ಬ್ರೇಕಿಂಗ್ ನ್ಯೂಸ್
12-07-25 11:00 pm Mangalore Correspondent ಕರಾವಳಿ
ಮಂಗಳೂರು, ಜುಲೈ 12 : ಧರ್ಮಸ್ಥಳದಲ್ಲಿ ಹಲವು ಕೊಲೆಗಳನ್ನು ಮಾಡಿದ್ದು ಹೆಣಗಳನ್ನು ತಾನೇ ಹೂತು ಹಾಕಿದ್ದೇನೆಂದು ವ್ಯಕ್ತಿಯೊಬ್ಬರು ನೀಡಿರುವ ದೂರಿನ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈಗಾಗಲೇ ತಾನು ಅಗೆದು ತೆಗೆದಿದ್ದೇನೆಂದು ಹೇಳಿರುವ ಅಸ್ಥಿಪಂಜರದ ತುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ನಡುವೆ, ಘಟನೆ ಕುರಿತಾಗಿ ಆಭಾಸಕರ ವರದಿ ಮಾಡಿರುವ ಬಗ್ಗೆ ಯೂಟ್ಯೂಬರ್ ಸಮೀರ್ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ. ದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ, ಸಾಕ್ಷಿ ದೂರುದಾರರ ಬಗ್ಗೆ ಹಾಗೂ ಪ್ರಕರಣದ ಬಗ್ಗೆ ಇತರೆ ಹೆಚ್ಚಿನ ಮಾಹಿತಿಗಳನ್ನು ಒಳಗೊಂಡಿರುವ ಕಾಲ್ಪನಿಕವಾಗಿ (AI) ಸೃಷ್ಟಿಸಲಾದ, ಸುಳ್ಳು ಮಾಹಿತಿಗಳನ್ನೊಳಗೊಂಡ ವಿಡಿಯೋವನ್ನು ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಸಾರ ಮಾಡಲಾಗಿದ್ದು ಉದ್ದೇಶಪೂರ್ವಕ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಹಿನ್ನೆಲೆಯಲ್ಲಿ ಸಮೀರ್ ಎಂ.ಡಿ ಎಂಬ ಯೂಟ್ಯೂಬರ್ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿಅ.ಕ್ರ : 42/2025 ಕಲಂ: 192, 240, 353(1)(b) bNS ರಂತೆ ಪ್ರಕರಣ ದಾಖಲಿಸಲಾಗಿದೆ.
ಇದಲ್ಲದೆ, ಜುಲೈ 11ರಂದು ಸಾಕ್ಷಿ ದೂರುದಾರರ ಪರವಾದ ವಕೀಲರು ಪತ್ರಿಕಾಗೋಷ್ಠಿಯಲ್ಲಿ ನೀಡಿರುವ ಕೆಲವು ಹೇಳಿಕೆಗಳು ತಪ್ಪಾಗಿರುತ್ತದೆ ಎಂದು ದ.ಕ. ಎಸ್ಪಿ ಅರುಣ್ ಅಭಿಪ್ರಾಯ ಪಟ್ಟಿದ್ದಾರೆ. ಇದೇ ವೇಳೆ, ಸದ್ರಿ ಪ್ರಕರಣದ ತನಿಖಾಧಿಕಾರಿಯನ್ನು ಬದಲಾಯಿಸಲು ಅಥವಾ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (SIT) ರಚಿಸಲು ಸಾರ್ವಜನಿಕ ಹಿತಾಸಕ್ತಿಯ ಹೆಸರಿನಲ್ಲಿ ಕೆಲವು ಗುಂಪನ್ನು ಪ್ರತಿನಿಧಿಸುತ್ತಿರುವ ವ್ಯಕ್ತಿಗಳು ಹೇಳುತ್ತಿರುವ ವಿಚಾರ ಗಮನಕ್ಕೆ ಬಂದಿದೆ. ಈ ಬಗ್ಗೆ ದೂರುದಾರರ ಪರವಾದ ವಕೀಲರಿಗೆ ಅರಿವಿದೆಯೇ ಎಂಬುದನ್ನು ಹಾಗೂ ಈ ಬಗ್ಗೆ ಸಾಕ್ಷಿ ದೂರುದಾರರ ನಿಲುವೇನು ಎಂಬುದನ್ನು ದೃಢಪಡಿಸಿಕೊಳ್ಳಬೇಕಾಗಿದೆ ಎಂದು ಎಸ್ಪಿ ಪ್ರತಿಕ್ರಿಯಿಸಿದ್ದಾರೆ.
Police have registered another FIR against YouTuber Sameer M.D. in connection with the ongoing investigation into the controversial Dharmasthala case, where a man claimed to have buried multiple murder victims himself. Authorities have already recovered skeletal remains based on his statements, and the investigation is ongoing.
12-07-25 10:47 pm
HK News Desk
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
ಸಿಎಂ ಬದಲಾವಣೆ ಎಲ್ಲ ಮುಗಿದ ಕಥೆ, ಸೆಪ್ಟೆಂಬರ್ನಲ್ಲಿ...
11-07-25 05:41 pm
24 ಗಂಟೆಯಲ್ಲಿ ಭಟ್ಕಳ ನಗರವನ್ನು ಸ್ಫೋಟಿಸುತ್ತೇನೆ ;...
11-07-25 04:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
12-07-25 11:00 pm
Mangalore Correspondent
Mangalore Accident, Bolero, Deralakatte: ದೇರಳ...
12-07-25 10:26 pm
Gas Leak at MRPL, Mangalore, death: ಎಂಆರ್ ಪಿಎ...
12-07-25 01:42 pm
Dharmasthala News, Dead bodies, Court: ಧರ್ಮಸ್...
11-07-25 08:55 pm
Dc Mangalore, Darshan; ಯುವ ಜಿಲ್ಲಾಧಿಕಾರಿ ಚುರುಕ...
10-07-25 07:23 pm
12-07-25 11:10 pm
Mangalore Correspondent
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm
ಮಂಗಳೂರಿಗೆ ಮಧ್ಯಪ್ರದೇಶ, ಮಹಾರಾಷ್ಟ್ರದಿಂದ ಡ್ರಗ್ಸ್...
11-07-25 07:13 pm