ಬ್ರೇಕಿಂಗ್ ನ್ಯೂಸ್
04-08-25 06:05 pm Mangalore Correspondent ಕರಾವಳಿ
ಮಂಗಳೂರು, ಆ.4 : ವಿದ್ಯುತ್ ಸರಬರಾಜು ನಿಗಮಗಳ ನೌಕರರಿಗೆ ಪಿಂಚಣಿ ಹಾಗೂ ಗ್ರಾಚ್ಯುಟಿ ನೀಡಲು ಸರ್ಕಾರ ಗ್ರಾಹಕರಿಂದಲೇ ಹಣ ವಸೂಲಿ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಸೋಮವಾರ ಬೆಳಗ್ಗೆ ಮರೋಳಿ-ಜೋಡುಕಟ್ಟೆ ಬಳಿಯ ಮೆಸ್ಕಾಂ ಕಚೇರಿ (ಕುಲಶೇಖರ ಉಪವಿಭಾಗ) ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ನೌಕರರ ಪಿಂಚಣಿ ಹಾಗೂ ಗ್ರಾಚ್ಯುಟಿಗೆ ನಮ್ಮ ವಿರೋಧವಿಲ್ಲ, ಖಂಡಿತವಾಗಿಯೂ ಅವರಿಗೆ ನೀಡಲೇಬೇಕು. ಅದು ರಾಜ್ಯ ಸರ್ಕಾರದ ಜವಾಬ್ದಾರಿ ಹೊರತು ಜನಸಾಮಾನ್ಯರದ್ದಲ್ಲ. ಸರ್ಕಾರ ತನ್ನ ಮೇಲಿನ ಹೊಣೆಯನ್ನು ಗ್ರಾಹಕರ ಮೇಲೆ ಹೊರಿಸಿದ್ದರಿಂದ ಸಹಜವಾಗಿ ಜನರು ಆಕ್ರೋಶಗೊಂಡಿದ್ದಾರೆ. ಯೂನಿಟಿಗೆ 36 ಪೈಸೆ ಹೆಚ್ಚಳದಂತೆ ಪ್ರತಿ ಮನೆಯಿಂದ ಕೋಟ್ಯಂತರ ರೂಪಾಯಿ ದೋಚುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು.


ಈಗಾಗಲೇ ವಿದ್ಯುತ್ ದರ ಹೆಚ್ಚಳ ಮಾಡಿ ಜನರನ್ನು ಸಂಕಷ್ಟಕ್ಕೆ ದೂಡಲಾಗಿದೆ. ಎರಡು ಸಾವಿರಕ್ಕೆ ಸಿಗುತ್ತಿದ್ದ ಸ್ಮಾರ್ಟ್ ಮೀಟರನ್ನು ಹತ್ತು ಸಾವಿರಕ್ಕೆ ಏರಿಕೆ ಮಾಡಿ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದೆ. ಆದರೂ ಈ ಕಾಂಗ್ರೆಸ್ ಸರ್ಕಾರ ಬುದ್ಧಿ ಕಲಿತಿಲ್ಲ. ಜನರು ತಿರುಗಿ ಬಿದ್ದರೆ ಮಾತ್ರ ಈ ದಪ್ಪ ಚರ್ಮದ ಸರ್ಕಾರಕ್ಕೆ ಬುದ್ಧಿ ಬರುವುದಾದರೆ ಜನತೆಯೇ ಪಾಠ ಕಲಿಸಲು ಸಿದ್ಧವಾಗಬೇಕು. ಜನಪರ ಹೋರಾಟಕ್ಕೆ ಬಿಜೆಪಿ ಸದಾ ಬೆಂಬಲ ನೀಡುತ್ತದೆ ಎಂದು ಶಾಸಕ ಕಾಮತ್ ಹೇಳಿದರು.
ಪ್ರತಿಭಟನೆಯಲ್ಲಿ ರಮೇಶ್ ಕಂಡೆಟ್ಟು, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಪೂರ್ಣಿಮಾ, ವಸಂತ ಜೆ ಪೂಜಾರಿ, ನಿತಿನ್ ಕುಮಾರ್, ರವಿಶಂಕರ್ ಮಿಜಾರ್, ಮೋನಪ್ಪ ಭಂಡಾರಿ, ನಿಕಟಪೂರ್ವ ಮನಪಾ ಸದಸ್ಯರುಗಳು, ಮಂಡಲ ಹಾಗೂ ಜಿಲ್ಲೆಯ ಬಿಜೆಪಿ ಪ್ರಮುಖರು, ವಿವಿಧ ಮೋರ್ಚಾಗಳ ಪ್ರಮುಖರು, ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
Alleging that the Karnataka Congress government is unjustly burdening the public by collecting funds for the pensions and gratuity of electricity board employees through consumer electricity bills, the BJP’s Mangaluru South Mandal staged a protest on Monday morning outside the MESCOM office at Kulasekhara (Maroli-Jodukatte area).
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm