ಬ್ರೇಕಿಂಗ್ ನ್ಯೂಸ್

Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿಂಗರತಿ ಲೈಂಗಿಕ ದೌರ್ಜನ್ಯ ; ಬೇಕಲ ಶಿಕ್ಷಣಾಧಿಕಾರಿ, ರೈಲ್ವೇ ಉದ್ಯೋಗಿ, ಜಮಾತೆ ಇಸ್ಲಾಮಿ, ಲೀಗ್ ಕಾರ್ಯಕರ್ತರು ಸೇರಿ ಹತ್ತು ಮಂದಿ ಪೊಲೀಸ್ ಬಲೆಗೆ, ಕಾಸರಗೋಡಿನಲ್ಲಿ ಸಂಚಲನ ಮೂಡಿಸಿದ ಪ್ರಕರಣ     |    ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆ    |    Mahesh Shetty Timarodi, Arms, FIR: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿಯಲ್ಲಿ ಮತ್ತೊಂದು ಎಫ್ಐಆರ್, ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸು ದಾಖಲು    |   

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿಗೆ 8 ಬಲಿ, 146 ಮಂದಿಯಲ್ಲಿ ಸೋಂಕು

10-08-20 04:33 pm       Mangalore Reporter   ಕರಾವಳಿ

ದ.ಕ. ಜಿಲ್ಲೆಯಲ್ಲಿ 146 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ 7353ಕ್ಕೆ ಏರಿಕೆಯಾಗಿದೆ.

ಮಂಗಳೂರು, ಆಗಸ್ಟ್ 8: ದ.ಕ. ಜಿಲ್ಲೆಯಲ್ಲಿ 146 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ 7353ಕ್ಕೆ ಏರಿಕೆಯಾಗಿದೆ.

ಸೋಮವಾರದಂದು 146 ಮಂದಿಯಲ್ಲಿ ಸೊಂಕು ಪತ್ತೆಯಾಗಿದೆ. ಈ ಪೈಕಿ ಪ್ರಾಥಮಿಕ ಸಂಪರ್ಕದಿಂದ 15 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 81 ಐಎಲ್‌ಐ ಪ್ರಕರಣಗಳಾಗಿದ್ದು, 16 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿವೆ. ಇನ್ನು 30 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ಈ ನಡುವೆ ನಾಲ್ವರು ವಿದೇಶದಿಂದ ಮರಳಿದವರಲ್ಲಿ ಸೋಂಕು ಪತ್ತೆಯಾಗಿದೆ.

ಇನ್ನು ಇಂದು ಪಾಸಿಟಿವ್ ಪತ್ತೆಯಾದವರ ಪೈಕಿ ಮಂಗಳೂರಿನ 94 ಮಂದಿಗೆ, ಬಂಟ್ವಾಳದ 11 ಮಂದಿಗೆ, ಪುತ್ತೂರಿನ 7, ಸುಳ್ಯದ ಒಬ್ಬರಿಗೆ, ಬೆಳ್ತಂಗಡಿಯ 16 ಮಂದಿಗೆ, ಇತರ ಜಿಲ್ಲೆಯ 17 ಮಂದಿಗೆ ಸೋಂಕು ದೃಢಪಟ್ಟಿದೆ.