ಬ್ರೇಕಿಂಗ್ ನ್ಯೂಸ್
29-08-25 03:48 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.29 : ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದು ವಿಚಾರಣೆ ಎದುರಿಸಿದ್ದಾರೆ. ಆರೋಪಿ ಚಿನ್ನಯ್ಯ ಬರುತ್ತಿದ್ದ ಕಿಯಾ ಕಾರೆನ್ಸ್ ಕಾರಿನಲ್ಲಿ ಮಹೇಶ್ ಶೆಟ್ಟಿ ಬೆಳ್ತಂಗಡಿ ಠಾಣೆಗೆ ಬಂದಿದ್ದಾರೆ.
ಎರಡು ದಿನಗಳ ಹಿಂದೆ ಎಸ್ಐಟಿ ಅಧಿಕಾರಿಗಳು ತಿಮರೋಡಿ ಮನೆಗೆ ಬಂದಿದ್ದ ವೇಳೆ ನಾಪತ್ತೆಯಾಗಿದ್ದ ಮಹೇಶ್ ಶೆಟ್ಟಿ ಇಂದು ಏಕಾಏಕಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಒಂದು ಗಂಟೆ 10 ನಿಮಿಷ ಕಾಲ ವಿಚಾರಣೆ ಎದುರಿಸಿದ್ದು ಆಬಳಿಕ ಎಸ್ಐಟಿ ಕಚೇರಿಗೆ ತೆರಳಿದ್ದಾರೆ. ಎಸ್ಐಟಿ ಠಾಣೆಗೆ ಬರಲು ಸೂಚನೆ ಇಲ್ಲದಿದ್ದರೂ, ಬೆಳ್ತಂಗಡಿ ಠಾಣೆ ಪಕ್ಕದಲ್ಲಿಯೇ ಇರುವ ಎಸ್ಐಟಿ ಕಚೇರಿಗೆ ತೆರಳಿ ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಭೇಟಿಯಾಗಿದ್ದು ಕೆಲ ಹೊತ್ತಿನ ಬಳಿಕ ಅಲ್ಲಿಂದ ಹಿಂತಿರುಗಿದ್ದಾರೆ.


ಲಾಯರ್ ಜಗದೀಶ್ ಠಾಣೆಗೆ ಹಾಜರು
ಇದೇ ವೇಳೆ, ಬೆಳ್ತಂಗಡಿ ಪೊಲೀಸ್ ಠಾಣೆಗೆ ಲಾಯರ್ ಜಗದೀಶ್ ಆಗಮಿಸಿದ್ದು ವಿಚಾರಣೆಗೆ ಹಾಜರಾಗಿದ್ದಾರೆ. ತನ್ನ ಫೇಸ್ ಬುಕ್ ಖಾತೆ ಮೂಲಕ ಪ್ರಚೋದನಕಾರಿ ಹೇಳಿಕೆ ಬಗ್ಗೆ ಬೆಳ್ತಂಗಡಿ ನಿವಾಸಿ ಪ್ರಭಾಕರ ಗೌಡ ಎಂಬವರ ದೂರಿನಂತೆ ಪ್ರಕರಣ ದಾಖಲಾಗಿತ್ತು. ಫೇಸ್ಬುಕ್ ಖಾತೆಯಲ್ಲಿ, ಧರ್ಮಸ್ಥಳದಲ್ಲಿ ನಡೆಯುತ್ತಿದ್ದ ಉತ್ಖನನ ಕಾರ್ಯಕ್ಕೆ ಸಂಬಂಧಿಸಿ ಜಗದೀಶ್ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ, ಸಾರ್ವಜನಿಕರಿಗೆ ಅಪರಾಧ ಎಸಗಲು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆ ಮಾಡಿದ್ದಾರೆಂದು ದೂರು ನೀಡಲಾಗಿತ್ತು. ಇದರಂತೆ, ಕಲಂ: 57 ಜೊತೆಗೆ 189(6), 191(3) ಬಿಎನ್ಎಸ್ 2023 ರಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Sajjanaya case activist Mahesh Shetty Timarodi appeared at the Beltangady Police Station on Thursday for questioning. He arrived in the Kia Carens vehicle belonging to accused Chinnayya. Two days earlier, SIT officials had visited Timarodi’s residence, after which he was reportedly untraceable. However, today he suddenly appeared at the station and underwent questioning for about 1 hour and 10 minutes.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm