ಬ್ರೇಕಿಂಗ್ ನ್ಯೂಸ್
02-10-25 11:43 am Mangalore Correspondent ಕರಾವಳಿ
ಮಂಗಳೂರು, ಅ.2: ಮಂಗಳೂರು ದಸರಾ ಸಂಭ್ರಮಕ್ಕೆ ತೆರೆಬೀಳಲು ಕೊನೆ ದಿನ ಇರುವಾಗ ಬುಧವಾರ ರಾತ್ರಿ 11 ಗಂಟೆಗೆ ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು.
ದೇವರ ಬಲಿ ಉತ್ಸವದ ಶುಭ ಸಂಧರ್ಭದಲ್ಲಿ ದೇವಸ್ಥಾನ ಪ್ರವೇಶಿಸಿದ ಉಪ ಮುಖ್ಯಮಂತ್ರಿಗಳು, ಸಂಪ್ರದಾಯದಂತೆ ದೇವರ ರಥಾರೋಹಣ ನಂತರ ರಥದ ಚಕ್ರಕ್ಕೆ ತೆಂಗಿನಕಾಯಿ ಒಡೆದು, ಭಕ್ತರೊಂದಿಗೆ ರಥೋತ್ಸವದಲ್ಲಿ ಭಾಗಿಯಾದರು. ದೇವಳ ಸ್ಥಾಪಿಸಿದ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ ಸನ್ನಿಧಿಗೆ ನಮಿಸಿ, ಸರ್ವ ದೇವರ ದರ್ಶನ ಪಡೆದು, ದರ್ಬಾರ್ ಮಂಟಪದಲ್ಲಿ ಶಾರದೆ ಮತ್ತು ನವದುರ್ಗೆಯರಿಗೆ ವಂದಿಸಿದರು. ಶಾರದೆಯ ಸನ್ನಿಧಿಯಲ್ಲಿ ಉಪ ಮುಖ್ಯಮಂತ್ರಿಗಳಿಗೆ ಪ್ರಸಾದ ನೀಡಿ, ದೇವಳದ ವತಿಯಿಂದ ಗೌರವಿಸಲಾಯಿತು.




ಬಳಿಕ ಮಾತನಾಡಿದ ಅವರು, ನಾನು ಇಂದು ಇಲ್ಲಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಆದರೆ, ಸಾಕ್ಷಾತ್ ಶಾರದಾ ಮಾತೆಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಂತಿದೆ. ಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ಈ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿರುವುದು ನನ್ನ ಸೌಭಾಗ್ಯ. ಮಂಗಳೂರು ದಸರಾ ವೈಭವ ಕಂಡು ಬಹಳ ಸಂತೋಷವಾಯಿತು ಎಂದರು.
ದೇವಸ್ಥಾನದ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ ಮಾಲಾರ್ಪಣೆಗೈದು ಸ್ವಾಗತಿಸಿದರು. ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಪೂಜಾರಿ, ಕೃತಿನ್ ಅಮೀನ್, ಕಿಶೋರ್ ದಂಡಕೇರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸದಸ್ಯರಾದ ಹರೀಶ್ ಕುಮಾರ್ (ಮೆಸ್ಕಾಂ ಅಧ್ಯಕ್ಷರು), ಪಿ.ಕೆ.ಗೌರವಿ, ದೀಪಕ್ ಪೂಜಾರಿ ಹಾಗೂ ಸಮಿತಿ ಸದಸ್ಯರು, ಶಾಸಕರಾದ ಅಶೋಕ್ ಕುಮಾರ್ ರೈ, ಎಂ.ಎಲ್.ಸಿ. ಮಂಜುನಾಥ ಭಂಡಾರಿ, ರಕ್ಷಿತ್ ಶಿವರಾಂ ಬೆಳ್ತಂಗಡಿ, ಇನಾಯತ್ ಆಲಿ, ಶ್ರೀನಿವಾಸ್ ಬಿ.ವಿ., ದೇವಳದ ಆಡಳಿತ ಹಾಗೂ ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
On the final evening of the Mangaluru Dasara festivities, Karnataka Deputy Chief Minister D.K. Shivakumar paid a late-night visit to the historic Kudroli Gokarnanatheshwara Temple on Wednesday.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm