ಬ್ರೇಕಿಂಗ್ ನ್ಯೂಸ್
23-08-25 07:02 pm Mangalore Correspondent ಕರಾವಳಿ
ಉಳ್ಳಾಲ, ಆ.22 : ತುಳು ಭಾಷೆಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಮಕ್ಕಳಿಗೆ ತುಳು ಭಾಷೆಯ ಹಾಡುಗಳನ್ನ ಕಲಿಸಲು ಅಕಾಡೆಮಿ ವತಿಯಿಂದ "ಡೆನ್ನ ಡೆನ್ನಾನ-ಪದ ಪನ್ಕನ" ಮತ್ತು "ತುಳು ಓದುಗ" ಅಭಿಯಾನವನ್ನ ಹಮ್ಮಿಕೊಳ್ಳಲಾಗಿದೆ. ಇದರಿಂದ ಮಕ್ಕಳಲ್ಲಿ ಸಂಗೀತದ ಅಭಿರುಚಿ ಹುಟ್ಟಿ ವಿವಿಧ ಉತ್ಸವಗಳ ವೇದಿಕೆಗಳಲ್ಲಿ ಹಾಡು ಹೇಳಲು ಅವಕಾಶ ಸಿಕ್ಕುವುದರ ಜೊತೆಗೆ ತುಳು ಭಾಷೆಯ ಮೇಲೆ ಪ್ರೀತಿ ಹೆಚ್ಚಿಸುವ ಕಾರ್ಯವನ್ನು ಅಕಾಡೆಮಿ ಮೂಲಕ ಮಾಡುತ್ತಿದ್ದೇವೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡು ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಸೋಮೇಶ್ವರದ ಆನಂದಾಶ್ರಮ ಪ್ರೌಢಶಾಲೆಯ ಸಹಯೋಗದಲ್ಲಿ ಶುಕ್ರವಾರ ಆನಂದಾಶ್ರಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ತುಳು ಹಾಡುಗಳ ಕಲಿಕಾ ಕಾರ್ಯಾಗಾರ ಮತ್ತು ಹಾಡುಗಳ ಪ್ರಸ್ತುತಿ "ಡೆನ್ನ ಡೆನ್ನಾನ - ಪದ ಪನ್ಕನ" ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಕ್ಕಳು ಕಲಿತು ವಿದೇಶಕ್ಕೆ ಹೋದರೆ ಬೇರೆ ಭಾಷೆಗಳನ್ನ ಕಲಿಯುವುದು ಇಂದಿನ ಅಗತ್ಯ ಮತ್ತು ಅನಿವಾರ್ಯತೆ ಆಗಿದ್ದರೂ ನಮ್ಮ ತಾಯಿ ಭಾಷೆಯನ್ನ ಎಂದಿಗೂ ಮರೆಯಬಾರದು. ನಾವು ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ನಮ್ಮ ಮಾತೃಭಾಷೆಯನ್ನ ಪ್ರೀತಿಸಬೇಕು. ತುಳು ಭಾಷೆಯನ್ನ ಉಳಿಸಿ ಮುಂದಿನ ಪೀಳಿಗೆಗೂ ತಲುಪಿಸುವ ಜವಾಬ್ದಾರಿ ಯುವ ಪೀಳಿಗೆಯದ್ದಾಗಿದೆ. ಎಷ್ಟೋ ಭಾಷೆಗಳು ನಮ್ಮ ಕಣ್ಣೆದುರೇ ನಶಿಸಿ ಹೋಗಿವೆ. ಆದರೆ ಕಳೆದ ಎರಡೂವರೆ ಸಾವಿರ ವರುಷದಿಂದ ನಮ್ಮ ತುಳು ಭಾಷೆಯು ಉಳಿದು ಬಂದದ್ದೇ ವಿಶೇಷವಾಗಿದೆ. ಸಂದಿಗ್ಧ ಕಾಲ ಘಟ್ಟದಲ್ಲಿ ಆಂಗ್ಲ ಮಾಧ್ಯಮ ಶಾಲೆಗಳು ಅನಿವಾರ್ಯವಿದ್ದರೂ ಮನೆಯಲ್ಲಾದರೂ ಮಕ್ಕಳಲ್ಲಿ ಪೋಷಕರು ತುಳು ಭಾಷೆಯಲ್ಲೇ ಮಾತನಾಡಬೇಕಿದೆ ಎಂದರು.

ಅಕಾಡೆಮಿಯ ಕಚೇರಿಯಲ್ಲಿ "ತುಳು ಓದುಗ" ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ತುಳುವಲ್ಲಿ ಅಂತದೇನುಂಟು ಅಂತ ಕೇಳುವವರಿದ್ದಾರೆ. ತುಳುವಲ್ಲಿ ಏನೇನಿಲ್ಲ ಎಂಬುದನ್ನ ಜನರಿಗೆ ತೋರಿಸಿ ಕೊಡುವ ಪ್ರಯತ್ನ ನಮ್ಮದಾಗಿದೆ. ಅಕಾಡೆಮಿಯಲ್ಲಿ ಮಹಾಕಾವ್ಯಗಳಾದ ಮಹಾಭಾರತ, ರಾಮಾಯಣ, ವಿವಿಧ ಸಾಹಿತ್ಯ ಪ್ರಕಾರಗಳು ಸೇರಿದಂತೆ ಸುಮಾರು ಐದು ಸಾವಿರ ತುಳು ಗ್ರಂಥಗಳ ಭಂಡಾರವಿದೆ. ಇಲ್ಲಿಗೆ ತುಳು ಓದಲು ಬರುವ ವಿದ್ಯಾರ್ಥಿಗಳಿಗೆ ಲಘು ಉಪಹಾರ, ಊಟದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಶಾಲಾ-ಕಾಲೇಜಿನ ಆಡಳಿತ ಮಂಡಳಿಯವರು ವಿದ್ಯಾರ್ಥಿಗಳನ್ನ ಅಕಾಡೆಮಿಗೆ ಕಳುಹಿಸಿ ಕೊಡುವುದರ ಮೂಲಕ ತುಳುವನ್ನ ಉಳಿಸುವ ಅಭಿಯಾನಕ್ಕೆ ಕೈಜೋಡಿಸಬೇಕಿದೆಯೆಂದು ತಾರನಾಥ ಗಟ್ಟಿ ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ಸಿನಿಮಾ ಮತ್ತು ನಾಟಕ ಕಲಾವಿದೆ ರೂಪಶ್ರೀ ವರ್ಕಾಡಿ ಮಾತನಾಡಿ ತಾಯಿ ಭಾಷೆ ತುಳುವಿನ ಮೇಲೆ ಎಲ್ಲರೂ ಅಪಾರವಾದ ಪ್ರೀತಿ ಇಟ್ಟಿದ್ದಾರೆ. ಭಾಷೆಯ ಉಳಿವಿಗಾಗಿ ತುಳು ಸಾಹಿತ್ಯ ಅಕಾಡೆಮಿ, ತುಳು ಚಿತ್ರರಂಗ ಮತ್ತು ರಂಗಭೂಮಿಯು ಸಾಕಷ್ಟು ಶ್ರಮ ಪಟ್ಟಿದೆ ಎಂದರು.

ಗಾಯಕರು, ಸಂಗೀತ ನಿರ್ದೇಶಕರಾದ ತೋನ್ಸೆ ಪುಷ್ಕಳ ಕುಮಾರ್, ಗಾಯಕಿ, ಸಂಗೀತ ಶಿಕ್ಷಕಿ ವಾಣಿ ಸಪ್ರೆ ಅವರು ಸಂಪನ್ಮೂಲ ಕಲಾವಿದರಾಗಿ ಭಾಗವಹಿಸಿದ್ದರು. ಈ ವೇಳೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಿರ್ಮಿಸಿದ, ದಿನೇಶ್ ಅತ್ತಾವರ ನಿರ್ದೇಶನದ ಜಾಗ್‌ರ್ತೆ..!? ತುಳು ನಾಟಕ ಪ್ರದರ್ಶನ ನಡೆಯಿತು.
ಸೋಮೇಶ್ವರ ಪುರಸಭಾ ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ, ಆನಂದಾಶ್ರಮ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಜೀವನ್ ಸೋಮೇಶ್ವರ, ಕೊಲ್ಯ ಶಾರದಾ ಸೇವಾ ಟ್ರಸ್ಟ್ ಅಧ್ಯಕ್ಷರಾದ ಮೋಹನ್ ಶೆಟ್ಟಿ, ಯಕ್ಷಗಾನ ಕಲಾವಿದರು, ಆನಂದಾಶ್ರಮ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಕುಸುಮಾಕರ ಕುಂಪಲ, ಶಾಲಾ ಮುಖ್ಯೋಪಾಧ್ಯಾಯರಾದ ಗುರುಮೂರ್ತಿ ಪಿ ಮೊದಲಾದವರು ಉಪಸ್ಥಿತರಿದ್ದರು.
In an effort to preserve and promote the Tulu language among the younger generation, the Karnataka Tulu Sahitya Academy has launched special initiatives such as “Denna Dennana – Pada Pankana” and “Tulu Oduga”. As part of this campaign, a Tulu song-learning workshop and presentation program was organized on Friday at Anandashrama High School, Someshwara, in association with the Academy.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm