ಬ್ರೇಕಿಂಗ್ ನ್ಯೂಸ್
06-08-25 03:45 pm Mangalore Correspondent ಕರಾವಳಿ
ಮಂಗಳೂರು, ಆ.6 : ಬೆಂಗಳೂರಿನಲ್ಲಿ ಕೆಲಸ ಇದೆ ಎಂದು ಹೇಳಿ ಮನೆಯಿಂದ ಬಟ್ಟೆಗಳನ್ನು ತೆಗೆದುಕೊಂಡು ದೇರಳಕಟ್ಟೆಯ ತನ್ನ ಮನೆಯಿಂದ ಹೊರಟಿದ್ದ ಯುವಕನೊಬ್ಬ ನಾಪತ್ತೆಯಾಗಿದ್ದಾನೆ ಎಂದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೇರಳಕಟ್ಟೆ ನಿವಾಸಿ ಮೊಹಮ್ಮದ್ ನಿಯಾಜ್ (33) ನಾಪತ್ತೆಯಾಗಿದ್ದ ಯುವಕ. ದೇರಳಕಟ್ಟೆಯ ಎಸ್.ಎನ್ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಿಯಾಜ್, ಆಗಸ್ಟ್ 2ರಂದು ತನ್ನ ತಾಯಿ ಹಾಜಿರಾ ಅವರಲ್ಲಿ ಬೆಂಗಳೂರಿನಲ್ಲಿ ಕೆಲಸ ಇದೆ, ಹೋಗಿ ಬರುತ್ತೇನೆಂದು ಹೇಳಿ ಬಟ್ಟೆ ಬರೆಗಳನ್ನು ತೆಗೆದುಕೊಂಡು ಮನೆಯಿಂದ ತೆರಳಿದ್ದ. ಆದರೆ ಅದೇ ದಿನ ಮಧ್ಯಾಹ್ನ ಪತ್ನಿಗೆ ಕರೆ ಮಾಡಿದ್ದ ಯುವಕ ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ತಂಗಿ ಮಗುವನ್ನು ನೋಡಲು ಹೋಗೋಣ. ನೀನು ರೆಡಿಯಾಗಿರು ಎಂದು ತಿಳಿಸಿದ್ದ.
ಆದರೆ ಆಬಳಿಕ ಪತ್ನಿ ಫೋನ್ ಕರೆ ಮಾಡಿದಾಗ ಆತನ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಬಳಿಕ ಆತನ ಸ್ನೇಹಿತರು ಹಾಗೂ ಸಂಬಂಧಿಕರಲ್ಲಿ ವಿಚಾರಿಸಿದ್ದಾರೆ. ಆದರೆ ಸುಳಿವು ಸಿಗದ ಕಾರಣ ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಮೊಹಮ್ಮದ್ ನಿಯಾಜ್ ಪತ್ತೆಯಾದಲ್ಲಿ ಪೊಲೀಸ್ ನಿರೀಕ್ಷಕರು, ಕೊಣಾಜೆ ಪೊಲೀಸ್ ಠಾಣೆ ಮೊಬೈಲ್ ನಂಬರ್ 9480802315, 9019873901 ಅಥವಾ ದೂರವಾಣಿ ಸಂಖ್ಯೆ 0824-2220536, 0824-2220800 ಗೆ ಸಂಪರ್ಕಿಸಲು ಕೋರಲಾಗಿದೆ.
A 33-year-old man from Derlakatte, identified as Mohammad Niyaz, has been reported missing after he left home claiming he had a job opportunity in Bengaluru. A missing person complaint has been registered at the Konaje Police Station.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm