ಬ್ರೇಕಿಂಗ್ ನ್ಯೂಸ್
17-08-25 10:50 pm Mangalore Correspondent ಕರಾವಳಿ
ಮಂಗಳೂರು, ಆ.17 : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಚಂಡಮಾರುತ ಕಾಣಿಸಿಕೊಂಡಿದ್ದು ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಭಾರೀ ಮಳೆಯ ಕಾರಣಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 18ರ ಸೋಮವಾರ ರೆಡ್ ಅಲರ್ಟ್ ಸೂಚನೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ.
ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (ಸರ್ಕಾರಿ, ಅನುದಾನಿತ, ಖಾಸಗಿ) ರಜೆ ಘೋಷಣೆ ಮಾಡಲಾಗಿದೆ. ಇದಲ್ಲದೆ, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ. ಚಂಡಮಾರುತ ಕಾರಣ ಭಾರೀ ಮಳೆಯಾಗುವ ಸೂಚನೆ ನೀಡಲಾಗಿದೆ.
ಕಳೆದ ಒಂದು ವಾರದಿಂದ ಕರಾವಳಿಯಲ್ಲಿ ಆಗಿಂದಾಗ್ಗೆ ಮಳೆಯಾಗುತ್ತಿದ್ದು ಭಾನುವಾರ ಮೂಡುಬಿದ್ರೆ, ಬೆಳ್ತಂಗಡಿ ಭಾಗದಲ್ಲಿ ಭಾರೀ ಮಳೆಯಾಗಿತ್ತು. ಮಂಗಳೂರಿನಲ್ಲಿ ಜಿಟಿ ಜಿಟಿ ಮಳೆ ಮತ್ತು ಮೋಡ ಕವಿದ ವಾತಾವರಣ ಇತ್ತು. ಶಿರಾಡಿ, ಚಾರ್ಮಾಡಿ ಸೇರಿ ಮಲೆನಾಡು ಭಾಗದಲ್ಲಿ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಶಿರಾಡಿ ಭಾಗದಲ್ಲಿ ಮಳೆಯಿಂದಾಗಿ ಸಮಸ್ಯೆ ಆಗಿದ್ದ ರೈಲು ಹಳಿಯಲ್ಲಿ ಮತ್ತೆ ರೈಲು ಸಂಚಾರ ಪುನಾರಂಭವಾಗಿದೆ. ಹೆದ್ದಾರಿಯಲ್ಲಿ ಮಾತ್ರ ಟ್ರಾಫಿಕ್ ಜಾಮ್ ಎಂದಿನಂತೆ ಮುಂದುವರಿದಿದೆ.
A depression over the Bay of Bengal has intensified into a cyclone, prompting the Meteorological Department to issue a red alert for heavy rainfall along the Karnataka coast on August 18 (Monday).
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm