ಬ್ರೇಕಿಂಗ್ ನ್ಯೂಸ್
16-06-25 11:06 pm Mangalore Correspondent ಕರಾವಳಿ
ಮಂಗಳೂರು, ಜೂನ್ 16 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಆಗಿರುವ ಬೆಳವಣಿಗೆ ಮತ್ತು ಈ ಹಿಂದಿನ ಪೊಲೀಸ್ ಕಮಿಷನರ್ ನಡೆದುಕೊಂಡಿರುವ ರೀತಿ ಬಗ್ಗೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದಿದ್ದು, ದ್ವೇಷ ಭಾಷಣಗಳು, ಪ್ರಚೋದನಕಾರಿ ಹೇಳಿಕೆಗಳು, ಸಾಮಾಜಿಕ ಜಾಲತಾಣಗಳಲ್ಲಿ ಸಮಾಜಘಾತುಕ ವದಂತಿಗಳ ವಿರುದ್ಧ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿರುವ ಈ ಹಿಂದಿನ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಇತ್ತೀಚೆಗೆ ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ಅಪಾಯಕಾರಿ ಸ್ಥಿತಿಯನ್ನು ನಿರ್ಮಾಣ ಮಾಡಿದ್ದು ಈ ಬಗ್ಗೆ ಪತ್ರದ ಮೂಲಕ ತಮ್ಮ ಗಮನಕ್ಕೆ ತರುತ್ತಿದ್ದೇನೆ. ಗಮನಾರ್ಹ ಸಂಗತಿಯೆಂದರೆ, ಸಮಾಜಘಾತುಕ ವದಂತಿ ಹಬ್ಬಿಸುವುದು, ಪ್ರಚೋದನೆಗಳನ್ನು ಮಾಡುತ್ತಿದ್ದರೂ ಹಿಂದಿನ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದರು. ಈಗಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣದ ವಿರುದ್ಧ ತ್ವರಿತ ಕ್ರಮ ಕೈಗೊಂಡಿದ್ದಾರೆ.
ಒಂದು ವೇಳೆ ಹಿಂದಿನ ಅಧಿಕಾರಿಗಳು ಸೂಕ್ತ ಸಮಯದಲ್ಲಿ ಕ್ರಮ ಕೈಗೊಂಡಿದ್ದರೆ, ಕರಾವಳಿ ಭಾಗದಲ್ಲಿ ಒಂದೆರಡು ಧರ್ಮಾಧರಿತ ಕೊಲೆ ಮತ್ತು ಹಿಂಸಾಚಾರವನ್ನು ತಪ್ಪಿಸಬಹುದಾಗಿತ್ತು. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದರೋಡೆ, ಮಾದಕ ವಸ್ತು ಸಾಗಾಟ ಮತ್ತಿತರ ಸಮಾಜಘಾತುಕ ಕೆಲಸಗಳಲ್ಲಿ ನಿಷ್ಠೆಯಿಂದ ಮತ್ತು ತ್ವರಿತಗತಿಯಲ್ಲಿ ಕ್ರಮ ಕೈಗೊಂಡ ಈ ಹಿಂದಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣದ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ. ಅದಕ್ಕೆ ಕಾರಣಗಳೇನು ಎನ್ನುವ ಬಗ್ಗೆ ಸೂಕ್ತ ತನಿಖೆಯಾಗಬೇಕಿದೆ.
ಆಮೂಲಕ ನಮ್ಮ ರಾಜ್ಯದ ಆಂತರಿಕ ಶಾಂತಿ, ಸಾಮರಸ್ಯ ಹಾಗೂ ಸಾರ್ವಜನಿಕ ನಂಬಿಕೆಯನ್ನು ಮತ್ತಷ್ಟು ಬಲಪಡಿಸಬಹುದು ಎಂಬ ಆಶಯದಿಂದ ಈ ಪತ್ರವನ್ನು ತಮ್ಮ ಗಮನಕ್ಕೆ ತರುತ್ತಿದ್ದೇನೆ. ತಾವು ಈ ಬಗ್ಗೆ ಗಂಭೀರ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಯುಟಿ ಖಾದರ್, ತಮ್ಮ ಪತ್ರದಲ್ಲಿ ಗೃಹ ಸಚಿವರನ್ನು ಒತ್ತಾಯಿಸಿದ್ದಾರೆ.
Speaker UT Khader Writes to Home Minister, Demands Action Against Former Police Officials for Ignoring Hate Speech and Misinformation.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm