ಬ್ರೇಕಿಂಗ್ ನ್ಯೂಸ್
05-06-25 01:48 pm Mangaluru Correspondent ಕರಾವಳಿ
ಮಂಗಳೂರು, ಜೂನ್ 5: ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣ ಕಾಯಿದೆ ಜಾರಿಯಲ್ಲಿದ್ದು ಅದರ ಪ್ರಕಾರ ಗೋವುಗಳ ಹತ್ಯೆಗೆ ನಿಷೇಧವಿದೆ. ಇದರ ಪ್ರಕಾರ, ಹತ್ಯೆ ಉದ್ದೇಶದಿಂದ ಜಾನುವಾರು ಸಾಗಾಟವೂ ಶಿಕ್ಷಾರ್ಹ ಅಪರಾಧ. ಅಕ್ರಮವಾಗಿ ಗೋವು ಹತ್ಯೆಗೈದ ಸ್ಥಳವನ್ನು ಸರಕಾರ ಮುಟ್ಟುಗೋಲು ಹಾಕುವುದಕ್ಕೂ ಕಾನೂನಿನಲ್ಲಿ ಅವಕಾಶವಿದೆ. ಬಕ್ರೀದ್ ಸಂದರ್ಭದಲ್ಲಿ ಮಂಗಳೂರು ಪೊಲೀಸರು ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಪ್ರಾಂತ ಗೋರಕ್ಷಾ ಪ್ರಮುಖ್ ಸುನಿಲ್ ಕೆ.ಆರ್ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಅವರು, ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಗೋವುಗಳ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕಾಗಿದೆ. ಯಾವುದೇ ಅಕ್ರಮ ಜಾನುವಾರು ಸಾಗಾಟವಾಗದಂತೆ ನಾಕಾಬಂದಿ ಹಾಕಬೇಕು. ಕಿವಿಯೋಲೆ ಇಲ್ಲದ ಜಾನುವಾರುಗಳನ್ನು ಸಾರ್ವಜನಿಕ ಜಾಗದಲ್ಲಿ ಶೇಖರಿಸಿ ಇಡದಂತೆ, ಮೇಯಲು ಬಿಡದಂತೆ, ಸೂರ್ಯಾಸ್ತದಿಂದ ಸೂರ್ಯೋದಯ ವರೆಗೆ ಜಾನುವಾರು ಸಾಗಾಟ ನಿಷೇಧವಿದ್ದು ಈ ಬಗ್ಗೆ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಬೇಕಾಗಿದೆ. ಕಾನೂನು ಉಲ್ಲಂಘಿಸಿ ಕಿವಿಯೋಲೆ ಇಲ್ಲದೆ ಶೇಖರಿಸಿಟ್ಟ, ಮೇಯಲು ಬಿಟ್ಟ ಜಾನುವಾರುಗಳನ್ನು ವಶಪಡಿಸಿ, ಜಾನುವಾರು ನಿಷೇಧ ಕಾಯಿದೆ 2020 ರಂತೆ ಪ್ರಕರಣ ದಾಖಲಿಸಬೇಕು. ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಕಸಾಯಿಖಾನೆ ಜಾಗದ ಬಗ್ಗೆ ನಿಗಾ ಇಡುವುದರ ಜೊತೆಗೆ ಪ್ರಾರ್ಥನಾ ಮಂದಿರಗಳಲ್ಲಿ ಜಾನುವಾರು ಶೇಖರಿಸಿ ಇಡದಂತೆ ನಿಗಾ ಇಡಬೇಕು.

ಕಾಯಿದೆಯಂತೆ ಜಾನುವಾರು ಹತ್ಯೆ ತಡೆಯುವ ಅಧಿಕಾರ ಸಾರ್ವಜನಿಕರಿಗೂ ಇದ್ದು ಅದನ್ನು ನಮ್ಮ ಸಂಘಟನೆಗಳು ಮಾಡುತ್ತವೆ. ಅಕ್ರಮ ಜಾನುವಾರು ಸಾಗಾಟ, ಶೇಖರಣೆ, ಹತ್ಯೆಗಳನ್ನು ಪೊಲೀಸರೇ ತಡೆಯುವ ಮೂಲಕ ಸಾರ್ವಜನಿಕರು ಅಧಿಕಾರ ಉಪಯೋಗಿಸಲು ಅವಕಾಶ ಸಿಗದಂತೆ ಎಚ್ಚರ ವಹಿಸಬೇಕು. ಈ ಎಲ್ಲಾ ಕಾರ್ಯಗಳಲ್ಲಿ ಕಾನೂನು ಪ್ರಕಾರ ತಮ್ಮೊಂದಿಗೆ ಪೂರ್ಣ ಮಟ್ಟದ ಸಹಕಾರ ನೀಡಲು ನಮ್ಮ ಸಂಘಟನೆ ಬದ್ಧವಿದೆ ಎಂದವರು ಹೇಳಿದರು.
ಮಂಗಳೂರಿನಲ್ಲಿ ನೂತನ ಪೊಲೀಸ್ ಕಮಿಷನರ್ ಅಧಿಕಾರ ವಸಿಕೊಂಡ ದಿನದಂದೇ ಕೇರಳದಿಂದ ಮಂಗಳೂರಿಗೆ (ತಲಪಾಡಿಯ ಬಳಿ) ಅಕ್ರಮವಾಗಿ ಕಂಟೇನರ್ ನಲ್ಲಿ ಸಾಗಿಸುತ್ತಿದ್ದ 24 ಜಾನುವಾರುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಪೊಲೀಸ್ ಕಮಿಷನರ್ ಅವರ ಈ ಕಾರ್ಯ ಶ್ಲಾಘನೀಯ. ಅದೇ ರೀತಿ ಮಂಗಳೂರು ವ್ಯಾಪ್ತಿಯಲ್ಲಿ ಎಲ್ಲಿಯೂ ಅಕ್ರಮ ಗೋಸಾಗಾಟ / ಗೋ ವಧೆಯಾಗದ ರೀತಿಯಲ್ಲಿ ಪೊಲೀಸರು ಕ್ರಮ ಕೈಗೊಳ್ಳುವ ಬಗ್ಗೆ ಸಂಪೂರ್ಣ ವಿಸ್ವಾಸವಿದೆ ಎಂದು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಎಚ್ ಕೆ ಪುರುಷೋತ್ತಮ್, ಪ್ರದೀಪ್ ಸರಿಪಲ್ಲ, ಹರೀಶ್ ಶೇಟ್, ನವೀನ್ ಮೂಡುಶೆಡ್ಡೆ ಇದ್ದರು.
Mangalore VHP Urges Police to Prevent Illegal Cow Slaughter During Bakrid, Says Public Should Not Be Forced to Intervene
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am