ಬ್ರೇಕಿಂಗ್ ನ್ಯೂಸ್
17-09-25 10:06 pm Mangalore Correspondent ಕರಾವಳಿ
ಮಂಗಳೂರು, ಸೆ.17 : ಮಂಗಳೂರಿನ ಹೆಸರಾಂತ ಹೊಟೇಲ್ ಹಂಪನಕಟ್ಟೆಯ ಪೂಂಜಾ ಇಂಟರ್ನ್ಯಾಶನಲ್ ಇದರ ಮಾಲಕ, ಬಂಟ್ವಾಳ ಮೂಲದ ಪ್ರಭಾಕರ ಪೂಂಜಾ(72) ಅಲ್ಪಕಾಲದ ಅಸೌಖ್ಯದ ಬಳಿಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
40 ವರ್ಷಗಳ ಹಿಂದೆ ಮುಂಬೈನಲ್ಲಿ ಭೂಗತ ಜಗತ್ತಿನ ಸಂಪರ್ಕದಲ್ಲಿದ್ದ ಪ್ರಭಾಕರ ಪೂಂಜಾ ಅಲ್ಲಿನ ಒಬ್ಬ ಡಾನ್ ಗೆ ಕಾರು ಚಾಲಕನಾಗಿದ್ದರು. ಆನಂತರ, 1986ರಲ್ಲಿ ಮಂಗಳೂರಿಗೆ ಬಂದು ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ನಿರ್ಮಾಣ ಮಾಡಿದ್ದರು. ಆಗ ಇದ್ದ ಮೋತಿ ಮಹಲ್ ಬಿಟ್ಟರೆ ಅದ್ದೂರಿ ಮತ್ತು ಬೃಹತ್ ಹೊಟೇಲ್ ಎಂದು ಪೂಂಜಾ ಹೊಟೇಲ್ ಹೆಸರು ಮಾಡಿತ್ತು.


ಆರಂಭದಲ್ಲಿ ಮುಂಬೈ ನಂಟು ಇದ್ದರೂ ಆನಂತರ ಅಲ್ಲಿನ ನಂಟನ್ನು ಬಿಟ್ಟು ಮಂಗಳೂರಿನಲ್ಲೇ ಇದ್ದರು. ಸಣ್ಣ ವಯಸ್ಸಿನಲ್ಲೇ ಮುಂಬೈ ತೆರಳಿದ್ದರಿಂದ ಅವರಿಗೆ ಕನ್ನಡ ಮಾತನಾಡಲು ಬರುತ್ತಿರಲಿಲ್ಲ. ಹಿಂದಿ, ಮರಾಠಿ, ತುಳು ಮಾತ್ರ ಗೊತ್ತಿತ್ತು. ಮುಂಬೈ, ಮಂಗಳೂರಿನ ಹೆಚ್ಚಿನ ಪೊಲೀಸ್ ಅಧಿಕಾರಿಗಳ ಸಂಪರ್ಕ ಹೊಂದಿದ್ದರು. 40 ವರ್ಷಗಳ ಹಿಂದೆ ಮುಂಬೈ ಭೂಗತ ಜಗತ್ತಿನಲ್ಲಿ ಡಾನ್ ಆಗಿದ್ದ ಶರದ್ ಶೆಟ್ಟಿ ಇವರ ಖಾಸಾ ಭಾವನಾಗಿದ್ದು, ಅದೇ ನಂಟಿನಲ್ಲಿ ಮಂಗಳೂರಿನಲ್ಲಿ ಹೊಟೇಲ್ ವ್ಯವಹಾರ ಆರಂಭಿಸಿದ್ದರು. ಮಂಗಳೂರಿಗೆ ಬಂದ ಬಳಿಕವೇ ಅವರಿಗೆ ಮದುವೆಯಾಗಿತ್ತು ಎಂದು ಅವರ ಬಗ್ಗೆ ತಿಳಿದವರು ಹೇಳುತ್ತಾರೆ. ಅವರ ಮಕ್ಕಳು ಈಗ ಹೊಟೇಲ್ ನೋಡಿಕೊಳ್ಳುತ್ತಿದ್ದಾರೆ.
Prabhakar Poonja (72), the well-known owner of Poonja International Hotel in Hampankatta, Mangaluru, passed away at a private hospital on Tuesday after a brief illness. He hailed from Bantwal and was a prominent figure in the city’s hospitality industry.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm