ಬ್ರೇಕಿಂಗ್ ನ್ಯೂಸ್
22-12-20 05:48 pm Mangalore Correspondent ಕರಾವಳಿ
ಮಂಗಳೂರು, ಡಿ.22: ಬ್ರಿಟನ್ನಲ್ಲಿ ಹೊಸ ರೀತಿಯ ಕೊರೊನಾ ವೈರಸ್ ಆತಂಕ ಸೃಷ್ಟಿಸಿರುವಾಗಲೇ 15 ಮಂದಿ ಇಂಗ್ಲೆಂಡಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬಂದಿದ್ದಾರೆಂಬ ಮಾಹಿತಿ ಕರಾವಳಿಯಲ್ಲಿ ಆತಂಕ ಸೃಷ್ಟಿಸಿದೆ.
ಎರಡು ದಿನಗಳ ಹಿಂದೆ ಬೆಂಗಳೂರು ಮೂಲಕ 15 ಮಂದಿ ಮಂಗಳೂರಿಗೆ ಆಗಮಿಸಿದ್ದಾರೆ. ಈ ಪೈಕಿ ಏಳು ಮಂದಿಯನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಪತ್ತೆ ಮಾಡಿದ್ದು, ಇನ್ನೂ ಎಂಟು ಮಂದಿಯ ಪತ್ತೆ ಆಗಿಲ್ಲ ಎನ್ನಲಾಗುತ್ತಿದೆ. ಬ್ರಿಟನ್ನಲ್ಲಿ ಕಟ್ಟೆಚ್ಚರ ಘೋಷಣೆ ಆದಕೂಡಲೇ ಭಾರತ- ಬ್ರಿಟನ್ ನಡುವಿನ ವಿಮಾನ, ಹಡಗು ಸಂಚಾರವನ್ನು ನಿರ್ಬಂಧಿಸಿದೆ.
ಆದರೆ, ಇದಕ್ಕೂ ಮುನ್ನ ಬ್ರಿಟನ್ನಿಂದ ಆಗಮಿಸಿದವರು ಕಡ್ಡಾಯವಾಗಿ ಕ್ವಾರಂಟೈನ್ ಆಗಬೇಕೆಂದು ಸೂಚನೆ ನೀಡಲಾಗಿದೆ. ಈ ನಡುವೆ, ಕರ್ನಾಟಕ ರಾಜ್ಯಕ್ಕೆ 135 ಮಂದಿ ಇಂಗ್ಲೆಂಡಿನಿಂದ ಆಗಮಿಸಿದ್ದಾರೆಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಬಗ್ಗೆ ರಾಜ್ಯ ಸರಕಾರ ಆಯಾ ಜಿಲ್ಲಾಡಳಿತಕ್ಕೆ ಪಟ್ಟಿ ನೀಡಿದ್ದು, ಅವರ ಮೇಲೆ ನಿಗಾ ಇಡುವಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಹೆಸರು ಮತ್ತು ಮೊಬೈಲ್ ನಂಬರ್ ಇದ್ದರೂ, ಕೆಲವು ಮೊಬೈಲ್ ಸ್ವಿಚ್ ಆಫ್ ಆಗಿದ್ದು ಅಧಿಕಾರಿಗಳನ್ನು ಆತಂಕಕ್ಕೀಡು ಮಾಡಿದೆ.
ಮಂಗಳೂರಿಗೆ ಆಗಮಿಸಿದ್ದ 15 ಮಂದಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹಿಡಿದೇ ಬಂದಿದ್ದರು ಎನ್ನಲಾಗುತ್ತಿದೆ. ಆದರೂ ತಮ್ಮೂರಿಗೆ ತೆರಳುವ ಮುನ್ನ ಕಡ್ಡಾಯವಾಗಿ ಕ್ವಾರಂಟೈನ್ ಆಗಬೇಕೆಂಬ ನಿಯಮ ಪಾಲನೆ ಮಾಡಬೇಕಿದೆ. ಹೊಸ ರೀತಿಯ ವೈರಸ್ ಹರಡದಂತೆ ಆರೋಗ್ಯ ಇಲಾಖೆ ಸೇರಿದಂತೆ ಆಯಾ ಜಿಲ್ಲಾಡಳಿತಗಳು ಎಚ್ಚರಿಕೆ ವಹಿಸಬೇಕೆಂದು ರಾಜ್ಯ ಸರಕಾರ ಸೂಚನೆ ನೀಡಿದೆ.
New Coronavirus Strain fear grips in Mangalore as 15 persons have entered Mangalore coming from UK. 7 have been found and still 8 persons are out of trace it is said.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm