ಬ್ರೇಕಿಂಗ್ ನ್ಯೂಸ್
22-12-20 09:31 pm Mangaluru correspondent ಕರಾವಳಿ
ಕೊಣಾಜೆ, ಡಿ.22: ಹರೇಕಳ ಮತಗಟ್ಟೆಯ ಬಳಿ ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆಗೈದ ಎಸ್ ಡಿಪಿಐ ಪಕ್ಷದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಯು.ಟಿ ಖಾದರ್ ನೇತೃತ್ವದಲ್ಲಿ ಕೊಣಾಜೆ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದಾರೆ.
ಚುನಾವಣಾ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ ಹರೇಕಳ ರಾಮಕೃಷ್ಣ ಪ್ರೌಢ ಶಾಲಾ ಮತಗಟ್ಟೆಯ ಮುಂಭಾಗದಲ್ಲಿ ಕಾಂಗ್ರೆಸ್ ಹಾಗೂ ಎಸ್ ಡಿಪಿಐ ಕಾರ್ಯಕರ್ತರ ನಡುವೆ ನಡೆದ ಚಕಮಕಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಝಕಾರಿಯ ಮಲಾರ್ ಎಂಬವರ ಮೇಲೆ ಹಲ್ಲೆ ನಡೆಸಲಾಗಿತ್ತು. ಗಲಾಟೆಯನ್ನು ತಡೆಯಲು ಪೊಲೀಸರು ಲಘು ಲಾಠಿ ಪ್ರಹಾರವನ್ನು ನಡೆಸಿದ್ದರು. ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಯು.ಟಿ.ಖಾದರ್ ನೇತೃತ್ವದಲ್ಲಿ ಇಂದು ಸಂಜೆ ಕೊಣಾಜೆ ಠಾಣೆಗೆ ಮುತ್ತಿಗೆ ಹಾಕಿ ಒತ್ತಾಯಿಸಿದ್ದಾರೆ.
ಮಾತಿನ ಚಕಮಕಿ ಹಾಗೂ ಘರ್ಷಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಝಕಾರಿಯ ಮಲಾರ್ ಅವರಿಗೆ ಎಸ್ ಡಿಪಿ ಐ ಕಾರ್ಯಕರ್ತರು ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಹಲ್ಲೆಗೊಳಗಾದ ಝಕಾರಿಯ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ,ಆರೋಪಿಗಳಾದ SDPI ಕಾರ್ಯಕರ್ತರಾದ ಐಬು, ಮುಬಾರಕ್, ನ್ಯೂಮನ್ ವಿರುದ್ಧ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಕೊಣಾಜೆ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಯು.ಟಿ.ಖಾದರ್ ಹಾಗೂ ಕಾಂಗ್ರೆಸ್ ಮುಖಂಡರು ಬುಧವಾರ ಸಂಜೆಯೊಳಗೆ ಆರೋಪಿಗಳನ್ನು ಬಂಧಿಸುವಂತೆ ಪೊಲೀಸ್ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
Also Read: ಪಂಚಾಯತ್ ಫೈಟ್ ; ಹರೇಕಳದಲ್ಲಿ ಕಾಂಗ್ರೆಸ್-SDPI ನಡುವೆ ಘರ್ಷಣೆ, ಗುಂಪು ಚದುರಿಸಲು ಲಾಠಿಚಾರ್ಜ್ !
Congress activists gheraoed the Konaje police station under the leadership of MLA U T Khader demanding the arrest of SDPI workers.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm