ಬ್ರೇಕಿಂಗ್ ನ್ಯೂಸ್
07-08-25 11:01 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.7 : ಸೌಜನ್ಯಾ ಪರ ಹೋರಾಟಗಾರರಾದ ಗಿರೀಶ್ ಮಟ್ಟೆಣ್ಣನವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್ಬುಕ್ ಇನ್ನಿತರ ಜಾಲತಾಣದಲ್ಲಿ ಜನರನ್ನು ಧರ್ಮಸ್ಥಳ ವಿರುದ್ಧ ಎತ್ತಿಕಟ್ಟುತ್ತಿರುವ ಬಗ್ಗೆ ದೂರು ದಾಖಲಾಗಿದೆ.
ಬೆಳ್ತಂಗಡಿ ನಿವಾಸಿ ಚರಣ್ ಶೆಟ್ಟಿ (32) ಎಂಬವರ ದೂರಿನಂತೆ, ಆರೋಪಿತ ಗಿರೀಶ್ ಮಟ್ಟಣ್ಣವರ್ ಅವರು ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆ ಆಗುವಂತೆ, ಅಶ್ಲೀಲವಾಗಿ ಹಾಗೂ ಸಾರ್ವಜನಿಕರಿಗೆ ಕಿರಿ ಕಿರಿಯುಂಟಾಗುವ ರೀತಿಯಲ್ಲಿ ಮಾತನಾಡಿರುವ ವೀಡಿಯೋವನ್ನು ಪೇಸ್ಬುಕ್ ನಲ್ಲಿ ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಠಾಣಾ ಅಕ್ರ: 78/2025 ಕಲಂ:57, 296 ಜೊತೆಗೆ 190 ಬಿಎನ್ಎಸ್ -2023 ರಂತೆ ಪ್ರಕರಣ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ದೂರುದಾರ ಚರಣ್ ಶೆಟ್ಟಿ ಅವರು ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ನೋಡುತ್ತಿದ್ದಾಗ, ಆರೋಪಿತ ಮಹೇಶ್ ತಿಮರೋಡಿ ಅವರು ಸಾಮಾಜಿಕ ಜಾಲತಾಣವಾದ ಯೂಟ್ಯೂಬ್ ನಲ್ಲಿ, ಪ್ರಾದೇಶಿಕವಾಗಿ ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹಾಗು ಸಾರ್ವಜನಿಕರಲ್ಲಿ ಅಪಾಯದ ಭೀತಿಯನ್ನುಂಟಾಗುವಂತೆ ಹೇಳಿಕೆಗಳನ್ನು ಪ್ರಚಾರ ಮಾಡಿರುವುದು ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆಯ 79/2025 ಕಲಂ: 353(2) ಬಿಎನ್ಎಸ್ -2023ರಂತೆ ಪ್ರಕರಣ ದಾಖಲಾಗಿರುತ್ತದೆ.
ಇನ್ನೊಂದು ಪ್ರಕರಣದಲ್ಲಿ ಬೆಳ್ತಂಗಡಿ ಕಸಬಾ ಗ್ರಾಮದ ನಿವಾಸಿ ಜೆರೋಮ್ ಬರ್ಬೋಝಾ (37) ಎಂಬವರ ದೂರಿನಂತೆ, ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಸಂದೇಶಗಳನ್ನು ಪರಿಶೀಲಿಸುತ್ತಿರುವಾಗ, ಆರೋಪಿತ ಪುನೀತ್ ಕೆರೆಹಳ್ಳಿ ಎಂಬವರು ಯೂಟ್ಯೂಬ್ ನಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋವನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಠಾಣಾ ಅಕ್ರ:80/2025, ಕಲಂ: 296 BNS 2023 ರಂತೆ ಪ್ರಕರಣ ದಾಖಲಾಗಿದೆ.
Three individuals — Girish Mattennavar, Mahesh Shetty Timarodi, and Puneeth Kerehalli — have been booked by the Belthangady police for allegedly making provocative and offensive statements on social media platforms, inciting public unrest and religious discord in connection with the Dharmasthala controversy.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm