ಬ್ರೇಕಿಂಗ್ ನ್ಯೂಸ್
10-09-25 08:46 pm Mangalore Correspondent ಕರಾವಳಿ
ಮಂಗಳೂರು, ಸೆ.10: ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯಲ್ಲಿ ಕ್ರಾಂತಿಕಾರಕ ಎನಿಸಿದ ಆರ್ಥೋಪೆಡಿಕ್ ರೊಬೊಟಿಕ್ ವ್ಯವಸ್ಥೆ 'ಸ್ಕೈವಾಕರ್' ಸರ್ಜರಿ'ಯನ್ನು ಮಂಗಳೂರಿನ ಯೆನೆಪೋಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಿದೆ. ಈ ವ್ಯವಸ್ಥೆಯನ್ನು ಹೊಂದಿದ ದಕ್ಷಿಣ ಏಷ್ಯಾದ ಮೊದಲ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಯೆನೆಪೋಯ ಪಾತ್ರವಾಗಿದೆ.
ಅಮೆರಿಕದ ಮೈಕ್ರೋಪೋರ್ಟ್ ಆರ್ಥೋಪೆಡಿಕ್ಸ್ ಇಂಕ್ ಸಹಭಾಗಿತ್ವದಲ್ಲಿ ಸರ್ಜರಿ ವ್ಯವಸ್ಥೆಯನ್ನು ಯೆನೆಪೋಯದಲ್ಲಿ ಆರಂಭಿಸಲಾಗಿದೆ. ಅದರೊಂದಿಗೆ ರೋಗಿಗಳ ಆರೈಕೆಗೆ ಜಾಗತಿಕ ದರ್ಜೆಯ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಮುಂಚೂಣಿಯಲ್ಲಿರುವ ಆಸ್ಪತ್ರೆಯು ಇನ್ನೊಂದು ಗರಿಯನ್ನು ತನ್ನ ಮುಡಿಗೆ ಏರಿಸಿಕೊಂಡಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಮುಹಮ್ಮದ್ ತಾಹಿರ್ ಮತ್ತು ಮೈಕ್ರೋಪೋರ್ಟ್ ಆರ್ಥೋಪೆಡಿಕ್ಸ್ ದಕ್ಷಿಣ ಏಷ್ಯಾ ವಿಭಾಗದ ಹಿರಿಯ ನಿರ್ದೇಶಕ ಮತ್ತು ಜನರಲ್ ಮ್ಯಾನೇಜರ್ ಡಾ.ಮುಕೇಶ್ ಪಾರ್ಮರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಎವೊಲ್ಯೂಷನ್ ಮೀಡಿಯಲ್-ಪೈವೊಟ್ ನೀ ಸಿಸ್ಟಮ್ ಜೊತೆಗೆ ಕೆಲಸ ಮಾಡುವಂತೆ ವಿನ್ಯಾಸಗೊಂಡ ಜಗತ್ತಿನ ಏಕೈಕ ರೊಬೊಟಿಕ್ ಸರ್ಜರಿ ತಂತ್ರಜ್ಞಾನ ಸ್ಕೈವಾಕರ್ ಆರ್ಥೋಪೆಡಿಕ್ ರೊಬೊಟಿಕ್ ಸಿಸ್ಟಮ್ ಆಗಿದೆ. ಇವೆರಡೂ ಸೇರಿಕೊಂಡು ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯಲ್ಲಿ ಮಿಲಿಮೀಟರ್ ನಲ್ಲಿ ಹತ್ತನೇ ಒಂದರಷ್ಟು ಮಟ್ಟದ ನಿಖರತೆಯನ್ನು ನೀಡುತ್ತವೆ. ಈ ತಂತ್ರಜ್ಞಾನವು ರೋಗಿಯ ನಿರ್ದಿಷ್ಟ ದೇಹ ರಚನೆಯನ್ನು ಆಧರಿಸಿ, ಪ್ರತಿಯೊಬ್ಬರಿಗೂ ಅವರಿಗೆ ಅಗತ್ಯವಿರುವ ರೀತಿಯಲ್ಲಿ ಶಸ್ತ್ರಚಿಕಿತ್ಸೆಯ ಅಗತ್ಯವನ್ನು ಪೂರೈಸುತ್ತದೆ ಎಂದು ವಿವರಿಸಿದರು.
ಈ ಸೌಲಭ್ಯದಿಂದಾಗಿ ಮಂಡಿ ಬದಲಾವಣೆಯ ಬಳಿಕ ರೋಗಿಗಳು ಬಹಳ ಬೇಗ ಚೇತರಿಸಿಕೊಂಡು, ಸುದೀರ್ಘ ಅವಧಿಯ ವರೆಗೆ ಯಾವುದೇ ನೋವಿಲ್ಲದೆ ಮೊದಲಿನಂತೆ ಕೆಲಸ ಕಾರ್ಯಗಳನ್ನು ಮಾಡಬಹುದಾಗಿದೆ. ದೀರ್ಘ ನಡಿಗೆ, ಮೆಟ್ಟಿಲು ಹತ್ತಿಳಿಯುವುದು, ಕುಳಿತು- ಎದ್ದು ಮಾಡುವುದು ಹೀಗೆ ಪ್ರತಿಯೊಂದು ಕೆಲಸವನ್ನೂ ಮೊದಲಿನಂತೆ ಮಾಡುವ ಸಾಮರ್ಥ್ಯವನ್ನು ಈ ಶಸ್ತ್ರಚಿಕಿತ್ಸೆ ನೀಡುತ್ತದೆ ಎಂದು ಹೇಳಿದರು.
ಯೆನೆಪೋಯ ಆಸ್ಪತ್ರೆಯ ಮುಖ್ಯ ಆರ್ಥೋಪೆಡಿಕ್ ಹಾಗೂ ಮಂಡಿ ಬದಲಾವಣೆ ಸರ್ಜನ್ ಡಾ.ದೀಪಕ್ ರೈ ಅವರು ಭಾರತದ ಮೊದಲ ಸ್ಕೈವಾಕರ್ ಸರ್ಜರಿಯನ್ನು ಯೆನೆಪೋಯದಲ್ಲಿ ಯಶಸ್ವಿಯಾಗಿ ನೆರವೇರಿಸಿದ್ದು, ಈ ವ್ಯವಸ್ಥೆಯು ಮಂಡಿಯ ಸಹಜ ಚಲನೆಗೆ ಬೇಕಾದ ನಿಖರತೆಯನ್ನು ಒದಗಿಸುತ್ತದೆ ಎಂದು ವಿವರಿಸಿದರು.
Yenepoya Multi-Specialty Hospital in Mangaluru has become the first hospital in South Asia to introduce the revolutionary ortho-robotic surgical system Skywalker for knee replacement surgeries. The advanced system, seen as a game-changer in orthopedic surgery, was launched in collaboration with the U.S
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm