ಬ್ರೇಕಿಂಗ್ ನ್ಯೂಸ್
23-09-25 05:49 pm Mangalore Correspondent ಕರಾವಳಿ
ಪುತ್ತೂರು, ಸೆ.23 : ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡಿ ಪುತ್ತೂರು ವಿಭಾಗಾಧಿಕಾರಿ ಸ್ಟೆಲ್ಲಾ ಮೇರಿಸ್ ಆದೇಶ ಮಾಡಿದ್ದಾರೆ.
ತಿಮರೋಡಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ 32 ಪ್ರಕರಣ ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ಕಾನೂನು ಸುವ್ಯವಸ್ಥೆಗೆ ತೊಂದರೆ ಮಾಡುತ್ತಾರೆ ಎಂಬ ನೆಲೆಯಲ್ಲಿ ಬೆಳ್ತಂಗಡಿ ಪೊಲೀಸರು ಪುತ್ತೂರು ಎಸಿಗೆ ವರದಿ ನೀಡಿದ್ದರು. ವರದಿ ಹಿನ್ನೆಲೆಯಲ್ಲಿ ಪುತ್ತೂರು ವಿಭಾಗಾಧಿಕಾರಿ ಸೆ.20ರಿಂದ ತೊಡಗಿ ಒಂದು ವರ್ಷ ಕಾಲ ಗಡೀಪಾರು ಮಾಡಿ ಆದೇಶ ಮಾಡಿದ್ದಾರೆ.
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ದೂರುದಾರ ಚಿನ್ನಯ್ಯನಿಗೆ ಆಶ್ರಯ ಕೊಟ್ಟಿದ್ದು ಸೇರಿದಂತೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಬಿಎಲ್ ಸಂತೋಷ್ ವಿರುದ್ಧ ಹೇಳಿಕೆ ನೀಡಿದ್ದು ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಐದಾರು ಎಫ್ಐಆರ್ ದಾಖಲಾಗಿತ್ತು. ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆಯಲ್ಲಿ ದಾಖಲಾದ ಸಂತೋಷ್ ವಿರುದ್ಧ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಪೊಲೀಸರು ಅರೆಸ್ಟ್ ಮಾಡಿ ಒಂದು ದಿನ ಜೈಲಿನಲ್ಲಿ ಇರಿಸಿದ್ದರು.
ಮಹೇಶ್ ಶೆಟ್ಟಿ ತಿಮರೋಡಿ ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಅಧ್ಯಕ್ಷರಾಗಿ ಗುರುತಿಸಿಕೊಂಡಿದ್ದು ಬೆಳ್ತಂಗಡಿ ಸೇರಿ ದಕ್ಷಿಣ ಕನ್ನಡ ಜಿಲ್ಲೆಯ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಧರ್ಮಸ್ಥಳ ವಿರುದ್ಧ ನಿರಂತರ ಹೋರಾಟ ನಡೆಸಿಕೊಂಡು ಬಂದಿದ್ದರು. ಸೌಜನ್ಯಾ ಪ್ರಕರಣದಲ್ಲಿ ಆರೋಪಿಯೆಂದು ಗುರುತಿಸಿದ್ದ ಸಂತೋಷ್ ರಾವ್ ನನ್ನು ಖುಲಾಸೆಗೊಳಿಸಿದ ಬಳಿಕ ಇಡೀ ರಾಜ್ಯದಲ್ಲಿ ಪ್ರತಿಭಟನೆ ಕಾರ್ಯಕ್ರಮ ನಡೆಸಿ ಸಾವಿರಾರು ಜನರು ಸೌಜನ್ಯಾ ಪರ ಅಭಿಯಾನ ಮಾಡುವಷ್ಟರ ಮಟ್ಟಿಗೆ ಮಾಡಿದ್ದರು. ಇದೀಗ ಅವರನ್ನೇ ಬೆಳ್ತಂಗಡಿಯಿಂದ ಉತ್ತರ ಕರ್ನಾಟಕದ ಜಿಲ್ಲೆಯೊಂದಕ್ಕೆ ಗಡೀಪಾರು ಮಾಡಿ ಹೋರಾಟ ಹತ್ತಿಕ್ಕುವ ಯತ್ನ ನಡೆದಿದೆ.
ಪುತ್ತೂರು ಎಸಿ ಕೋರ್ಟಿನಲ್ಲಿ ಬಂಟ್ವಾಳ ಡಿವೈಎಸ್ಪಿ ಮತ್ತು ತಿಮರೋಡಿ ಪರ ವಕೀಲರು ಹಾಜರಾಗಿದ್ದರು. ಆದೇಶ ಪ್ರಕಾರ, ಪೊಲೀಸರು ಅಥವಾ ನ್ಯಾಯಾಲಯದ ನೋಟಿಸ್ ಇದ್ದಾಗ ಮಾತ್ರ ದಕ್ಷಿಣ ಕನ್ನಡ ಜಿಲ್ಲೆಯ ಪ್ರವೇಶ ಅನುಮತಿ ಇರುತ್ತದೆ. ಈ ಆದೇಶವನ್ನು ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡುವ ಅವಕಾಶ ಇರುತ್ತದೆ.
Puttur Assistant Commissioner Stella Maris has ordered the externment of Soujanya case activist Mahesh Shetty Timarodi to Manvi taluk of Raichur district for a period of one year. According to police records, as many as 32 cases have been registered against Timarodi at Belthangady police station. Citing the possibility of disturbance to law and order in the future, Belthangady police submitted a report to the Puttur AC, based on which the externment order was issued on September 20.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm