ಬ್ರೇಕಿಂಗ್ ನ್ಯೂಸ್
26-09-25 11:44 am Mangalore Correspondent ಕರಾವಳಿ
ಮಂಗಳೂರು, ಸೆ.26 : ಶ್ರೀ ದುರ್ಗಾಪರಮೇಶ್ವರಿ ದೇಗುಲ ಸೇರಿದಂತೆ ರಾಜ್ಯದ ಯಾವುದೇ ದೇವಸ್ಥಾನಗಳ ನಯಾ ಪೈಸೆಯೂ ಸರಕಾರದ ಖಜಾನೆಗೆ ಸೇರುವುದಿಲ್ಲ, ಬಿಜೆಪಿಯವರಿಗೆ ಇದು ಗೊತ್ತಿದ್ದರೂ, ರಾಜಕಾರಣಕ್ಕಾಗಿ ದೇವಳಗಳ ಹಣ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಲಾಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಬಿಜೆಪಿಯವರು ಪೆಚ್ಚು ಜನಗಳು, ಹಾಗಾಗಿ ದೇವಸ್ಥಾನದ ಪೂಜೆಯ ಮೊತ್ತ ಹೆಚ್ಚಿಸಿ ಗ್ಯಾರಂಟಿಗೆ ಬಳಸಲಾಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದು, ಅವರಿಗೆ ಚೇಷ್ಟೆ ಮಾಡದಿದ್ದರೆ ನಿದ್ದೆಯೇ ಬರುವುದಿಲ್ಲ, ಧಾರ್ಮಿಕ ಪರಿಷತ್ ಕಾಯಿದೆ ಜಾರಿಗೆ ಬಂದು, 22 ವರ್ಷದಲ್ಲಿ ದೇವಸ್ಥಾನಗಳ ಒಂದು ರೂ. ಕೂಡ ಸರಕಾರದ ಖಜಾನೆಗೆ ಬಂದಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
1997ರಲ್ಲಿ ಜೆ.ಎಚ್.ಪಟೇಲ್ ಸಿಎಂ ಆಗಿದ್ದಾಗ ರಾಜ್ಯ ಧಾರ್ಮಿಕ ಪರಿಷತ್ ಎಂಬ ಹೊಸ ಮಸೂದೆ ಮಂಡಿಸಿದ್ದು, 2003ರಲ್ಲಿ ಅಂದಿನ ಸಿಎಂ ಎಸ್.ಎಂ.ಕೃಷ್ಣ ಕಾನೂನು ಮಾಡಿದ್ದರು. ಅದರಂತೆ ರಾಜ್ಯ, ಜಿಲ್ಲಾ ಮಟ್ಟದಲ್ಲಿ ಪರಿಷತ್ ಸದಸ್ಯರ ನೇಮಕ ಮಾಡಲಾಗುತ್ತಿದೆ. ರಾಜ್ಯದಲ್ಲಿ ಎ ಮತ್ತು ಬಿ ಗ್ರೇಡ್ ಒಟ್ಟು 398 ದೇವಸ್ಥಾನಗಳಿದ್ದು, ಎಲ್ಲದಕ್ಕೂ ಅಧ್ಯಕ್ಷ ಮತ್ತು ಎಂಟು ಮಂದಿ ಸದಸ್ಯರು, ಮುಖ್ಯ ಅರ್ಚಕರು ಇರುತ್ತಾರೆ ಎಂದರು.
2003ರಲ್ಲಿ ಕಾಯಿದೆ ಜಾರಿಗೆ ಬಂದಂದಿನಿಂದ ಒಂದು ದೇವಸ್ಥಾನದ ಹಣವನ್ನು ಇನ್ನೊಂದು ದೇವಸ್ಥಾನಕ್ಕೂ ಕೊಡುವಂತಿಲ್ಲ. ಯಾವುದೇ ದೇವಸ್ಥಾನದ ಹಣ ಸರಕಾರದ ಖಜಾನೆಗೂ ಬರುವುದಿಲ್ಲ, ರಾಜ್ಯದಲ್ಲಿ ಬಿಜೆಪಿಯವರೂ ಅಧಿಕಾರದಲ್ಲಿದ್ದರು. ಅವರಿಗೂ ಆ ವಿಷಯ ಗೊತ್ತಿದೆ. ಹಾಗಿದ್ದರೂ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.
ಕಟೀಲು ದೇವಸ್ಥಾನದ ಪೂಜಾ ಶುಲ್ಕ ಹೆಚ್ಚಾದಾಗ, ಬಿಜೆಪಿಯವರು ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಸರಕಾರದ ವಿರುದ್ಧ ಅಪಪ್ರಚಾರ ಆರಂಭಿಸಿದರು. ಕಟೀಲು ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದರೂ, ಅಲ್ಲಿಗೆ ಸರಕಾರ ಕಾರ್ಯ ನಿರ್ವಹಣಾಧಿಕಾರಿ ನೇಮಕ ಮಾಡುವಂತಿಲ್ಲ. ಆಡಳಿತ ಸಂಪೂರ್ಣ ದೇವಸ್ಥಾನದ ಮಂಡಳಿಗೆ ಸೇರಿದ್ದು ಸರಕಾರ ಯಾವುದೇ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ನ್ಯಾಯಾಲಯದ ಆದೇಶವೇ ಇದೆ. ಹಾಗಾಗಿ ಅವರೇ ದರ ಪರಿಷ್ಕರಣೆ ಮಾಡಿದ್ದಾರೆ ಎಂದು ಸಚಿವರು ಸ್ಪಷ್ಟಪಡಿಸಿದರು.
2019ರಿಂದ 2023ರ ವರೆಗಿನ ಬಿಜೆಪಿ ಸರಕಾರದ ಅವಧಿಯಲ್ಲಿ 24 ದೇವಸ್ಥಾನಗಳ ಸೇವಾ ಶುಲ್ಕ ಪರಿಷ್ಕರಿಸಿದ್ದು, ನಾವು ಅದನ್ನು ತಪ್ಪು ಎಂದು ಹೇಳುವುದಿಲ್ಲ. ನಮ್ಮ ಸರಕಾರ ಬಂದ ಮೇಲೆ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ 14 ದೇವಸ್ಥಾನಗಳ ಆಡಳಿತ ಮಂಡಳಿಯು ಕಾರಣ ಗಳನ್ನು ನೀಡಿ, ದರ ಪರಿಷ್ಕರಣೆ ಮಾಡಿಕೊಡಿ ಎಂದು ಮನವಿ ಮಾಡಿದ್ದು, ಇಲಾಖೆ ಆಯುಕ್ತರು ಒಪ್ಪಿಗೆ ಸೂಚಿಸಿದ್ದಾರೆ ಎಂದರು.
2010ರಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳ ಶುಲ್ಕ ಹೆಚ್ಚಿಸುವಾಗ ಬಿಜೆಪಿ ಸರಕಾರವಿತ್ತು. ಈಗ 2025ರಲ್ಲಿ ದರ ಪರಿಷ್ಕರಣೆಗೆ ಅವಕಾಶ ಮಾಡಿಕೊಡಿ ಎಂದು ಆಡಳಿತ ಮಂಡಳಿ ಮನವಿ ಮಾಡುವಾಗ ನಮ್ಮ ಸರಕಾರವಿದೆ. ಹಾಗಂತ ಕಾಂಗ್ರೆಸ್ ಸರಕಾರ ಹೆಚ್ಚು ಮಾಡಿದೆ ಎನ್ನುವುದು ಸರಿಯೇ ಎಂದು ಪ್ರಶ್ನಿಸಿದರು.
Not a single rupee from temple revenues in Karnataka goes into the state treasury, yet BJP leaders are deliberately spreading misinformation that temple money is being diverted for guarantee schemes, said Muzrai Minister Ramalinga Reddy on Thursday.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm