ಬ್ರೇಕಿಂಗ್ ನ್ಯೂಸ್
26-07-25 08:20 pm Mangalore Correspondent ಕರಾವಳಿ
ಮಂಗಳೂರು, ಜುಲೈ 26 : ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ನೇಮಿಸಿರುವ ವಿಶೇಷ ತನಿಖಾ ತಂಡದಿಂದ ಎಸ್ಪಿ ಸಿ.ಎ.ಸೈಮನ್ ತಮ್ಮನ್ನು ಹೊರಗಿಡುವಂತೆ ಪತ್ರ ಬರೆದಿದ್ದಾರೆ.
ಈಗಾಗಲೇ ಐಪಿಎಸ್ ಅಧಿಕಾರಿ ಸೌಮ್ಯಲತಾ ಎಸ್ಐಟಿ ತಂಡದಿಂದ ಹೊರಗುಳಿಯುವುದಾಗಿ ಪತ್ರ ಬರೆದು ಕೇಳಿಕೊಂಡಿದ್ದರು. ಇದೀಗ ಎಸ್ಪಿ ಸೈಮನ್ ಕೂಡ ತಮ್ಮನ್ನು ತನಿಖಾ ತಂಡದಿಂದ ಕೈಬಿಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಸೈಮನ್ ಅವರು ಧರ್ಮಸ್ಥಳ ಶಿಕ್ಷಣ ಸಂಸ್ಥೆಗೆ ಸೇರಿದ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಹಿನ್ನಲೆ ನಿಷ್ಪಕ್ಷಪಾತ ತನಿಖೆಗೆ ಅಡ್ಡಿಯಾಗಬಹುದು ಎಂಬ ನೆಲೆಯಲ್ಲಿ ತನಿಖಾ ತಂಡದಿಂದ ಹಿಂದೆ ಸರಿಯುತ್ತಿರುವುದಾಗಿ ಮನವಿ ಸಲ್ಲಿಸಿದ್ದಾರೆ.
ರಾಜ್ಯ ಸರ್ಕಾರವು ಕಳೆದ ಭಾನುವಾರ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಂತಿ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಹಿರಿಯ ಐಪಿಎಸ್ ಅಧಿಕಾರಿಗಳಾದ ಎಂ.ಎನ್ ಅನುಚೇತ್, ಸೌಮ್ಯಲತಾ ಮತ್ತು ಜಿತೇಂದ್ರ ಕುಮಾರ್ ದಯಾಮ ಅವರನ್ನು ತಂಡಕ್ಕೆ ಸೇರಿಸಲಾಗಿತ್ತು. ಸೌಮ್ಯಲತಾ ಅವರು ವೈಯಕ್ತಿಕ ಕಾರಣಕ್ಕೆ ತಮ್ಮನ್ನು ಕೈಬಿಡುವಂತೆ ಮನವಿ ಮಾಡಿದ್ದರು. ಆ ಜಾಗಕ್ಕೆ ಬೇರೊಬ್ಬ ಮಹಿಳಾ ಅಧಿಕಾರಿಯನ್ನು ನೇಮಕ ಮಾಡುವುದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದರು.
ಇದೇ ವೇಳೆ, ಡಿಐಜಿ ಅನುಚೇತ್ ಮತ್ತು ದಯಾಮ ಅವರನ್ನು ಒಳಗೊಂಡ ತನಿಖಾ ತಂಡ ಪ್ರಕರಣದ ತನಿಖೆ ಆರಂಭಿಸಿದೆ. ಸೈಮನ್ ಅವರು ಡಿಸಿಆರ್ ಇ ಮಂಗಳೂರು ವಿಭಾಗದಲ್ಲಿ ಎಸ್ಪಿ ಆಗಿ ಕರ್ತವ್ಯದಲ್ಲಿದ್ದಾರೆ.
In a new development in the Dharmasthala buried bodies case, Superintendent of Police (SP) C.A. Simon has requested to be relieved from the Special Investigation Team (SIT) constituted by the Karnataka government. He cited a potential conflict of interest due to his past association with an educational institution in Dharmasthala where he studied.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm