ಬ್ರೇಕಿಂಗ್ ನ್ಯೂಸ್
20-08-25 10:19 pm Mangalore Correspondent ಕರಾವಳಿ
ಮಂಗಳೂರು, ಆ.20 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ಹೆಸರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಸಂಭ್ರಮಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಕೊಳ್ಳಿ ಇಟ್ಟು ಹಿಂದೂ ಧಾರ್ಮಿಕ ನಂಬಿಕೆಗಳನ್ನು ಘಾಸಿಗೊಳಿಸಿದೆ ಎಂದು ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಎಂದರೆ ಧಾರ್ಮಿಕ ಕ್ಷೇತ್ರಗಳಿಗೆ ಪ್ರಸಿದ್ಧಿ ಪಡೆದಿದೆ. ಅಂತಹ ಸ್ಥಳದಲ್ಲಿ ಹಬ್ಬದ ಸಂಭ್ರಮ ತುಸು ಹೆಚ್ಚೇ ಇರುವುದು ಸಾಮಾನ್ಯವಾಗಿದ್ದು, ಕೋಲ, ನೇಮ, ಯಕ್ಷಗಾನ, ಬ್ರಹ್ಮಕಲಶ ಹೀಗೆ ನಿರಂತರವಾಗಿ ಕಾರ್ಯಕ್ರಮಗಳು ನಡೆಯುತ್ತವೆ. ಅದರಂತೆ ಶ್ರೀಕೃಷ್ಣ ಜನ್ಮಾಷ್ಟಮಿ ಈ ಭಾಗದಲ್ಲಿ ಸಂಭ್ರಮದ ಹಬ್ಬವಾಗಿದ್ದು ಪೊಲೀಸರು ಸಂಜೆ ಆರು ಗಂಟೆಗೆ ಬಂದು ಸೌಂಡ್ ಬಾಕ್ಸ್ ಗಳನ್ನು ತೆಗೆದುಕೊಂಡು ಹೋಗಿದ್ದರಿಂದ ಕೃಷ್ಣವೇಷ ಸ್ಪರ್ಧೆ, ಭರತನಾಟ್ಯ, ರಸಮಂಜರಿ ಸೇರಿದಂತೆ ಸಾಂಸ್ಕೃತಿಕ ಚಟುವಟಿಕೆಗಳು ಸ್ಥಗಿತಗೊಂಡು ಹಬ್ಬದ ಸಂಭ್ರಮದಲ್ಲಿದ್ದವರಿಗೆ ಇದೇ ಮೊದಲ ಬಾರಿಗೆ ನಿರಾಸೆಯಾಗಿದೆ. ಅಲ್ಲದೇ ಕಾರ್ಯಕ್ರಮ ಆಯೋಜಕರ ಮೇಲೆ, ಸೌಂಡ್ ಸಿಸ್ಟಮ್ ಮಾಲಕರ ಮೇಲೆ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದರು.
ಹಿಂದಿನ ಬಿಜೆಪಿ ಸರ್ಕಾರದ ಸಂದರ್ಭದಲ್ಲೂ ಇಂತಹ ನಿಯಮ ಆದೇಶಗಳಿದ್ದರೂ ಹಬ್ಬದ ಸಂಭ್ರಮಕ್ಕೆ ಕಿಂಚಿತ್ತೂ ಅಡ್ಡಿಪಡಿಸಿಲ್ಲ. ರಾತ್ರಿ ಹತ್ತೂವರೆ ನಂತರ ಯಾವುದೇ ಕಾರ್ಯಕ್ರಮ ನಡೆಯಬಾರದು, ಮೊಸರು ಕುಡಿಕೆಗೆ ಕಟ್ಟಿರುವ ಮಡಿಕೆಗಳನ್ನು ನಾಳೆ ಬಂದು ಒಡೆಯಿರಿ ಎಂದು ಪೊಲೀಸರು ಹೇಳುವುದು ಎಷ್ಟು ಸರಿ? ಇನ್ನು ಕೆಲವೇ ದಿನಗಳಲ್ಲಿ ಗಣೇಶ ಚೌತಿ, ನವರಾತ್ರಿ, ಹುಲಿವೇಷ, ಹೀಗೆ ಇಡೀ ದಕ್ಷಿಣಕನ್ನಡ ಜಿಲ್ಲೆ ಹಬ್ಬದ ಸಂಭ್ರಮದಲ್ಲಿ ಮುಳುಗಲಿದ್ದು ಯಾವುದೇ ಗೊಂದಲ ಉಂಟಾಗದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಎಚ್ಚರ ವಹಿಸಬೇಕು. ಇಲ್ಲದಿದ್ದರೆ ಜನ ರೊಚ್ಚಿಗೆದ್ದರೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು.
BJP MLA Vedavyas Kamath has strongly criticized the Karnataka Congress government for allegedly disrupting Krishna Janmashtami celebrations in Dakshina Kannada district under the pretext of enforcing legal restrictions. Speaking during the assembly session, Kamath accused the government of hurting Hindu religious sentiments.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm