ಬ್ರೇಕಿಂಗ್ ನ್ಯೂಸ್
25-12-20 12:10 pm Mangalore Correspondent ಕರಾವಳಿ
ಮಂಗಳೂರು, ಡಿ.24: ಏಸು ಕ್ರಿಸ್ತರ ಜನ್ಮದಿನ ಹಿನ್ನೆಲೆಯಲ್ಲಿ ಕರಾವಳಿಯ ಚರ್ಚ್, ಕ್ರಿಸ್ತಿಯನ್ನರ ಮನೆಗಳಲ್ಲಿ ಸಂಭ್ರಮ ಮನೆಮಾಡಿದೆ. ಕೊರೊನಾ ಕಾರಣ ಚರ್ಚ್ ಗಳಲ್ಲಿ ಸರಳ ಆಚರಣೆ ನಡೆಯಲಿದ್ದು ಸಾಮೂಹಿಕ ಪ್ರಾರ್ಥನೆಗೆ ಬ್ರೇಕ್ ಹಾಕಿ ಆಯಾ ಸಮಯಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗಿದೆ.
ಏಸು ಜನ್ಮದಿನದ ಮುನ್ನಾ ದಿನ ಡಿ.24ರಂದು ರಾತ್ರಿ ಕ್ರೈಸ್ತರು ಕ್ರಿಸ್ಮಸ್ ಜಾಗರಣೆ ಆಚರಿಸುತ್ತಾರೆ. ಗುರುವಾರ ರಾತ್ರಿ ವಿಶೇಷ ಪ್ರಾರ್ಥನೆ ನಡೆದಿದ್ದು ಕ್ರೈಸ್ತರು ಸರಳವಾಗಿ ಭಾಗವಹಿಸಿದ್ದಾರೆ. ಕ್ರಿಸ್ಮಸ್ ದಿನ ಬೆಳಗ್ಗೆ ಚರ್ಚ್ಗಳಲ್ಲಿ ಬಲಿ ಪೂಜೆಗಳನ್ನು ನಡೆಸುವುದು ವಾಡಿಕೆ. ಈ ಬಾರಿಯೂ ಸಂಪ್ರದಾಯ ಬಲಿಪೂಜೆಗಳು ನಡೆದಿದ್ದು, ಸೀಮಿತ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದಾರೆ. ಕೊರೊನಾ ಕಾರಣ ಚರ್ಚ್ ಗಳಲ್ಲಿ ಸಾಮೂಹಿಕ ಪ್ರಾರ್ಥನೆ ಬದಲಿಗೆ, ಹೆಚ್ಚುವರಿ ಸಮಯಗಳನ್ನು ನಿಗದಿ ಮಾಡಲಾಗಿದೆ. ಹೀಗಾಗಿ ಕ್ರೈಸ್ತರು ಆಯಾ ಸಮಯಗಳಲ್ಲಿ ಬಂದು ಪ್ರಾರ್ಥನೆ ನೆರವೇರಿಸಲು ಅವಕಾಶ ನೀಡಲಾಗಿದೆ.



ಕ್ರಿಸ್ಮಸ್ ಹಿನ್ನೆಲೆ ಕರಾವಳಿಯ ಬಹುತೇಕ ಎಲ್ಲಾ ಚರ್ಚ್ಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಚರ್ಚ್ ಆವರಣದಲ್ಲಿ ಮತ್ತು ಕ್ರೈಸ್ತರ ಮನೆಗಳ ಆವರಣದಲ್ಲಿ ಆಕರ್ಷಕ ಕ್ರಿಬ್ಗಳನ್ನು ಮತ್ತು ನಕ್ಷತ್ರಗಳನ್ನು ಜೋಡಿಸಲಾಗಿದೆ.



ಮಂಗಳೂರಿನ ರೊಜಾರಿಯೋ ಕೆಥೆಡ್ರಲ್ನಲ್ಲಿ ಗುರುವಾರ ರಾತ್ರಿ ಬಿಷಪ್ ರೆ.ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ನೇತೃತ್ವದಲ್ಲಿ ಹಬ್ಬದ ಬಲಿಪೂಜೆ ನಡೆಯಿತು. ಕೆಥೆಡ್ರಲ್ನ ರೆಕ್ಟರ್ ವಂ. ಆಲ್ಪ್ರೆಡ್ ಜೆ.ಪಿಂಟೋ, ಸಹಾಯಕ ಗುರು ವಂ. ವಿನೋದ್ ಲೋಬೋ, ರೊಸಾರಿಯೊ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ. ವಿಕ್ಟರ್ ಡಿಸೋಜ ಭಾಗವಹಿಸಿದ್ದರು.



ಕೊರೋನ ಕಾರಣ ಈ ಬಾರಿ ಸರಳವಾಗಿ ಹಬ್ಬದ ಆಚರಣೆ ಆಯೋಜಿಸಲಾಗಿದೆ. ಈ ಬಾರಿ ಸಾಂತಾಕ್ಲಾಸ್ ಸಂಭ್ರಮವೂ ಇರುವುದಿಲ್ಲ. ಹಬ್ಬದ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು, ಸರಳ ಮಾದರಿಯಲ್ಲಿ ಶುಭಾಶಯ ಸಲ್ಲಿಸಲು ಆದ್ಯತೆ ನೀಡಲಾಗಿದೆ.
Christmas 2020 was celebrated with Simplicity amid Covid 19 rules in Mangalore. People in the mass were limited as the masses were online. Overall the Christmas couldn't be celebrated as it was the previous years.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am