ಬ್ರೇಕಿಂಗ್ ನ್ಯೂಸ್
15-06-25 03:20 pm Mangalore Correspondent ಕರಾವಳಿ
ಮಂಗಳೂರು, ಜೂನ್ 15 : ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೆತ್ತಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳು ಹಾಗೂ ಪಾಲಿಕೆ ಕಮಿಷನರ್ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಸಚಿವರು, ಅಧಿಕಾರಿಗಳು ಸ್ಥಳದಲ್ಲಿದ್ದು, ಮಳೆ ಹಾನಿಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ ಎಂದು ಸೂಚಿಸಿದರು.
ರಸ್ತೆ ಮಾರ್ಗಗಳಲ್ಲಿ ಗುಡ್ಡ ಕುಸಿತವಾದ ಸ್ಥಳಗಳಲ್ಲಿ ತೆರವು ಕಾರ್ಯಾಚರಣೆ ಕೈಗೊಳ್ಳಬೇಕು. ನ್ಯಾಷನಲ್ ಹೈವೇ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ರಸ್ತೆ ಸಂಪರ್ಕ ಕಡಿತವಾದ ಸ್ಥಳಗಳಲ್ಲಿ ಸಮಸ್ಯೆ ಬಗೆಹರಿಸಿ. ನೀರು ನುಗ್ಗಿರುವ ತಗ್ಗು ಪ್ರದೇಶಗಳಲ್ಲಿ ಕುಟುಂಬಗಳನ್ನ ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸುವಂತೆ ಸಚಿವರು ಸೂಚಿಸಿದರು.
ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಎಲ್ಲಾ ತಹಶೀಲ್ದಾರರು ಹಾಗೂ ಅಧಿಕಾರಿಗಳು ಸ್ಥಳದಲ್ಲಿದ್ದು ಕಾರ್ಯ ನಿರ್ವಹಿಸಬೇಕು. ಅಪಾಯದ ಅಂಚಿನಲ್ಲಿರುವ ಮನೆಗಳ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಕೂಡಲೇ ಸ್ಥಳಾಂತರಿಸಲು ಕ್ರಮ ತೆಗೆದುಕೊಳ್ಳಿ. ರಕ್ಷಣಾ ಸಾಮಗ್ರಿಗಳನ್ನು ಸನ್ನದ್ಧವಾಗಿಸಿ, ಯಾವುದೇ ಸಾವು ನೋವು ಸಂಭವಿಸದಂತೆ ಎಚ್ಚರಿಕೆ ವಹಿಸಿ. ಕಂಟ್ರೋಲ್ ರೂಂ ನಿರಂತರ ಕಾರ್ಯಾಚರಣೆಯಲ್ಲಿದ್ದು, ಮಳೆ ಹಾನಿ ಕುರಿತ ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು. ಪ್ರಾಕೃತಿಕ ವಿಕೋಪ ಕಾರ್ಯಾಚರಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಕಟ್ಟುನಿಟ್ಟಾಗಿ ಸೂಚನೆ ನೀಡಿದ್ದಾರೆ.
Mangalore Take Strict Precautions to Prevent RainRelated Casualties, Minister Dinesh Gundu Rao Directs Dakshina Kannada Administration.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm