ಬ್ರೇಕಿಂಗ್ ನ್ಯೂಸ್
14-06-25 12:11 pm Mangaluru Correspondent ಕರಾವಳಿ
ಮಂಗಳೂರು, ಜೂನ್ 14: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಗೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದಾರೆ. ವಾರದ ಹಿಂದಷ್ಟೇ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಇಲಾಖೆ ಎನ್ಐಎ ತನಿಖೆಗೆ ವಹಿಸಿ ಆದೇಶ ಮಾಡಿತ್ತು.
ಬೆಂಗಳೂರು ಎನ್ಐಎ ಘಟಕದ ಅಧಿಕಾರಿಗಳು ಮಂಗಳೂರಿಗೆ ಬಂದಿದ್ದು ಹತ್ಯೆ ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಡಿವೈಎಸ್ಪಿ ಪವನ್ ಕುಮಾರ್ ನೇತೃತ್ವದಲ್ಲಿ ಇಬ್ಬರು ಇನ್ಸ್ ಪೆಕ್ಟರ್ ಮತ್ತು ಸಿಬಂದಿಯುಳ್ಳ ಅಧಿಕಾರಿಗಳ ತಂಡ ಮಂಗಳೂರಿಗೆ ಬಂದಿದೆ. ಮಂಗಳೂರು ಸಿಸಿಬಿ ಮತ್ತು ಇತರ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್ಐ ಕಾರ್ಯಕರ್ತರು ಶಾಮೀಲಾಗಿದ್ದಾರೆಂಬ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ಎನ್ಐಎ ತನಿಖೆಗೆ ವಹಿಸಿತ್ತು. ಹಿಂದು ಸಂಘಟನೆ ನಾಯಕರು ಸುಹಾಸ್ ಶೆಟ್ಟಿ ಹತ್ಯೆಯನ್ನು ಎನ್ಐಎ ತನಿಖೆಗೆ ಒತ್ತಾಯ ಮಾಡಿದ್ದರಿಂದ ಮಂಗಳೂರು ಸಂಸದ ಬ್ರಿಜೇಶ್ ಚೌಟ ಅವರು ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಪತ್ರ ಬರೆದು ಗಮನ ಸೆಳೆದಿದ್ದರು.
ನಿನ್ನೆಯಷ್ಟೆ ಮಂಗಳೂರು ಬಂದಿದ್ದ ರಾಜ್ಯದ ಗೃಹ ಸಚಿವ ಪರಮೇಶ್ವರ್, ಎನ್ಐಎ ತನಿಖೆಗೆ ಕೊಟ್ಟಿದ್ದಾರೆ, ಅವರಿಗೆ ಪವರ್ ಇದೆ, ತನಿಖೆ ಮಾಡುತ್ತಾರೆ, ನಾವು ಹಸ್ತಕ್ಷೇಪ ಮಾಡುವುದಿಲ್ಲ. ಒಂದು ಪ್ರಕರಣ ಮಾತ್ರ ಯಾಕೆ ಎನ್ಐಎ ಕೊಟ್ಟಿದ್ದಾರೆಂದು ಗೊತ್ತಿಲ್ಲ ಎಂದಿದ್ದರು. ಸುಹಾಸ್ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿದ್ದು ಕುತೂಹಲಕ್ಕೆ ಕಾರಣವಾಗಿದೆ. ಎನ್ಐಎ ತನಿಖೆ ಸಲುವಾಗಿ ಮಂಗಳೂರು ಪೊಲೀಸರು ಸುಹಾಸ್ ಹತ್ಯೆ ಪ್ರಕರಣದ ಎಲ್ಲ ಕಡತಗಳನ್ನು ಅವರಿಗೆ ಹಸ್ತಾಂತರ ಮಾಡಬೇಕಾಗುತ್ತದೆ.
In a major development in the Suhas Shetty murder case, a team of officials from the National Investigation Agency (NIA) has arrived in Mangaluru to collect crucial information related to the incident. The NIA's involvement suggests the case may have broader implications beyond local crime, possibly hinting at larger networks or organized elements.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm