ಬ್ರೇಕಿಂಗ್ ನ್ಯೂಸ್
21-07-25 04:03 am Mangaluru Correspondent ಕರಾವಳಿ
ಮಂಗಳೂರು, ಜುಲೈ 21: ರಾಜ್ಯ ಸರ್ಕಾರ ಧರ್ಮಸ್ಥಳ ಕ್ಷೇತ್ರದ ಮೇಲೆ ಕೇಳಿಬಂದ ಆರೋಪ, ವಿವಾದಗಳ ಸತ್ಯಾಸತ್ಯತೆ ತಿಳಿಯಲು ಎಸ್ಐಟಿ ತನಿಖೆಗೆ ಆದೇಶ ನೀಡಿದ ನಿರ್ಧಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಾಗತಿಸಿದೆ. ಸತ್ಯ ಹೊರಬರಬೇಕು. ನ್ಯಾಯಯುತ, ನಿಷ್ಪಕ್ಷಪಾತ ತನಿಖೆಯಾಗಿ ಸತ್ಯವನ್ನು ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಪರವಾಗಿ ಹೇಳಿಕೆ ಬಿಡುಗಡೆ ಮಾಡಲಾಗಿದೆ.
ಎಸ್ಐಟಿ ತನಿಖೆ ಕುರಿತು ಧರ್ಮಸ್ಥಳ ಕ್ಷೇತ್ರದ ವಕ್ತಾರ ಕೆ.ಪಾರ್ಶ್ವನಾಥ್ ಜೈನ್ ಪತ್ರಿಕಾ ಹೇಳಿಕೆ ನೀಡಿದ್ದು ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ 'ಹಲವಾರು ಶವಗಳನ್ನು ಹೂತಿದ್ದೆ' ಎಂಬ ದೂರು ಪ್ರಕರಣವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಊಹಾಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿದೆ. ಈ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್.ಐ.ಟಿ.)ಗೆ ರಾಜ್ಯ ಸರ್ಕಾರ ಹಸ್ತಾಂತರಿಸಿದೆ. ಸರ್ಕಾರದ ಈ ನಿಲುವು ಉತ್ತಮವಾಗಿದೆ ಎಂದು ಹೇಳಿದ್ದಾರೆ.

ಸಮಾಜದ ನೈತಿಕತೆ ಹಾಗೂ ಶ್ರದ್ಧೆಗೆ ನಿಲುಕುವ ಬಲವಾದ ಆಧಾರವೆಂದರೆ 'ಸತ್ಯ'. ಹೀಗಾಗಿ ಈ ಪ್ರಕರಣದಲ್ಲಿ ಎಸ್.ಐ.ಟಿ. ತನಿಖಾ ತಂಡ ಸತ್ಯಾಂಶವನ್ನು ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಹೊರತರಬೇಕಿದೆ. ಸತ್ಯವನ್ನು ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂಬುದು ನಮ್ಮ ಆಶಯ ಎಂದು ಕೆ.ಪಾರ್ಶ್ವನಾಥ್ ಜೈನ್ ಆಗ್ರಹಿಸಿದ್ದಾರೆ.
ಪದೇ ಪದೇ ಆರೋಪಗಳನ್ನು ಮಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಕುರಿತು ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುವ ಕೆಲಸಗಳು ನಡೆಯುತ್ತಿದೆ. ಹೀಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಇದರ ಸತ್ಯಾಸತ್ಯತೆ ಸಾರ್ವಜನಿಕರ ಮುಂದೆ ತನಿಖೆ ಮೂಲಕ ಬಹಿರಂಗಪಡಿಸಬೇಕು ಎಂದು ಧರ್ಮಸ್ಥಳ ಆಗ್ರಹಿಸುತ್ತಿದೆ ಎಂದಿದ್ದಾರೆ.
Sri Kshetra Dharmasthala has welcomed the Karnataka government’s decision to constitute a Special Investigation Team (SIT) to probe the recent allegations and controversies surrounding the temple town. In an official statement released on behalf of the institution, the management expressed hope that the SIT will conduct an impartial and transparent investigation to uncover the truth and present it before the public.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm