ಬ್ರೇಕಿಂಗ್ ನ್ಯೂಸ್
12-09-25 08:53 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.12 : ಧರ್ಮಸ್ಥಳ ವಿರುದ್ಧ ಅವಹೇಳನ ಮಾಡಿದ್ದಾಗಿ ದೂರು ದಾಖಲಾಗಿ ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ಎದುರಿಸಿದ್ದ ಯೂಟ್ಯೂಬರ್ ಸಮೀರ್ ಎಂಡಿ ಮತ್ತೆ ವಿಡಿಯೋ ಮಾಡಿದ್ದು ನನಗೆ ವಿದೇಶದಿಂದ ಫಂಡ್ ಬಂದಿದೆ ಎಂದು ಆರೋಪ ಮಾಡುತ್ತಿದ್ದಾರೆ. ನನಗೆ ಯಾವುದೇ ಫಂಡ್ ಬಂದಿಲ್ಲ. ಹಣ ತಗೊಂಡಿದ್ದಿದ್ರೆ ತನಿಖೆಯಿಂದ ಎಲ್ಲಾ ಹೊರಗೆ ಬರ್ತಿತ್ತು. ಪೊಲೀಸರಿಗೆ ಎಲ್ಲಾ ಬ್ಯಾಂಕ್ ದಾಖಲೆ ನೀಡಿದ್ದೇನೆ. ಪೊಲೀಸರು ತನಿಖೆ ಮಾಡಲಿ, ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಮೇಲೆ ಸುಳ್ಳು ಆರೋಪ ಮಾಡುವವರನ್ನ ಯಾರೂ ಪ್ರಶ್ನೆ ಮಾಡಲ್ಲ ಎಂದು ನೋವು ಹೇಳಿಕೊಂಡಿದ್ದಾರೆ.
ಸುಜಾತ ಭಟ್ ಬಗ್ಗೆ ವಿಡಿಯೋ ಮಾಡಿರುವ ವಿಚಾರದಲ್ಲಿ ಪ್ರತಿಕ್ರಿಯಿಸುತ್ತ ಆ ತಾಯಿಯ ಕಣ್ಣೀರನ್ನ ನೋಡಿ ವಿಡಿಯೋ ಮಾಡಿದ್ದೆ. ಸುಜಾತ ಭಟ್ ಇಂಟರ್ವ್ಯೂನಲ್ಲಿ ಕಣ್ಣೀರು ಹಾಕಿದ್ದನ್ನು ನೋಡಿ ವಿಡಿಯೋ ಮಾಡಿದ್ದೆ. ಈಗ ಆ ಕಣ್ಣೀರೇ ಸುಳ್ಳು ಅಂದ್ರೆ ನಾನು ಏನು ಮಾಡಲಿ? ನನ್ನ ವಿಡಿಯೋ ಸುಳ್ಳು ಅಂತ ಹೇಳುತ್ತಿದ್ದಾರೆ. ಪೊಲೀಸರ ಯುಡಿಆರ್ ರಿಪೋರ್ಟ್ ಸುಳ್ಳಾ? ಸೌಜನ್ಯಾ, ಪದ್ಮಾಲತಾರನ್ನ ಸಾಯಿಸಿದ್ದು ಸುಳ್ಳಾ ಎಂದು ಪ್ರಶ್ನೆ ಮಾಡಿದ್ದಾರೆ.
ಯಾವಾಗಲೂ ಸ್ಟುಡಿಯೋದಲ್ಲಿ ಕ್ಯಾಮರಾ ಮುಂದೆ ಕೂತ್ಕೊಂಡು ವಿಡಿಯೋ ಮಾಡ್ತಿದ್ದೆ. ಇವತ್ತು ಕಾರಲ್ಲಿ ಕೂತ್ಕೊಂಡು ವಿಡಿಯೋ ಮಾಡ್ತಿದ್ದೇನೆ. ಪ್ರಾಮಾಣಿಕವಾಗಿ ನಾನು ಹೇಳ್ತಿದ್ದೇನೆ. ಇವತ್ತು ನನಗೆ ಮನೆ ಇಲ್ಲ. ಯಾವುದೋ ಒಂದು ಪುಟ್ಟ ಬಾಡಿಗೆ ಮನೆಯಲ್ಲಿ ಇದ್ವಿ. ಪೊಲೀಸರು ತನಿಖೆಗೆ ಅಂತ ಮನೆಗೆ ಬಂದು ಶೋಧ ಮಾಡಿದ್ದಾರೆ. ಅದಾದ ನಂತರ ಮನೆಯ ಓನರ್ ನಮ್ಮನ್ನ ಮನೆಯಿಂದ ಖಾಲಿ ಮಾಡಿಸಿದ್ದಾರೆ. ಇವತ್ತು ಸಮೀರ್ ಎಂಡಿ ಅಂದರೆ ಯಾರೂ ಮನೆ ಕೊಡ್ತಿಲ್ಲ. ಇವರಿಂದಾಗಿ ಸಮೀರ್ ಎಂಡಿ ಅಂದರೆ ಜನ ಹೆದರಿಕೊಳ್ತಿದ್ದಾರೆ. ಕಳೆದು ಒಂದು ತಿಂಗಳಿನಿಂದ ನಾನು ನನ್ನ ತಾಯಿ, ಅಲೆದಾಡುತ್ತಿದ್ದೇವೆ ಎಂದಿದ್ದಾರೆ.
ಇಲ್ಲಿ ಗಟ್ಟಿಯಾಗಿ ನ್ಯಾಯದ ಪರ ನಿಂತರೆ ಎಲ್ಲರಿಗೂ ಇದೇ ಪರಿಸ್ಥಿತಿ ಬರುತ್ತದೆ. ನಾನು ಸತ್ಯ, ನ್ಯಾಯದ ಪರವಾಗಿ ಹೋರಾಟ ಮಾಡಿದ್ದೀನಿ. ಹೆಣ್ಮಕ್ಕಳಿಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಸಿಗಲಿ ಎಂದು ಶಕ್ತಿ ಮೀರಿ ಪ್ರಯತ್ನ ಪಟ್ಟಿದ್ದೀನಿ. ಎಸ್ಐಟಿ ರಚನೆ ಆದಾಗಲೇ ಅರ್ಧ ಕೆಲಸ ಆಗಿದೆ. ಎಸ್ಐಟಿ ಇದೆ, ಆ ದೇವರು ಇದ್ದಾರೆ ಅಂತ ಹೇಳಿಕೆ ನೀಡಿದ್ದಾರೆ.
YouTuber Sameer MD, who has been under fire for posting critical videos related to Dharmasthala, has now emotionally responded to allegations that he received foreign funding for his activism. Speaking in a new video, Sameer stated that he has submitted all his bank documents to the police and has nothing to hide.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm