ಬ್ರೇಕಿಂಗ್ ನ್ಯೂಸ್
20-06-25 09:02 pm Mangalore Correspondent ಕರಾವಳಿ
ಮಂಗಳೂರು, ಜೂನ್ 20 : ಗ್ರಾಮ ಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ಜನಪ್ರತಿನಿಧಿಗಳು ಚರ್ಚಿಸುವ ಸಂಧರ್ಭದಲ್ಲಿ ತುಳು ಭಾಷೆ ಬಳಕೆ ಮಾಡುವುದಕ್ಕೆ ಕಾನೂನಿನ ನಿಯಮಾನುಸಾರ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಪ್ರತಿಕ್ರಿಯಿಸಿದ್ದಾರೆ.
ಕಾರ್ಕಳದ ಯಶಸ್ವಿ ನಾಗರಿಕ ಸೇವಾ ಸಂಘದ ಸಂಚಾಲಕ ಮುರಳೀಧರ ಎಂಬವರು ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರಿಗೆ ಮನವಿ ಸಲ್ಲಿಸಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಚರ್ಚಿಸುವಾಗ ತುಳು ಭಾಷೆ ಬಳಕೆ ಮಾಡದಂತೆ ಹಾಗೂ ಕನ್ನಡಕ್ಕೆ ಪ್ರಾಮುಖ್ಯತೆ ನೀಡುವಂತೆ ಆಗ್ರಹಿಸಿದ್ದರು. ಈ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರು ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.
ಆದರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರು ಎಲ್ಲಿಯೂ ತಮ್ಮ ಪತ್ರದಲ್ಲಿ ತುಳು ಭಾಷೆಯನ್ನು ನಿರ್ಬಂಧಿಸಿ ಉಲ್ಲೇಖಿಸಿಲ್ಲ ಎಂಬುದನ್ನು ಗಮನಿಸಬೇಕಾಗಿದೆ. ನಿಯಾಮನುಸಾರ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿರುವ ಪತ್ರವನ್ನು ಗಮನಿಸುವಾಗ ಗ್ರಾಮ ಪಂಚಾಯತ್ ಸಭೆಗಳಲ್ಲಿ ಜನಪ್ರತಿನಿಧಿಗಳು ಆಯಾ ಪ್ರದೇಶದ ಜನಾನುರಾಗಿ ಭಾಷೆಯನ್ನು ಬಳಕೆ ಮಾಡುವುದಕ್ಕೆ ಯಾವುದೇ ನಿರ್ಬಂಧ ಹಾಗೂ ತೊಡಕುಗಳಿರುವುದಿಲ್ಲ ಎಂಬುದನ್ನು ಸೂಚ್ಯವಾಗಿ ಉಲ್ಲೇಖಿಸುತ್ತದೆ. ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ಪಂಚಾಯತ್ ಜನಪ್ರತಿನಿಧಿಗಳು ತಮ್ಮ ಪ್ರಾದೇಶಿಕ ವ್ಯಾಪ್ತಿಯ ಭಾಷೆಗಳನ್ನು ಬಳಸುವುದು ಸರ್ವೇ ಸಾಮಾನ್ಯವಾಗಿ ನಡೆದುಕೊಂಡು ಬಂದಿರುವ ಪದ್ಧತಿಯಾಗಿದೆ. ಈ ಹಿನ್ನೆಲೆಯಲ್ಲಿ ತುಳು ಭಾಷೆ ಬಳಕೆಗೆ ಯಾವುದೇ ಅಡೆತಡೆಗಳಿರುವುದಿಲ್ಲ ಎಂಬುದನ್ನು ಗಮನಿಸಬೇಕಾಗಿದೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರ ಸೂಚನಾ ಪತ್ರವು ಇದೀಗ ಗೊಂದಲಕ್ಕೆ ಕಾರಣವಾಗುವುದರಿಂದ ಸದ್ರಿ ಪತ್ರವನ್ನು ವಾಪಾಸು ಪಡೆಯುವಂತೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಕೋರಿದ್ದಾರೆ. ಎಲ್ಲಾ ಭಾಷೆ, ಸಾಂಸ್ಕ್ರತಿಕ ವೈವಿಧ್ಯತೆಗೆ ಗೌರವ ಕೊಡುವುದು ನಮ್ಮ ದೇಶದ ಪರಂಪರೆಯಾಗಿದೆ. ಜೊತೆಗೆ ಸಂವಿಧಾನದತ್ತ ಅವಕಾಶ ಕೂಡ ಆಗಿರುತ್ತದೆ ಎಂದು ಅಕಾಡೆಮಿ ಅಧ್ಯಕ್ಷರು ಪ್ರತಿಕ್ರಿಯಿಸಿದ್ದಾರೆ.
There is no legal restriction on the use of the Tulu language during discussions held in Gram Panchayat general body meetings, said Taranath Gatti Kapikad, President of the Karnataka Tulu Sahitya Academy. He has urged officials to withdraw a recent letter that he says has created unnecessary confusion.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm