ಬ್ರೇಕಿಂಗ್ ನ್ಯೂಸ್
04-06-25 09:34 pm Mangalore Correspondent ಕರಾವಳಿ
ಮಂಗಳೂರು, ಜೂನ್ 4 : ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹಾಕಿ, ಸಮಾಜದ ನೆಮ್ಮದಿಗೆ ಭಂಗವನ್ನುಂಟು ಮಾಡಲು ಪ್ರಯತ್ನಿಸಿದ ಆರೋಪಿಗಳ ಪತ್ತೆಗಾಗಿ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಿದ್ದು, ಪ್ರಕರಣಗಳನ್ನು ದಾಖಲಿಸಿ ಆರೋಪಿತರನ್ನು ಪತ್ತೆ ಮಾಡಿ ದಸ್ತಗಿರಿ ಮಾಡಲಾಗಿದೆ.
ಸೌದಿ ಅರೇಬಿಯಾದಿಂದ team_jokerzzz._ಎಂಬ Instagram ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಯಬಿಟ್ಟಿದ್ದ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ಪ್ರಕರಣದ ಆರೋಪಿ ಹೆಜಮಾಡಿ ನಿವಾಸಿ ಮೊಹಮ್ಮದ್ ಅಸ್ಲಾಂ ಎಂಬಾತನ ವಿರುದ್ದ LOC ಹೊರಡಿಸಿ, ದಸ್ತಗಿರಿ ಮಾಡಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಮುಸ್ಲಿಂ ಹೆಸರಿನ ಸಿಮ್ ಕಾರ್ಡ್ ಬಳಸಿಕೊಂಡು team_karna_surathkal ಎಂಬ Instagram ಪೇಜ್ ತೆರೆದಿದ್ದು, ಸದ್ರಿ ಪೇಜ್ ನಲ್ಲಿ ಚೆನ್ನಪ್ಪ @ ಮುತ್ತು ಸುರತ್ಕಲ್ ಎಂಬಾತನು ಪ್ರಚೋದನಕಾರಿ ಸಂದೇಶಗಳನ್ನು ಹರಿಯಬಿಟ್ಟಿದ್ದ ಆರೋಪದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸದ್ರಿ ಪ್ರಕರಣದಲ್ಲಿ ಸುರತ್ಕಲ್ ಇಡ್ಯಾ ಗ್ರಾಮದ ಚೇತನ್ ಬಂಗೇರ(20) ಮತ್ತು ಹಳೆಯಂಗಡಿ ಚೇಳ್ಯಾರು ನಿವಾಸಿ ನಿತಿನ್ ಅಡಪ(23) ಎಂಬವರನ್ನು ಪತ್ತೆ ಮಾಡಿ ದಸ್ತಗಿರಿ ಮಾಡಿದ್ದಾರೆ.
ಸೌದಿ ಅರೇಬಿಯಾದಿಂದ Beary_royal_nawab ಎಂಬ Instagram ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಯಬಿಟ್ಟಿದ್ದ, ಆಧಾರದಲ್ಲಿ ಬರ್ಕೆ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 44/2025 ಕಲಂ. 353 (2) ಭಾರತೀಯ ನ್ಯಾಯ ಸಂಹಿತೆ ಮತ್ತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 42/2025 ಕಲಂ.353 (1) (c), 353(2) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ಪ್ರಕರಣದಲ್ಲಿ ಫರಂಗಿಪೇಟೆಯ ರಿಯಾಝ್ ಇ್ರಬಾಹಿಂ ಎಂಬಾತನ ವಿರುದ್ದ LOC ಹೊರಡಿಸಿ, ದಸ್ತಗಿರಿ ಮಾಡಲಾಗಿದೆ.
Troll_bengare_ro_makka ಎಂಬ Instagram ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆಧಾರದಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 44/2025 ಕಲಂ.353 (1) (c), 353(2) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಿಸಲಾಗಿರುತ್ತದೆ. ಸದ್ರಿ ಪ್ರಕರಣದಲ್ಲಿ ಕುಳೂರು ಕಸಬಾ ಬೆಂಗ್ರೆಯ ಜಮಾಲ್ ಝಾಕೀರ್ ಎಂಬಾತನನ್ನು ದಸ್ತಗಿರಿ ಮಾಡಲಾಗಿದೆ.
Facebook ಖಾತೆಯ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆಧಾರದಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 53/2025 ಕಲಂ.196(1),(A),353(2),79,56 ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಿಸಲಾಗಿರುತ್ತದೆ, ಸದ್ರಿ ಗುರು ಪ್ರಸಾದ್ ಹಳೆಯಂಗಡಿ ಎಂಬಾತನನ್ನು ದಸ್ತಗಿರಿ ಮಾಡಲಾಗಿದೆ. ಸದ್ರಿ ಪ್ರಕರಣಗಳ ತನಿಖೆಯನ್ನು ಮಂಗಳೂರು ನಗರ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯ ವಿಶೇಷ ತಂಡಗಳಿಂದ ಮುಂದುವರೆಸಲಾಗಿದೆ.
Communal Provocative Posts on Social Media, Special Police Teams Nab Six in Mangalore Crackdown.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm