಂತದಲ್ಲಿ ಮಂಗಳೂರು, ಮೂಡುಬಿದ್ರೆ, ಬಂಟ್ವಾಳ ತಾಲೂಕಿನ ಒಟ್ಟು 106 ಗ್ರಾಮ ಪಂಚಾಯಿತಿಯ 1681 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಮೂರು ತಾಲೂಕುಗಳಲ್ಲಿ 6,86,692 ಮತದಾರರಿದ್ದು ಒಟ್ಟು 817 ಮತಗಟ್ಟೆಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಂತಿಯುತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಐಪಿಸಿ ಸೆಕ್ಷನ್ 144 ರನ್ವಯ ನಿಷೇಧಾಜ್ಞೆ ಹೊರಡಿಸಲಾಗಿದೆ. ಮಂಗಳೂರು ಮತ್ತು ಮೂಡುಬಿದಿರೆ ಹಾಗು ತಾಲೂಕುಗಳಲ್ಲಿ ಡಿಸೆಂಬರ್ 22ರಂದು ಸಂಜೆ 5 ಗಂಟೆ ವರೆಗೆ ನಿಷೇಧಾಜ್ಞೆ ಇರಲಿದೆ. ಹೀಗಾಗಿ ಮತದಾನ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಮತ ಚಲಾಯಿಸಲು ಬರುವ ಮತದಾರರನ್ನು ಹೊರತುಪಡಿಸಿ ಇತರ ವ್ಯಕ್ತಿಗಳಿಗೆ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm