ಬ್ರೇಕಿಂಗ್ ನ್ಯೂಸ್
15-06-25 11:04 pm Mangalore Correspondent ಕರಾವಳಿ
ಉಳ್ಳಾಲ, ಜೂ.15 : ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿದ್ದ ದೇರಳಕಟ್ಟೆ ಜಂಕ್ಷನ್ನಿನ ಖಾಸಗಿ ಕಟ್ಟಡದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಆಕಸ್ಮಿಕ ನಡೆದಿದ್ದು, ಸ್ಥಳೀಯರು ಸಮಯ ಪ್ರಜ್ಞೆ ಮೆರೆದು ಬೆಂಕಿ ನಂದಿಸಿದ ಪರಿಣಾಮ ಕಟ್ಟಡದಲ್ಲಿದ್ದ 147 ವಿದ್ಯಾರ್ಥಿನಿಯರು ಅಪಾಯದಿಂದ ಪಾರಾಗಿದ್ದಾರೆ.
ಇಂದು ಸಂಜೆ 7.45 ರ ಹೊತ್ತಿಗೆ ಕಟ್ಟಡದ ನೆಲ ಮಹಡಿಯ ಸ್ವಿಚ್ ಬೋರ್ಡಿನಲ್ಲಿ ಶಾರ್ಟ್ ಸರ್ಕ್ಯುಟ್ ಉಂಟಾಗಿ ಬೆಂಕಿ ವ್ಯಾಪಿಸಿದೆ. ತಕ್ಷಣವೇ ಸ್ಥಳೀಯರು ಸಮಯ ಪ್ರಜ್ಞೆ ಮೆರೆದು ಎದುರುಗಡೆಯಿದ್ದ ಪೆಟ್ರೋಲ್ ಪಂಪ್ ನಿಂದ ಬೆಂಕಿ ನಂದಿಸುವ ಸಾಧನಗಳನ್ನ ತಂದು ಬೆಂಕಿ ನಂದಿಸಿದ್ದಾರೆ. ಬೆಂಕಿ ನಂದಿಸಿದ ಬಳಿಕ ಕಟ್ಟಡದ ಅಂತಸ್ತಿನ ಕೋಣೆಗಳಲ್ಲಿದ್ದ 147 ವಿದ್ಯಾರ್ಥಿನಿಯರನ್ನ ಸುರಕ್ಷಿತವಾಗಿ ಹೊರ ತಂದಿದ್ದಾರೆ.









ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳವು ಕೊಂಚ ವಿಳಂಬವಾಗಿ ಬಂದಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಗ್ನಿಶಾಮಕ ದಳ ಬರುವಷ್ಟರಲ್ಲಿ ಭಾಗಶಃ ಬೆಂಕಿಯನ್ನು ಸ್ಥಳೀಯರೇ ನಂದಿಸುವಲ್ಲಿ ಸಫಲರಾಗಿದ್ದರು. ಕಟ್ಟಡದಲ್ಲಿದ್ದ ಎಲ್ಲಾ ವಿದ್ಯಾರ್ಥಿನಿಯರನ್ನ ನರ್ಸಿಂಗ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ಬೇರೆ ಹಾಸ್ಟೆಲ್ ಗಳಿಗೆ ಸ್ಥಳಾಂತರಿಸಿದ್ದಾರೆ.
ವೇಣುಗೋಪಾಲ್ ಶೆಟ್ಟಿ ಎಂಬವರಿಗೆ ಸೇರಿದ ವೆಂಕಟ್ ರೆಸಿಡೆನ್ಸಿಯೆಂಬ ಐದು ಮಹಡಿಯ ಕಟ್ಟಡದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಕೆಳ ಅಂತಸ್ತಿನ ವಿದ್ಯುತ್ ಸ್ವಿಚ್ ಬೋರ್ಡ್ ಗಳೆಲ್ಲವೂ ಸಂಪೂರ್ಣ ಸುಟ್ಟುಹೋಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಉಳ್ಳಾಲ ತಹಶೀಲ್ದಾರ್ ಪುಟ್ಟರಾಜು ತಿಳಿಸಿದ್ದಾರೆ. ಅಗ್ನಿಶಾಮಕ ದಳ ಹಾಗೂ ಕೊಣಾಜೆ ಪೊಲೀಸರು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
A major fire accident caused by an electrical short circuit occurred at a private hostel building in Deralakatte Junction this evening. Thanks to the swift and courageous response of local residents, 147 female nursing students were safely evacuated from the building without any casualties.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm