ಬ್ರೇಕಿಂಗ್ ನ್ಯೂಸ್
09-07-25 06:53 pm Mangalore Correspondent ಕರಾವಳಿ
ಮಂಗಳೂರು, ಜುಲೈ 9 : ಸುರತ್ಕಲ್ ವ್ಯಾಪ್ತಿಯಲ್ಲಿ ಸೋಮವಾರ ಇಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಒಬ್ಬರು 18 ವರ್ಷ ವಿದ್ಯಾರ್ಥಿಯಾದರೆ ಮತ್ತೊಬ್ಬರು 45 ವರ್ಷದ ಮಧ್ಯ ವಯಸ್ಕ. ಆರೋಗ್ಯವಾಗಿದ್ದ ಇಬ್ಬರೂ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದು ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.
ಆರೋಗ್ಯದಿಂದಿದ್ದ 18ರ ಹರೆಯದ ಯುವಕ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕೃಷ್ಣಾಪುರದಲ್ಲಿ ಜು.7ರಂದು ಸಂಭವಿಸಿದೆ. ಕೃಷ್ಣಾಪುರ ಹಿಲ್‌ಸೈಡ್ ನಿವಾಸಿ ಅಸ್ಲರ್ ಅಲಿ ಅವರ ಪುತ್ರ ಅಫ್ತಾಬ್ (18) ಮೃತಪಟ್ಟವರು. ಸುರತ್ಕಲ್‌ನಲ್ಲಿ ಎಲೆಕ್ಟಿಕಲ್ ಎಂಜಿನಿಯರಿಂಗ್ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದು ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ. ತಂದೆ ಆಟೋ ರಿಕ್ಷಾ ಚಾಲಕರಾಗಿದ್ದು, ಮಧ್ಯಾಹ್ನದ ವರೆಗೂ ಮಗನೊಂದಿಗೆ ಮನೆಯಲ್ಲಿದ್ದು, ಬಳಿಕ ಕೆಲಸಕ್ಕೆ ಹೋಗಿದ್ದರು. ಈ ಸಂದರ್ಭದಲ್ಲಿ ಅಫ್ತಾಬ್ ಸ್ನಾನಕ್ಕೆಂದು ಹೊರಡುತ್ತಿದ್ದಂತೆ ಕುಸಿದು ಬಿದ್ದರು ಎನ್ನಲಾಗಿದೆ.
ಅಸ್ಲರ್ ಅಲಿ ಅವರ ನಾಲ್ವರು ಮಕ್ಕಳಲ್ಲಿ ಅಫ್ತಾಬ್ ಏಕೈಕ ಪುತ್ರ. ಮೂವರು ಸಹೋದರಿಯರಿದ್ದು, ಎಲ್ಲರಿಗೂ ವಿವಾಹವಾಗಿದೆ. ತಾಯಿ ಕೋವಿಡ್ ಸಮಯದಲ್ಲಿ ನಿಧನ ಹೊಂದಿದ್ದರು. ತಂದೆ ಮತ್ತು ಮಗ ಮಾತ್ರ ಜತೆಯಲ್ಲಿ ವಾಸಿಸುತ್ತಿದ್ದರು.
45ರ ವ್ಯಕ್ತಿ ಕುಸಿದು ಸಾವು
ಬೈಕಂಪಾಡಿಯಲ್ಲಿ ಆಟೋರಿಕ್ಷಾ ಚಾಲಕರಾಗಿದ್ದ ಅನ್ವರ್ (45) ಅಂಗರಗುಂಡಿಯ ತನ್ನ ಮನೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸ್ವಲ್ಪ ಸಮಯದ ಹಿಂದೆ ಬೆನ್ನು ನೋವಿಗೆ ತುತ್ತಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಉಳಿದಂತೆ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಆಟೋ ರಿಕ್ಷಾ ಚಲಾಯಿಸುತ್ತ ನಿತ್ಯ ಜೀವನ ನಡೆಸುತ್ತಿದ್ದರು. ರವಿವಾರ ಬೆಳಗ್ಗೆ ಎಂದಿನಂತೆ ಎದ್ದಾಗ ತಲೆಸುತ್ತು ಬಂದಂತಾಗಿ ಕುಸಿದು ಬಿದ್ದಿದ್ದರು. ತತ್‌ಕ್ಷಣ ಕಾರಿನಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದರೂ ಪರೀಕ್ಷಿಸಿದ ವೈದ್ಯರು ಅನ್ವರ್ ಮೃತಪಟ್ಟಿರುವುದಾಗಿ ತಿಳಿಸಿಸಿದರು. ಮೃತರು ಪತ್ನಿ, ಮೂವರು ಪುತ್ರಿಯರು ಮತ್ತು ಪುತ್ರನನ್ನು ಅಗಲಿದ್ದಾರೆ.
In a deeply unsettling development, two individuals — an 18-year-old student and a 45-year-old man — died of sudden cardiac arrest within a single day in the Surathkal area of Mangaluru, raising alarm among local residents.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm