ಬ್ರೇಕಿಂಗ್ ನ್ಯೂಸ್
27-07-25 07:49 pm Mangalore Correspondent ಕರಾವಳಿ
ಮಂಗಳೂರು, ಜುಲೈ.27: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಪದ್ಮಲತಾ, ವೇದವಲ್ಲಿ, ಸೌಜನ್ಯಾ ಮತ್ತು ಯಮುನಾ ಸೇರಿದಂತೆ ಹೆಣ್ಣುಮಕ್ಕಳ ಅಸಹಜ ಸಾವಿನ ಪ್ರಕರಣಗಳನ್ನು ಮರುತನಿಖೆಗೆ ಒಳಪಡಿಸಬೇಕು ಮತ್ತು ಹೆಣಗಳನ್ನು ಹೂತು ಹಾಕಲಾಗಿದೆ ಎನ್ನಲಾಗುವ ಪ್ರಕರಣದ ನ್ಯಾಯಯುತ ತನಿಖೆ ನಡೆಯಬೇಕು ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಸಮ್ಮೇಳನ ಆಗ್ರಹಿಸಿತು.
ನಗರದಲ್ಲಿ ಭಾನುವಾರ ನಡೆದ ಸಮ್ಮೇಳನದಲ್ಲಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷೆ ಈಶ್ವರಿ ಬಳ್ಳುಂಜ ನಿರ್ಣಯ ಮಂಡಿಸಿದರು. ಅಧ್ಯಕ್ಷೆ ಜಯಂತಿ ಬಿ.ಶೆಟ್ಟಿ ಅನುಮೋದಿಸಿದರು. ಸಭಿಕರು ಚಪ್ಪಾಳೆ ತಟ್ಟಿ ನಿರ್ಣಯವನ್ನು ಬೆಂಬಲಿಸಿದರು.
'ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರ ನಡೆಸಿ ಕೊಲೆ ಮಾಡಲಾದ ಹಲವಾರು ಅಪರಿಚಿತ ಹೆಣ್ಣುಮಕ್ಕಳ ಜರ್ಜೆರಿತ ಮೃತದೇಹಗಳನ್ನು ನನ್ನಿಂದ ಬಲವಂತವಾಗಿ ಮಣ್ಣು ಮಾಡಿಸಿದ್ದಾರೆ' ಎಂದು ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿದ್ದುದಾಗಿ ಹೇಳಿಕೊಂಡಿರುವ ವ್ಯಕ್ತಿಯೊಬ್ಬರು ಹೇಳಿದ ನಂತರ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಹೆಣ್ಣುಮಕ್ಕಳ ಅಸಹಜ ಸಾವು, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಮತ್ತೊಮ್ಮೆ ಮುನ್ನೆಲೆಗೆ ಬಂದಿವೆ' ಎಂದು ನಿರ್ಣಯದಲ್ಲಿ ಹೇಳಲಾಗಿದೆ.
'ಸಾರ್ವಜನಿಕರ ಒತ್ತಡದ ನಂತರ ಧರ್ಮಸ್ಥಳ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಆಗಿದೆ. ಇದರಿಂದ ಜನರಲ್ಲಿ ಆಶಾಭಾವ ಮೂಡಿದೆ. ಆದರೆ ಆಡಳಿತ ಮತ್ತು ವಿರೋಧ ಪಕ್ಷಗಳು ಪ್ರಕರಣದ ಕುರಿತು ವ್ಯಕ್ತಪಡಿಸುತ್ತಿರುವ ನಿಲುವುಗಳನ್ನು ಗಮನಿಸಿದರೆ ನಿಷ್ಪಕ್ಷಪಾತ ತನಿಖೆ ನಡೆಯುವ ಬಗ್ಗೆ ಆತಂಕ ಸಂದೇಹ ಮೂಡಿದೆ' ಎಂಬ ಅಭಿಪ್ರಾಯ ನಿರ್ಣಯದಲ್ಲಿ ವ್ಯಕ್ತವಾಯಿತು.
ಜನರಲ್ಲಿ ಮೂಡಿರುವ ಆತಂಕಗಳನ್ನು ಗಮನಿಸಿ ಸರ್ಕಾರ ವಿಶೇಷ ತಂಡಕ್ಕೆ ಮುಕ್ತ ಅವಕಾಶ ನೀಡಿ, ನ್ಯಾಯಯುತ ತನಿಖೆ ನಡೆಯುವುದಾಗಿ ಖಾತರಿಪಡಿಸಬೇಕು. ಸಾಕ್ಷಿ ಮತ್ತು ಅವರ ಪರವಾದ ವಕೀಲರಿಗೆ ಗರಿಷ್ಠ ಭದ್ರತೆ ಒದಗಿಸಬೇಕು. ಹೆಣ ಹೂತುಹಾಕಲಾಗಿದೆ ಎಂಬ ಪ್ರಕರಣಕ್ಕೆ ಮಾತ್ರ ತನಿಖೆಯನ್ನು ಸೀಮಿತಗೊಳೊಸದೆ 80ರ ದಶಕದಲ್ಲಿ ಅಪಹರಣಕ್ಕೆ ಒಳಗಾಗಿ ಕೊಲೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ, ಪತ್ತೆಹಚ್ಚಲಾಗದ ಪ್ರಕರಣ ಎಂದು ಷರಾ ಬರೆದಿರುವ ವಿದ್ಯಾರ್ಥಿನಿ ಪದ್ಮಲತಾ, ಸೌಜನ್ಯಾ ಪ್ರಕರಣ, ಮಾವುತ ನಾರಾಯಣ ಅವರ ಸಹೋದರಿ ಯಮುನಾ ಕೊಲೆ ಪ್ರಕರಣಗಳನ್ನೂ ತನಿಖೆಗೆ ಒಳಪಡಿಸಬೇಕು' ಎಂದು ನಿರ್ಣಯದಲ್ಲಿ ಆಗ್ರಹಿಸಲಾಯಿತು.
A renewed demand for a thorough reinvestigation into a series of mysterious and unnatural deaths of women in Dharmasthala village—including those of Padmalatha, Vedavalli, Sowjanya, and Yamuna—has been voiced by the All India Democratic Women’s Association (AIDWA). The organization has urged the government to ensure a transparent probe by the newly formed Special Investigation Team (SIT).
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm