Mangalore Police, New Rules, Festival; ಮೊಸರು ಕುಡಿಕೆ, ಗಣೇಶೋತ್ಸವ, ಮೊಹರಂ ಸೇರಿ ಹಬ್ಬಗಳ ಆಚರಣೆಗೆ ಷರತ್ತು ; ಪೂರ್ವಾನುಮತಿ ಕಡ್ಡಾಯ, ರಾತ್ರಿ ಮೆರವಣಿಗೆ ಇಲ್ಲ, ಡಿಜೆ ನಿಷೇಧ, ಪೊಲೀಸ್ ಆಯುಕ್ತರ ಸೂಚನೆ 

03-07-25 03:43 pm       Mangalore Correspondent   ಕರಾವಳಿ

ಮುಂಬರುವ ಹಬ್ಬದ ಋತುವಿನ ಸಂದರ್ಭದಲ್ಲಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳಿಗೆ ಸೂಕ್ತ ಮುಂಜಾಗ್ರತೆ ಕೈಗೊಳ್ಳುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸರು ಹಲವು ಷರತ್ತುಗಳನ್ನು ವಿಧಿಸಿದ್ದು ಅದರಂತೆ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಆದೇಶ ಮಾಡಿದ್ದಾರೆ. 

ಮಂಗಳೂರು, ಜುಲೈ 3 : ಮುಂಬರುವ ಹಬ್ಬದ ಋತುವಿನ ಸಂದರ್ಭದಲ್ಲಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳಿಗೆ ಸೂಕ್ತ ಮುಂಜಾಗ್ರತೆ ಕೈಗೊಳ್ಳುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸರು ಹಲವು ಷರತ್ತುಗಳನ್ನು ವಿಧಿಸಿದ್ದು ಅದರಂತೆ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಆದೇಶ ಮಾಡಿದ್ದಾರೆ. 

ಮೊಹರಂ (06-07-2025), ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ (16-08-2025), ಗಣೇಶ ಚತುರ್ಥಿ (27-08-2025), ಈದ್ ಮಿಲಾದ್ (16-09-2025), ಶಾರದಾ ಮಹೋತ್ಸವ (22-09-2025 ರಿಂದ 02-10-2025), ದೀಪಾವಳಿ (20-10-2025 00 22-10-2025), ಕ್ರಿಸ್ಮಸ್ (25-12-2025) ಆಚರಣೆ ಇರಲಿದ್ದು ಈ ಹಬ್ಬಗಳ ಸಂದರ್ಭದಲ್ಲಿ ಯಾವುದೇ ಕಾರ್ಯಕ್ರಮ ಹಮ್ಮಿಕೊಳ್ಳುವುದಿದ್ದರೂ ಮೊದಲೇ ಅನುಮತಿ ಪಡೆದಿರಬೇಕು. ಪ್ರತಿ ಹಬ್ಬದ ಮುಂಚಿತವಾಗಿ ನಿಖರವಾದ ಮಾರ್ಗಸೂಚಿಗಳನ್ನು (ರಸ್ತೆ, ಸಮಯ, ಧ್ವನಿ ನಿಯಂತ್ರಣ) ಹೊರಡಿಸಲಾಗುತ್ತದೆ. ಷರತ್ತುಗಳ ಪಾಲನೆಗಾಗಿ ಆಯೋಜಕರು ತಮ್ಮ ಪ್ರತಿನಿಧಿಗಳ ಹೆಸರು ಮತ್ತು ಸಂಪರ್ಕ ವಿವರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಯಾವುದೇ ಘಟನೆಯ ಹೊಣೆಗಾರಿಕೆ ಈ ನಿಯೋಜಿತ ವ್ಯಕ್ತಿಗಳ ಮೇಲೆ ಇರಲಿದೆ.

ಕಡ್ಡಾಯ ಪೊಲೀಸ್ ಅನುಮತಿ

ಪೊಲೀಸ್ ಹಾಗೂ ಇತರ ಸಂಬಂಧಿತ ಇಲಾಖೆಗಳ ಲಿಖಿತ ಅನುಮತಿ ಇಲ್ಲದೆ ಯಾವುದೇ ಕಾರ್ಯಕ್ರಮ ಅಥವಾ ಮೆರವಣಿಗೆ ನಡೆಸಬಾರದು. ಯಾವುದೇ ಕಾರಣಕ್ಕೂ ರಾತ್ರಿ 11:30 ಗಂಟೆಯ ನಂತರ ಯಾವುದೇ ಮೆರವಣಿಗೆಯನ್ನು ನಡೆಸಲು ಅನುಮತಿಸಲಾಗದು. ಈ ಸಮಯದ ನಂತರ ನಡೆಯುವ ಯಾವುದೇ ಸಮಾವೇಶವನ್ನು ಕಾನೂನುಬಾಹಿರ ಸಮಾವೇಶವೆಂದು ಪರಿಗಣಿಸಲಾಗುವುದು. ಖಾಸಗಿ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸುವುದಕ್ಕೆ ಆ ಸ್ಥಳದ ಮಾಲೀಕರಿಂದ ನಿರಾಕ್ಷೇಪಣಾ ಪತ್ರ (NOC) ಪಡೆದು ಹಾಜರುಪಡಿಸುವುದು ಕಡ್ಡಾಯವಾಗಿದೆ. ಅನುಮೋದಿತ ಸ್ಥಳ ಅಥವಾ ಮಾರ್ಗದಲ್ಲಿಯೇ ಕಾರ್ಯಕ್ರಮ ನಡೆಸಬೇಕು. ಯಾವುದೇ ವ್ಯತಿರಿಕ್ತತೆಯನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗುತ್ತದೆ.

Pune : Koregaon Park Cafe Raided by Social Security Cell, Sound System  Seized For Noise Pollution - PUNE PULSE

ಡಿಜೆ ನಿಷೇಧ ; ಧ್ವನಿವರ್ಧಕಕ್ಕೆ ಅನುಮತಿ ಅಗತ್ಯ 

ಡಿ.ಜೆ, ಜೋರಾದ ಸ್ಪೀಕ‌ರ್ ಅಥವಾ ಈ ರೀತಿಯ ಯಾವುದೇ ಧ್ವನಿವರ್ಧಕ ಉಪಕರಣಗಳ ಬಳಕೆ ಸಂಪೂರ್ಣ ನಿಷೇಧವಾಗಿದೆ. ಧ್ವನಿವರ್ಧಕ ಬಳಕೆಗೆ ಮುಂಚಿತವಾಗಿ ಅನುಮತಿ ಪಡೆಯುವುದು ಅಗತ್ಯವಿದೆ ಮತ್ತು ರಾತ್ರಿ 10 ಗಂಟೆಗೆ ಅವುಗಳನ್ನು ಸ್ಥಗಿತಗೊಳಿಸಬೇಕು. ಶಬ್ದ ಮಟ್ಟಗಳು ಈ ಮಿತಿಗಳ ಒಳಗಿರಬೇಕು: ವಾಣಿಜ್ಯ ಪ್ರದೇಶ - 65 ಡೆಸಿಬಲ್, ವಾಸಸ್ಥಳ - 55 ಡೆಸಿಬಲ್, ನಿಶ್ಯಬ್ದ ವಲಯ - 50 ಡೆಸಿಬಲ್ ಆಗಿರುತ್ತದೆ. 

IT Ministry announces tighter security protocols for CCTV Systems

24x7 ಭದ್ರತೆ ಮತ್ತು ಸಿಸಿಟಿವಿ ಕಡ್ಡಾಯ 

ಆಯೋಜಕರು ಸ್ಥಳದಲ್ಲಿ 24x7 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಬೇಕು ಹಾಗೂ 30 ದಿನಗಳ ಕಾಲ ದೃಶ್ಯಾವಳಿ ಸಂಗ್ರಹಿಸಬೇಕು. ಯಾವುದೆ ಘೋಷಣೆಗಳು, ಭಿತ್ತಿಪತ್ರಗಳು, ಪ್ರದರ್ಶನಗಳು ಅಥವಾ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳ ವಿಷಯಗಳು ಯಾವುದೇ ಧರ್ಮದ ವಿರೋಧ ಅಥವಾ ದ್ವೇಷವನ್ನು ಉಂಟುಮಾಡುವ ರೀತಿಯಲ್ಲಿರಬಾರದು.

Struggling with volunteers? Try volunteer profiling to boost recruitment in  your non-profit

ಜನಸಂದಣಿಗೆ ಕಡ್ಡಾಯ ಸ್ವಯಂಸೇವಕರ ನೇಮಕಾತಿ 

ಕಾರ್ಯಕ್ರಮ ಅನುಮತಿಯಲ್ಲಿ ತಿಳಿಸಿದ ಸಾಮರ್ಥ್ಯ ಮೀರದಂತೆ ಜನಸಮೂಹ ನಿಯಂತ್ರಿಸಬೇಕು. ಎಲ್ಲ ಕಾರ್ಯಕ್ರಮಕ್ಕೂ ಸಮರ್ಪಕ ಸ್ವಯಂಸೇವಕರನ್ನು ನಿಯೋಜಿಸಿಕೊಳ್ಳಬೇಕು.

ಪೆಂಡಾಲ್ ಎತ್ತರ ನಿಯಮಗಳು

ಪೆಂಡಾಲು, ಕಾರ್ಯಕ್ರಮದಲ್ಲಿ ಬಳಸುವ ವಾಹನಗಳು ಇತ್ಯಾದಿಗಳ ಎತ್ತರಗಳ ಕಾನೂನು ಅಥವಾ ಮೆಸ್ಕಾಂ ಮಾನದಂಡಗಳನ್ನು ಮೀರುವಂತಿರಬಾರದು. ವಾಹನಗಳು ನೋಂದಣಿ ಪತ್ರ, ದೃಢತೆ ಪ್ರಮಾಣಪತ್ರ, ವಿಮೆ ಮತ್ತು PUC ಪ್ರಮಾಣ ಪತ್ರ ಹೊಂದಿರಬೇಕು.

Fire Brigade in Bangalore, Fire Stations Bangalore, Fire Services

ಅಗ್ನಿಶಾಮಕ ಮತ್ತು ತುರ್ತು ವ್ಯವಸ್ಥೆ ಅಗತ್ಯ 

ಕಾರ್ಯಕ್ರಮ ನಡೆಯುವಲ್ಲಿ ಅಗ್ನಿ ನಂದಕಗಳು, ಆಂಬುಲೆನ್ಸ್, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇಟ್ಟುಕೊಳ್ಳುವುದು ಕಡ್ಡಾಯವಾಗಿವೆ. ಬೆಂಕಿಯ ಮೂಲಗಳ ಬಳಿಯಲ್ಲಿ ಸುಲಭವಾಗಿ ಹೊತ್ತಿಕೊಳ್ಳುವ ವಸ್ತುಗಳನ್ನು ಇರಿಸಬಾರದು. ವಿಷಕಾರಿ ಬಣ್ಣಗಳು, ನಿಷೇಧಿತ ರಾಸಾಯನಿಕಗಳು, ಏಕ ಬಳಕೆ ಪ್ಲಾಸ್ಟಿಕ್ ನಿಷೇದಿಸಿದೆ.

ವಾಹನ ಮತ್ತು ಪಾದಚಾರಿ ಸಂಚಾರಕ್ಕೆ ಯಾವುದೇ ತಡೆ ಇಲ್ಲದಂತೆ ವ್ಯವಸ್ಥೆ ಮಾಡಬೇಕು. ತುರ್ತು ಮಾರ್ಗಗಳಿಗೆ ತಡ ಉಂಟುಮಾಡಬಾರದು. ನಿಗದಿತ ಸ್ಥಳದಲ್ಲಿಯೇ ಪಾರ್ಕಿಂಗ್ ವ್ಯವಸ್ಥೆ ಇರಬೇಕು. ಯಾವುದೇ ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಹಾನಿಯುಂಟು ಮಾಡಬಾರದು. ಕಾರ್ಯಕ್ರಮದ ಪೂರ್ಣ ವಿವರಗಳನ್ನು ಮುಂಚಿತವಾಗಿ ನೀಡಬೇಕು. ಅನುಮತಿ ಪತ್ರದಲ್ಲಿ ನೀಡಿದ ಸಮಯವನ್ನು ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಪೊಲೀಸ್ ಸೂಚನೆಗಳನ್ನು ಪಾಲಿಸಬೇಕು. ಕಾರ್ಯಕ್ರಮದ ಸಮಯ ಮಹಿಳೆಯರ ಚುಡಾವಣೆ, ಹಿಂಬಾಲಿಸುವುಕ್ಕೆ, ಲೈಂಗಿಕ ಕಿರುಕುಳ ಮುಂತಾದ ಅಪರಾಧಗಳು ನಡೆಯದಂತೆ ನೋಡಿಕೊಳ್ಳಬೇಕು.

ಸ್ವಚ್ಛತೆ, ಫ್ಲೆಕ್ಸ್ ಮತ್ತು ಬ್ಯಾನರ್ ನಿಯಂತ್ರಣ 

ಯಾವುದೇ ಬ್ಯಾನರ್ ಅಥವಾ ಪ್ಲೆಕ್ಸ್ ಅನ್ನು ಸಂಬಂಧಿತ ಪ್ರಾಧಿಕಾರದಿಂದ ಮುಂಚಿತ ಅನುಮತಿ ಇಲ್ಲದೆ ಹಾಕಬಾರದು. ಹಾಕಿದರೂ ಕಾರ್ಯಕ್ರಮ ಮುಗಿದ ತಕ್ಷಣ ಅವುಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಬೇಕು. ಕಾರ್ಯಕ್ರಮಗಳಲ್ಲಿ ಸಾರ್ವಜನಿಕ ಸ್ಥಳದಲ್ಲಿ ಶಸ್ತ್ರಾಸ್ತ್ರ, ಹರಿತವಾದ ಆಯುಧಗಳು ಇತ್ಯಾದಿ ಅಪಾಯಕಾರಿ ಆಯುಧಗಳ ಪ್ರದರ್ಶನ ಮತ್ತು ಸಾಗಾಟ ಮಾಡಬಾರದು. ಮುಂಚಿತ ಅನುಮತಿ ಇಲ್ಲದೆ ಯಾವುದೇ ಡೋನ್ ಅಥವಾ UAV ಬಳಸುವುದು ನಿಷಿದ್ಧ.

ಮೆರವಣಿಗೆ ಅಥವಾ ಪ್ರದರ್ಶನಗಳಲ್ಲಿ ಪ್ರಾಣಿಗಳನ್ನು ಬಳಸಲು ಮುಂಚಿತ ಅನುಮತಿ ಪಡೆಯಬೇಕು ಮತ್ತು ಪ್ರಾಣಿ ಹಕ್ಕುಗಳ ನಿಯಮ ಪಾಲನೆ ಕಡ್ಡಾಯ. ಪೊಲೀಸರು ಅಥವಾ ಅಧಿಕೃತ ಅಧಿಕಾರಿಗಳು ಯಾವುದೇ ಸಮಯದಲ್ಲಿ ಸ್ಥಳವನ್ನು ತಪಾಸಣೆ ಮಾಡಬಹುದು. ಆಯೋಜಕರು ಮತ್ತು ಸಾರ್ವಜನಿಕರು ಯಾವುದೇ ಸಂಶಯಾಸ್ಪದ ಚಟುವಟಿಕೆ, ಸುಳ್ಳು ಮಾಹಿತಿ ಅಥವಾ ಗಲಭೆಗಳನ್ನು ಹತ್ತಿರದ ಪೊಲೀಸ್ ಠಾಣೆಗೆ ಅಥವಾ 112 ಗೆ ಕರೆಮಾಡಿ ವರದಿ ಮಾಡಬೇಕು.

ವಿಧಿಸಲಾದ ಯಾವುದೇ ಷರತ್ತುಗಳ ಉಲ್ಲಂಘನೆಯು ಭಾರತೀಯ ನ್ಯಾಯ ಸಂಹಿತೆ 2023, ಕರ್ನಾಟಕ ಪೊಲೀಸ್ ಕಾಯ್ದೆ 1963, ಪರಿಸರ ಸಂರಕ್ಷಣಾ ಕಾಯ್ದೆ 1986, ಮೋಟಾರು ವಾಹನ ಕಾಯ್ದೆ 1988, ಮಾಹಿತಿ ತಂತ್ರಜ್ಞಾನ ಕಾಯ್ದೆ 2000, ಶಸ್ತ್ರಾಸ್ತ್ರ ಕಾಯ್ದೆ 1959, ಡೋನ್ ನಿಯಮಗಳು 2021, ಸ್ಫೋಟಕಗಳ ಕಾಯ್ದೆ 1884 ಮತ್ತು ಇತರ ಸಂಬಂಧಿತ ಕಾನೂನುಗಳ ಅಡಿಯಲ್ಲಿ ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಲಾಗುವುದು ಎಂದು ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ‌

As the festive season approaches, Mangaluru City Police have announced a set of strict conditions for organizing public events and processions to ensure safety, law, and order. Police Commissioner Sudhir Reddy has instructed all organizers to strictly follow these guidelines for upcoming festivals, including: