ಬ್ರೇಕಿಂಗ್ ನ್ಯೂಸ್
30-08-25 12:55 pm Udupi Correspondent ಕರಾವಳಿ
ಕುಂದಾಪುರ, ಆ.30: ಕೊಲ್ಲೂರು ದೇವಸ್ಥಾನಕ್ಕೆ ಆಗಮಿಸಿದ್ದ ಬೆಂಗಳೂರು ಮೂಲದ ವಿವಾಹಿತ ಮಹಿಳೆಯೊಬ್ಬರು ದೇಗುಲ ಪಕ್ಕದ ಸೌಪರ್ಣಿಕಾ ನದಿಯಲ್ಲಿ ಸ್ನಾನಕ್ಕಿಳಿದು ನಾಪತ್ತೆಯಾಗಿರುವ ಘಟನೆ ನಡೆದಿದೆ. ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ.ಆರ್. ಗೋವಿಂದರಾಜು ಅವರ ಪುತ್ರಿ ವಸುಧಾ ಚಕ್ರವರ್ತಿ (46) ನಾಪತ್ತೆಯಾದ ಮಹಿಳೆ. ಆಗಸ್ಟ್ 28 ರಂದು ಕೊಲ್ಲೂರಿಗೆ ಆಗಮಿಸಿದ್ದು, ಖಾಸಗಿ ವಸತಿಗೃಹದ ಬಳಿ ಕಾರು ನಿಲ್ಲಿಸಿ ದೇಗುಲಕ್ಕೆ ತೆರಳಿ ಬಳಿಕ ನಾಪತ್ತೆಯಾಗಿದ್ದರು.
ಕಾರಿನಲ್ಲಿ ಮೊಬೈಲ್ ಹಾಗೂ ಇನ್ನಿತರ ವಸ್ತುಗಳು ಕಂಡುಬಂದ ಹಿನ್ನೆಲೆಯಲ್ಲಿ ಮೊಬೈಲ್ ಮೂಲಕ ಸಂಪರ್ಕಿಸಿದಾಗ ವಿಳಾಸ ಪತ್ತೆಯಾಗಿದ್ದು ಪೊಲೀಸರು ಮನೆಯವರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ. ಸೌಪರ್ಣಿಕಾ ನದಿ ಸಮೀಪ ಹಾಕಿರುವ ಸಿಸಿಟಿವಿಯಲ್ಲಿ ಮಹಿಳೆ ಈಜುತ್ತಿರುವುದು ಕಂಡುಬಂದಿದೆ. ಉತ್ತಮ ಈಜುಗಾರ್ತಿ ಎಂದು ಹೇಳಲಾಗುತ್ತಿರುವ ವಸುಧಾ ಅವರು ಬಹುದೂರ ಈಜಿ ದಡ ಸೇರಿದರೇ ಅಥವಾ ಉಕ್ಕಿ ಹರಿಯುತ್ತಿರುವ ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋದರೇ ಎಂಬ ಪ್ರಶ್ನೆ ಇದೆ. ಪೊಲೀಸರು ದೇವಸ್ಥಾನ ಆಸುಪಾಸಿನಲ್ಲಿ ಹುಡುಕಾಟ ನಡೆಸಿದ್ದಾರೆ.
ಮುಳುಗು ತಜ್ಞ ಈಶ್ವರ ಮಲ್ಪೆ ಹಾಗೂ ಅಗ್ನಿಶಾಮಕ ದಳದವರು ನದಿಯ ವಿವಿಧ ಕಡೆ ಶೋಧ ಕಾರ್ಯ ನಡೆಸಿದ್ದಾರೆ. ಮಹಿಳೆಯ ಪೋಷಕರು ಹಾಗೂ ಕುಟುಂಬ ಸದಸ್ಯರು ಸುದ್ದಿ ತಿಳಿದು ಕೊಲ್ಲೂರಿಗೆ ಆಗಮಿಸಿದ್ದಾರೆ. ವಸುಧಾ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ವಿವಾಹಿತರಾಗಿದ್ದರು. ಇತ್ತೀಚಿನ ದಿನಗಳಲ್ಲಿ ವಿವಿಧ ತೀರ್ಥ ಕ್ಷೇತ್ರ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಒಂಟಿಯಾಗಿ ತೆರಳಿ ಧ್ಯಾನಾಸಕ್ತರಾಗುತ್ತಿದ್ದರು ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ. ನಾಪತ್ತೆಯಾದ ಮಹಿಳೆಯ ಬಗ್ಗೆ ಯಾರಿಗಾದರೂ ಮಾಹಿತಿ ದೊರಕಿದಲ್ಲಿ ಕೊಲ್ಲೂರು ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.
A married woman from Bengaluru, who had visited the famous Kollur Mookambika Temple, has gone missing after entering the nearby Souparnika river for a dip. The incident has caused concern among locals and authorities.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm