ಬ್ರೇಕಿಂಗ್ ನ್ಯೂಸ್
16-06-25 05:07 pm Mangalore Correspondent ಕರಾವಳಿ
ಬೆಳ್ತಂಗಡಿ, ಜೂನ್ 16 : ಸವಣಾಲು ಗ್ರಾಮದ ಹಿತ್ತಿಲಪೇಲ ಎಂಬಲ್ಲಿ ಯುವಕರಿಬ್ಬರು ಬೈಕಿನಲ್ಲಿ ಹೊಳೆ ದಾಟಲು ಯತ್ನಿಸಿ ಬೈಕ್ ಸಹಿತ ನೀರಿನಲ್ಲಿ ಕೊಚ್ಚಿ ಹೋಗಿದ್ದಲ್ಲದೆ, ಬಳಿಕ ಬಂಡೆಗಳ ಎಡೆಯಲ್ಲಿ ಸಿಲುಕಿ ಅಪಾಯದಿಂದ ಪಾರಾಗಿ ಬಂದ ಘಟನೆ ನಡೆದಿದೆ.
ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಪ್ರದೇಶವನ್ನು ಸಂಪರ್ಕಿಸುವ ಕೂಡುಜಾಲು ಎಂಬಲ್ಲಿ ಹರಿಯುವ ಹೊಳೆಯಲ್ಲಿ ಘಟನೆ ಸಂಭವಿಸಿದೆ. ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ ಪೂಜಾರಿ ಜೊತೆಯಾಗಿ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ಹೊಳೆಯನ್ನು ಬೈಕ್ ಸಮೇತ ದಾಟಲು ಯತ್ನಿಸಿದ್ದಾರೆ. ಈ ವೇಳೆ, ಬೈಕ್ ಸಹಿತ ಹೊಳೆ ನೀರಿನಲ್ಲಿ ಕೊಚ್ಚಿ ಹೋಗಿರುತ್ತಾರೆ. ಅದೃಷ್ಟವಶಾತ್ ಬೈಕ್ ನದಿ ಬಂಡೆಗಳ ಎಡೆಯಲ್ಲಿ ಸಿಲುಕಿದ್ದು , ಯುವಕರಿಬ್ಬರು ಸಿನಿಮೀಯ ರೀತಿಯಲ್ಲಿ ಬದುಕುಳಿದಿದ್ದಾರೆ.
ಹಿತ್ತಿಲಪೇಲ ಆಸುಪಾಸಿನ ಪ್ರದೇಶ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿದ್ದು, ಮಳೆಗಾಲದಲ್ಲಿ ಹೊಳೆ ಧುಮ್ಮಿಕ್ಕಿ ಹರಿಯುತ್ತದೆ. ಇಲ್ಲೊಂದು ಸೇತುವೆ ನಿರ್ಮಿಸಬೇಕು ಎನ್ನುವ ಒತ್ತಾಯವನ್ನು ಸ್ಥಳೀಯರು ಮಾಡುತ್ತ ಬಂದಿದ್ದರೂ ಅರಣ್ಯ ಇಲಾಖೆಯ ಕಾನೂನಿನಿಂದಾಗಿ ಸಾಧ್ಯವಾಗಿಲ್ಲ.
ಪ್ರದೇಶದಲ್ಲಿ ಸುಮಾರು 9 ಕುಟುಂಬಗಳ 60ರಷ್ಟು ಜನರು ವಾಸಿಸುತ್ತಿದ್ದು, ಮಕ್ಕಳು, ಯುವಕರು, ಮಹಿಳೆಯರು ದೈನಂದಿನ ಕಾರ್ಯಕ್ಕಾಗಿ ಹೊಳೆ ದಾಟಿಕೊಂಡೇ ಹೋಗಬೇಕಾಗಿದೆ. ಮೂರು ದಿನಗಳಿಂದ ಭಾರೀ ಮಳೆ ಆಗುತ್ತಿದ್ದು ಹೊಳೆಯಲ್ಲಿ ನೀರಿನ ಹರಿವು ಹೆಚ್ಚಿದ್ದರೂ ಯುವಕರು ದುಸ್ಸಾಹಸಕ್ಕಿಳಿದು ಪಾರಾಗಿ ಬಂದಿದ್ದಾರೆ.
Close Call in Savanaalu
— Headline Karnataka (@hknewsonline) June 16, 2025
Two youths swept away while trying to cross a flooded stream on a bike near #Kudremukh National Park. Luckily, got stuck between rocks and escaped unharmed. Locals demand a bridge as monsoon risks rise. #Karnataka #Monsoon #Beltangady #FloodAlert pic.twitter.com/sw1vsiWApu
In a dramatic turn of events, two young men were swept away along with their bike while attempting to cross a flooded stream in Savanaalu village but managed to escape with their lives after getting stuck between rocks. The incident occurred at Hittilapela near Koodujalu, a region that connects Manjadabettu in Savanaalu village to the Hittilapela area within the Kudremukh National Park limits
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm