ಬ್ರೇಕಿಂಗ್ ನ್ಯೂಸ್
24-07-25 10:26 pm Mangalore Correspondent ಕರಾವಳಿ
ಮಂಗಳೂರು, ಜುಲೈ 24 : 2008ರಲ್ಲಿ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮುಕ್ಕಚ್ಚೇರಿ ಮತ್ತು ಚೆಂಬುಗುಡ್ಡೆ ಎಂಬಲ್ಲಿ ಭಯೋತ್ಪಾದನಾ ಚಟುವಟಿಕೆ ಉದ್ದೇಶದಿಂದ ಬಾಂಬ್ ತಯಾರಿಸುತ್ತಿದ್ದ ಆರೋಪದಲ್ಲಿ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡು ಆನಂತರ ಹೈದ್ರಾಬಾದ್ ಸ್ಫೋಟ ಪ್ರಕರಣದಲ್ಲಿ ಸಿಕ್ಕಿಬಿದ್ದು ದೆಹಲಿ ತಿಹಾರ್ ಜೈಲಿನಲ್ಲಿರುವ ಕುಖ್ಯಾತ ಭಯೋತ್ಪಾದಕ ಯಾಸಿನ್ ಭಟ್ಕಳ್ ಅಲಿಯಾಸ್ ಶಾರೂಕ್ ನನ್ನು 17 ವರ್ಷಗಳ ಬಳಿಕ ವಿಡಿಯೋ ಕಾನ್ಫರೆನ್ಸ್ ಮೂಲಕ ಪೊಲೀಸರು ಮಂಗಳೂರಿನ ಕೋರ್ಟಿಗೆ ಹಾಜರುಪಡಿಸಿದ್ದಾರೆ.
ದೇಶದ ವಿವಿಧ ಕಡೆಗಳಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮುಕ್ಕಚ್ಚೇರಿ ಮತ್ತು ಚೆಂಬುಗುಡ್ಡೆ ಎಂಬಲ್ಲಿ ಒಳಸಂಚು ನಡೆಸಿ ಸ್ಪೋಟಕಗಳನ್ನು ತಯಾರಿಸುತ್ತಿದ್ದಾಗಲೇ 2008ರ ಅಕ್ಟೋಬರ್ 4ರಂದು ಆಗಿನ ಜಿಲ್ಲಾ ಅಪರಾಧ ಪತ್ತೆದಳ (ಡಿಸಿಐಬಿ) ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ, ಭಯೋತ್ಪಾದನಾ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ ನಿಷೇದಿತ ಇಂಡಿಯನ್ ಮುಜಾಹೀದ್ದೀನ್ ಸಂಘಟನೆಗೆ ಸೇರಿದ ಆರೋಪಿಗಳನ್ನು ಪತ್ತೆ ಮಾಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮೊ.ನಂ. 242/2008 ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದಲ್ಲಿ ನಿಷೇಧಿತ ಇಂಡಿಯನ್ ಮುಜಾಹೀದ್ದೀನ್ ಸಂಘಟನೆಯ ಸದಸ್ಯರಾದ 7 ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದರೆ, ಆರು ಮಂದಿ ತಲೆಮರೆಸಿಕೊಂಡಿದ್ದರು.
ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಮಂಗಳೂರಿನ ಜೆಎಂಎಫ್ ನ್ಯಾಯಾಲಯಕ್ಕೆ ಉಳ್ಳಾಲ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಬಳಿಕ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪಿಗಳಾದ ಸಯ್ಯದ್ ಮೊಹಮ್ಮದ್ ನೌಶಾದ್, ಅಹಮ್ಮದ್ ಬಾವ ಅಬೂಬಕ್ಕರ್ (33), ಫಕೀರ್ ಅಹಮ್ಮದ್ @ ಫಕೀರ್ ಎಂಬವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಉಳಿದಂತೆ ಮೊಹಮ್ಮದ್ ಆಲಿ, ಜಾವೇದ್ ಆಲಿ, ಮೊಹಮ್ಮದ್ ರಫೀಕ್ ಮತ್ತು ಶಬ್ಬೀರ್ ಭಟ್ಕಳ್ ಎಂಬವರನ್ನು ಖುಲಾಸೆಗೊಳಿಸಿ 2017ರ ಎಪ್ರಿಲ್ 12 ರಂದು ರಂದು ತೀರ್ಪು ನೀಡಲಾಗಿತ್ತು. ಸದ್ರಿ ಪ್ರಕರಣದ ಪ್ರಮುಖ ಆರೋಪಿ ಯಾಸೀನ್ ಭಟ್ಕಳ ತಲೆಮರೆಸಿಕೊಂಡಿದ್ದ ಕಾರಣ ಕೋರ್ಟ್ ವಿಚಾರಣೆ ಬಾಕಿ ಇತ್ತು.
ಆನಂತರ, ಹೈದರಾಬಾದ್ ಸ್ಫೋಟ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಯಾಸೀನ್ ಭಟ್ಕಳ @ ಶಾರೂಕ್ @ ಡಾಕ್ಟರ್ ಅರಾಜೂ @ ಯೂಸಫ್ @ ಇಮ್ರಾನ್ @ ಯಾಸೀರ್ ಅಹಮ್ಮದ್ ವಿರುದ್ಧ ಶಿಕ್ಷೆ ಪ್ರಕಟವಾಗಿದ್ದು ದೆಹಲಿ ತಿಹಾರ್ ಕೇಂದ್ರ ಕಾರಾಗೃಹದಲ್ಲಿ ಕೈದಿಯಾಗಿ ಸೇರಿದ್ದ. ಉಳ್ಳಾಲದ ಭಯೋತ್ಪಾದನೆ ಪ್ರಕರಣದಲ್ಲಿ ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸದೇ ಇದ್ದುದರಿಂದ ಪ್ರಕರಣವು ಜೆ.ಎಮ್.ಎಫ್.ಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಉಳಿದಿತ್ತು. ಹಳೆ ಪ್ರಕರಣದಲ್ಲಿ ಉಳ್ಳಾಲ ಪೊಲೀಸ್ ಠಾಣಾಧಿಕಾರಿ ಮತ್ತು ಸಿಬ್ಬಂದಿಗಳು ದೆಹಲಿ ತಿಹಾರ್ ಕೇಂದ್ರ ಕಾರಾಗೃಹದಲ್ಲಿದ್ದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಆರೋಪಿ ಯಾಸೀನ್ ಭಟ್ಕಲ್ ನನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ಜುಲೈ 24ರಂದು ಮಂಗಳೂರಿನ ನ್ಯಾಯಾಲಯದ ವಿಚಾರಣೆಗೆ ಹಾಜರುಪಡಿಸಿದ್ದಾರೆ. ಮುಂದಿನ ವಿಚಾರಣೆಯನ್ನು ಆಗಸ್ಟ್ 20ಕ್ಕೆ ನಿಗದಿಪಡಿಸಲಾಗಿದೆ.
In a significant development, dreaded terrorist Yasin Bhatkal — currently lodged in Delhi’s Tihar Central Jail — was produced before a Mangaluru court via video conference on Wednesday in connection with a 2008 bomb-making case reported in Ullal, near Mangaluru.
25-07-25 04:07 pm
Bangalore Correspondent
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
ಕಾಲ್ತುಳಿತ ಪ್ರಕರಣ ; ಆರ್ ಸಿಬಿ, ಡಿಎನ್ಎ, ಕೆಎಸ್ ಸಿ...
24-07-25 08:01 pm
25-07-25 04:40 pm
HK News Desk
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
ಕುಡುಬಿ ಸಮುದಾಯ ಎಸ್ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ...
22-07-25 07:21 pm
25-07-25 08:25 pm
Mangalore Correspondent
DIG Anucheth Mangalore, SIT Dharmasthala: ಎಸ್...
25-07-25 06:05 pm
Udupi: ಸೊಸೈಟಿಗೆ ಅಡಿಟ್ ಮಾಡಿಕೊಡಲು ಲಂಚ ಬೇಡಿಕೆ ;...
25-07-25 02:25 pm
Terrorist Yasin Bhatkal, Mangalore: 2008ರ ಉಳ್...
24-07-25 10:26 pm
Dharmasthala Case, Investigation, Advocate,...
24-07-25 05:27 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am