ಬ್ರೇಕಿಂಗ್ ನ್ಯೂಸ್
23-08-25 01:29 pm Udupi Correspondent ಕರಾವಳಿ
ಉಡುಪಿ, ಆ.23: ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದ ಕಾರು ಪಲ್ಟಿಯಾಗಿ ಓರ್ವ ಪ್ರಯಾಣಿಕ ಸಾವನಪ್ಪಿದ್ದು ಮೂವರು ಗಂಭೀರ ಗಾಯಗೊಂಡ ಘಟನೆ ಕಾಪು ಠಾಣೆ ವ್ಯಾಪ್ತಿಯ ಮೂಳೂರು ಸಮೀಪದ ಹಳ್ಳಿ ಮನೆ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ನಸುಕಿನಲ್ಲಿ ನಡೆದಿದೆ.
ಮೃತರನ್ನು ಬೆಳ್ಮಣ್ ನಿವಾಸಿ ಮರ್ವಿನ್ ಮೆಂಡೋನ್ಸಾ ಎಂದು ಗುರುತಿಸಲಾಗಿದೆ. ಸಿನಿಮಾ ಛಾಯಾಗ್ರಹಣ ಮಾಡುತ್ತಿದ್ದ ಮರ್ವಿನ್ ಡಿಜೆ ಸೌಂಡ್ಸ್ ವೃತ್ತಿಯನ್ನೂ ಮಾಡುತ್ತಿದ್ದರು. ಕಾರು ಚಾಲಕ ಅಂಬಲಪಾಡಿಯ ಪ್ರಜ್ವಲ್, ಕಾರ್ಕಳದ ಪ್ರಸಾದ್ ಮತ್ತು ವಿಘ್ನೇಶ್ ಗಾಯಗೊಂಡಿದ್ದು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಕಾರಿನಲ್ಲಿ ಅಂಬಲಪಾಡಿಯಿಂದ ಬೆಳ್ಮಣ್ ಕಡೆಗೆ ಹೋಗುತ್ತಿದ್ದಾಗ ಘಟನೆ ನಡೆದಿದ್ದು ನಾಯಿ ಅಡ್ಡ ಬಂತೆಂದು ದಿಢೀರ್ ಬ್ರೇಕ್ ತುಳಿದು ಪಲ್ಟಿಯಾಗಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದ್ದರಿಂದ ಒಳಗಿದ್ದವರು ತೀವ್ರ ಗಾಯಗೊಂಡಿದ್ದಾರೆ.
ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದ್ದು ತಕ್ಷಣ ಸ್ಥಳೀಯರು ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸಿ ದಾಖಲಿಸಿದ್ದಾರೆ. ಗಂಭೀರ ಗಾಯಗೊಂಡಿದ್ದ ಮರ್ವೀನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಒಂದು ದಿನ ಹಿಂದಷ್ಟೇ ಮರ್ವಿನ್ ಅವರು ತಮ್ಮ ಹೊಸ ಹಾಡನ್ನು ಯೂಟ್ಯೂಬ್ನಲ್ಲಿ ಬಿಡುಗಡೆ ಮಾಡಿದ್ದರು. ಅದನ್ನು ಅವರು ಎಪಿಡಿ ಮ್ಯೂಸಿಕ್ಗಾಗಿ ನಿರ್ಮಿಸಿ ಸ್ವತಃ ಚಿತ್ರೀಕರಣ ಮಾಡಿದ್ದರು. ಛಾಯಾಗ್ರಾಹಕರಾಗಿ ಹಲವಾರು ಕೊಂಕಣಿ ಮತ್ತು ತುಳು ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದರು.
D J Mervin, a 35-year-old cinematographer, tragically passed away in a car accident near Muloor while traveling from Udupi to Mangaluru with video editor Prajwal Suvarna, Prasad, Vignesh and an unidentified person. The incident occurred at around 3 am, when they swerved to avoid a street dog, causing their car to overturn.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm