ಬ್ರೇಕಿಂಗ್ ನ್ಯೂಸ್
16-08-25 11:11 pm Mangalore Correspondent ಕರಾವಳಿ
ಮಂಗಳೂರು, ಆ.16 : ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದ್ದು ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡರೆ, ರೈಲು ಸಂಚಾರದಲ್ಲೂ ವ್ಯತ್ಯಯವಾಗಿದೆ.
ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿ ಬಳಿಯಿಂದ ಹಲವೆಡೆ ಗುಡ್ಡ ಕುಸಿದಿದ್ದು ಮರ, ಗಿಡಗಳ ಸಮೇತ ರಸ್ತೆಗೆ ಗುಡ್ಡ ಕುಸಿಯುತ್ತಿದೆ. ವೀಕೆಂಡ್ ಹಿನ್ನೆಲೆಯಲ್ಲಿ ಘಾಟ್ ಭಾಗದಲ್ಲಿ ವಾಹನಗಳ ಸಂಚಾರ ಹೆಚ್ಚಿದ್ದು ಟ್ರಾಫಿಕ್ ಸಮಸ್ಯೆಯಾಗಿದೆ. ಶಿರಾಡಿ ಘಾಟ್ ರಸ್ತೆಯಲ್ಲಿ ಶನಿವಾರ ಸಂಜೆಯಿಂದಲೇ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ವಾಹನ ಸವಾರರು ಪರದಾಡಿದ್ದಾರೆ.
ಶಿರಾಡಿ ಘಾಟ್ ಭಾಗದ ಹಲವೆಡೆ ಕುಸಿತ ಆಗಿದ್ದು ರಸ್ತೆ ಸಂಚಾರ ಬಂದ್ ಆಗಿದೆ. ನೂರಾರು ವಾಹನಗಳು ಸಿಲುಕಿದ್ದು ಟ್ರಾಫಿಕ್ ಜಾಮ್ ತೆರವುಗೊಳಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಇದೇ ವೇಳೆ ಘಾಟ್ ನಲ್ಲಿ ಕಾರಿನ ಮೇಲೆ ಗುಡ್ಡ ಕುಸಿದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮರಗಳು ರಸ್ತೆಗೆ ಬಿದ್ದಿದ್ದು ಮರಗಳನ್ನು ತೆರವುಗೊಳಿಸಲು ಪೊಲೀಸರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ.
ಇದೇ ವೇಳೆ, ಶಿರಾಡಿ ಘಾಟಿಯಲ್ಲಿ ರೈಲು ಹಳಿಯ ಮೇಲೂ ಮಣ್ಣು ಕುಸಿಯುತ್ತಿದ್ದು ರೈಲು ಸಂಚಾರದಲ್ಲು ವ್ಯತ್ಯಯವಾಗಿದೆ. ಬೆಂಗಳೂರು - ಕಾರವಾರ ರೈಲನ್ನು ಹಾಸನದ ಬಳಿಕ ಡೈವರ್ಟ್ ಮಾಡಿದ್ದು ಸುಬ್ರಹ್ಮಣ್ಯ ಹಳಿಯ ಬದಲು ಹುಬ್ಬಳ್ಳಿ ಮೂಲಕ ಕಾರವಾರ ತಲುಪುವಂತೆ ಮಾಡಲಾಗಿದೆ.
ಹಾಸನ ರೈಲಿನಲ್ಲಿ ಬೆಂಕಿ, ನಂದಿಸಿದ ಸಿಬಂದಿ
ಇದೇ ವೇಳೆ, ಚಲಿಸುತ್ತಿದ್ದ ರೈಲಿನ ಬೋಗಿಯ ಅಡಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ತಕ್ಷಣ ಎಚ್ಚೆತ್ತು ಹಾಸನ ರೈಲ್ವೇ ನಿಲ್ದಾಣದಲ್ಲಿ ಬೆಂಕಿ ನಂದಿಸಿ ಸಿಬಂದಿ ಅಪಾಯ ತಪ್ಪಿಸಿದ್ದಾರೆ. ತಾಳಗುಪ್ಪ-ಮೈಸೂರು ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಹಾಸನ ರೈಲು ನಿಲ್ದಾಣ ಪ್ಲಾಟ್ ಸಂಖ್ಯೆ ಎರಡರಲ್ಲಿ ನಿಂತಿದ್ದಾಗ ಬೋಗಿವೊಂದರ ಕೆಳ ಭಾಗದಲ್ಲಿ ಬೆಂಕಿ ಕಂಡುಬಂದಿದೆ. ತಕ್ಷಣವೇ ಇದನ್ನು ಗಮನಿಸಿದ ಸಿಬಂದಿ ಬೆಂಕಿ ನಂದಿಸಿದ್ದಾರೆ.
Heavy rainfall in the Malnad region has triggered a massive landslide at Shiradi Ghat on National Highway 75, severely disrupting both road and rail traffic between Bengaluru and Mangaluru.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm