ಬ್ರೇಕಿಂಗ್ ನ್ಯೂಸ್
23-06-25 05:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 23 : ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು ಹತ್ಯೆ, ಹೆಣ್ಮಕ್ಕಳ ಅತ್ಯಾಚಾರ, ಕೊಲೆ ಕೃತ್ಯಗಳ ಬಗ್ಗೆ ತಿಳಿದಿರುವ ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪತ್ರದಲ್ಲಿ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು ಹತ್ಯೆ ಮತ್ತು ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಕೊಲೆಗಳನ್ನು ಮುಚ್ಚಿಹಾಕುವ ಸಲುವಾಗಿ, ಮೃತ ದೇಹಗಳನ್ನು ಹೂತು ಹಾಕಿದ್ದ ವ್ಯಕ್ತಿಯೊಬ್ಬ ತನ್ನ ಪಾಪಪ್ರಜ್ಞೆಯನ್ನು ಪರಿಹರಿಸಿಕೊಳ್ಳಲು ಧರ್ಮಸ್ಥಳ ಪೊಲೀಸ್ ಠಾಣೆಗೆ ಕೂಡಲೇ ಹಾಜರಾಗಿ ಶರಣಾಗುವ ನಿರ್ಧಾರ ಮಾಡಿರುತ್ತಾನೆ. ಮತ್ತು, ತಾನು ಹೂತು ಹಾಕಿರುವ ಮೃತದೇಹಗಳನ್ನು ಪೋಲೀಸರ ಸಮ್ಮುಖದಲ್ಲಿ ಹೊರತೆಗೆಯುವ ನಿರ್ಧಾರ ಮಾಡಿರುತ್ತಾನೆ; ಇತ್ತೀಚೆಗೆ ಹೊರ ತೆಗೆದ ಕಳೇಬರವೊಂದುನ್ನು ಪೋಲೀಸರಿಗೆ ಒಪ್ಪಿಸುವುದಾಗಿ ಹೇಳಿದ್ದಾನೆ ಎಂದು ಬರೆದಿರುವ ಪತ್ರ ವೈರಲ್ ಆಗಿದ್ದು ಆತನಿಗೆ ಪೊಲೀಸ್ ರಕ್ಷಣೆ ನೀಡಬೇಕೆಂದು ಬೆಂಗಳೂರಿನ ವಕೀಲರು ಪತ್ರ ಹರಿಯಬಿಟ್ಟಿದ್ದಾರೆ.
ಪತ್ರ ವೈರಲ್ ಆದ ಬೆನ್ನಲ್ಲೆ ದಕ್ಷಿಣ ಕನ್ನಡ ಪೊಲೀಲ್ ಇಲಾಖೆ ವತಿಯಿಂದ ಪ್ರಕಟಣೆ ನೀಡಲಾಗಿದ್ದು, ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ, ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿರುವುದು ಕಂಡುಬಂದಿರುತ್ತದೆ. ಈ ಪತ್ರದ ನೈಜತೆಯನ್ನು ಪರಿಶೀಲಿಸುವ ಸಲುವಾಗಿ, ಸದ್ರಿ ಪತ್ರದಲ್ಲಿ ನಮೂದಿಸಲಾಗಿದ್ದ ಬೆಂಗಳೂರಿನ ವಕೀಲರಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಸಂಪರ್ಕಿಸಿದಾಗ, ಸದ್ರಿ ವಕೀಲರು ವ್ಯಕ್ತಿಯೋರ್ವ ತನ್ನ ಬಳಿ ಬಂದು ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತನಗೆ ಮಾಹಿತಿ ಇರುವುದಾಗಿ ಹಾಗೂ ತಾನು ಪೊಲೀಸ್ ಠಾಣೆಗೆ ಶರಣಾಗಿ ಮಾಹಿತಿಯನ್ನು ನೀಡಲು ಸಿದ್ದವಿರುವುದಾಗಿ ತಿಳಿಸಿರುತ್ತಾರೆ. ಸದ್ರಿ ವ್ಯಕ್ತಿಗೆ ಅಗತ್ಯವಾದ ಕಾನೂನು ಸುರಕ್ಷತೆಯನ್ನು ಕಲ್ಪಿಸಿ, ಆ ಬಳಿಕ ಆತನನ್ನು ಠಾಣೆಗೆ ಹಾಜರುಪಡಿಸುವುದಾಗಿ ವಕೀಲರು ತಿಳಿಸಿರುತ್ತಾರೆ.
ಅದರಂತೆ ಸದ್ರಿ ವ್ಯಕ್ತಿ ಹಾಜರಾಗಿ ಮಾಹಿತಿ ನೀಡಿದಲ್ಲಿ, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಎಸ್ಪಿ ಡಾ.ಅರುಣ್ ತಿಳಿಸಿದ್ದಾರೆ. ಖಡಕ್ ಎಸ್ಪಿ ಜಿಲ್ಲೆಗೆ ಬಂದಿರುವಾಗಲೇ ಈ ರೀತಿಯ ಪತ್ರ ವೈರಲ್ ಆಗಿರುವುದು ಕುತೂಹಲ ಮೂಡಿಸಿದೆ.
A shocking letter has gone viral on social media, allegedly written by a man claiming to possess critical information about multiple heinous crimes — including the sexual assault and murder of girls — that reportedly took place in Dharmasthala village of Belthangady taluk, Dakshina Kannada district.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm