ಬ್ರೇಕಿಂಗ್ ನ್ಯೂಸ್
19-08-25 07:04 pm Mangalore Correspondent ಕರಾವಳಿ
ಪುತ್ತೂರು, ಆ.19 : ಸಹಪಾಠಿ ಯುವತಿಯನ್ನು ಪ್ರೀತಿಸುವ ನೆಪದಲ್ಲಿ ಆಕೆಗೆ ಮಗು ಕರುಣಿಸಿ ಕೈಕೊಟ್ಟ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ಯುವತಿ, ಮಗು ಮತ್ತು ಆರೋಪಿ ಯುವಕನ ಡಿಎನ್ಎ ಪರೀಕ್ಷೆ ನಡೆಸಲಾಗಿದೆ.
ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಅವರ ಮಗ ಶ್ರೀಕೃಷ್ಣ ಜೆ.ರಾವ್ ತನ್ನ ಸಹಪಾಠಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು ಆಕೆ ಗರ್ಭವತಿಯಾಗಿ ಮಗುವಿಗೆ ಜನ್ಮ ನೀಡುವ ಹೊತ್ತಿನಲ್ಲಿ ಮದುವೆಯಾಗಲು ನಿರಾಕರಿಸಿದ್ದ. ಇದರಿಂದ ಯುವತಿಗೆ ಬಿಜೆಪಿ ಮುಖಂಡನ ಮಗನ ವಂಚನೆ ಎಂಬ ವಿಚಾರ ಭಾರೀ ಸುದ್ದಿಯಾಗಿತ್ತು. ಇತ್ತ ಯುವತಿ ಮಗುವಿಗೆ ಜನ್ಮ ನೀಡಿದ್ದು, ಆರೋಪಿಯನ್ನು ಪೊಲೀಸರು ಜೈಲಿಗೆ ಹಾಕಿದ್ದಾರೆ. ಇದೀಗ ಮಗುವಿಗೆ ಮೂರು ತಿಂಗಳಾಗುತ್ತಲೇ ಸಂತ್ರಸ್ತೆ, ಮಗು ಮತ್ತು ಆರೋಪಿ ಮೂವರ ರಕ್ತವನ್ನು ಡಿಎನ್ಎ ಪರೀಕ್ಷೆಗೆ ಕಳುಹಿಸಲಾಗಿದೆ. ನ್ಯಾಯಾಧೀಶರ ಮುಂದೆಯೇ ಮೂವರ ರಕ್ತದ ಮಾದರಿ ಸಂಗ್ರಹಿಸುವ ಪ್ರಕ್ರಿಯೆ ನಡೆದಿದ್ದು, ಮೂವರ ರಕ್ತದ ಮಾದರಿಯನ್ನು ಬೆಂಗಳೂರಿನ ಪರಿಕ್ಷಾಲಯಕ್ಕೆ ಪೊಲೀಸರು ಕಳುಹಿಸಿದ್ದಾರೆ.
ಈ ನಡುವೆ, ವಿಶ್ವಕರ್ಮ ಸಮಾಜದ ಸಂಘಟನೆಗಳ ಮುಖಂಡರು, ರಾಜಕೀಯ ನಾಯಕರು ಯುವಕನ ಮನವೊಲಿಸುವ ಕೆಲಸ ಮಾಡಿದ್ದಾರೆ. ಆರೋಪಿ ಯುವಕ ಡಿಎನ್ಎ ಪರೀಕ್ಷೆಯಲ್ಲಿ ಸಾಬೀತಾದರೆ ಮಾತ್ರ ಮದುವೆಯಾಗುತ್ತೇನೆ ಎಂದು ತಿಳಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಆರೋಪಿ ಯುವಕ ತಾನು ಮದುವೆಯಾಗಲ್ಲ ಎಂದು ಹಠ ಹಿಡಿದರೆ ಹತ್ತು ವರ್ಷ ಜೈಲು ಪಾಲಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಡಿಎನ್ಎ ಪರೀಕ್ಷೆಯ ಉತ್ತರದತ್ತ ಎಲ್ಲರ ಕುತೂಹಲ ನೆಟ್ಟಿದೆ.
In a sensational case that has stirred public debate, DNA tests have been conducted on a young woman, her infant, and the accused youth — son of a local BJP leader — in connection with allegations that he fathered a child and then refused to marry the mother.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm